Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ...

ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡಿ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ11 Jun 2019 11:23 PM IST
share
ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡಿ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.11: ರಾಜ್ಯದಲ್ಲಿನ ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮುಖ್ಯಮಂತ್ರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.

ಮಂಗಳವಾರ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಲ್ಲಿ ಹೂಳಿನಿಂದಾಗಿ 33 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಕಡಿಮೆಯಾಗಿದ್ದು, ನಷ್ಟವಾದ ಸಾಮರ್ಥ್ಯವನ್ನು ಮರುಭರಿಸಲು ಫ್ಲಡ್ ಫ್ಲೋ ಕೆನಾಲ್ ಮೂಲಕ ನೀರನ್ನು ನವಲಿ ಗ್ರಾಮದ ಹತ್ತಿರ ಸಮತೋಲನಾ ಜಲಾಶಯವನ್ನು ನಿರ್ಮಿಸಿ ನೀರನ್ನು ಶೇಖರಿಸಿ ಬಳಸಲು ಯೋಜಿಸಲಾಗಿದೆ. ಹೂಳು ತೆಗೆಯುವ ಕಾರ್ಯಕ್ಕೆ ಆದ್ಯತೆ ನೀಡಿ ಈ ಸಂಬಂಧ ಕಾರ್ಯಕ್ರಮ ರೂಪಿಸುವಂತೆ ಸೂಚನೆ ನೀಡಿದರು.

ರಾಜ್ಯದಲ್ಲಿ ಎಲ್ಲ ನೀರಾವರಿ ಯೋಜನೆಗಳಿಂದ ಒಟ್ಟು 66.66 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇನ್ನೂ 11.46 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬೇಕಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದ್ದು, ನೈಸರ್ಗಿಕ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸುವ ಜಲಧಾರೆ ಯೋಜನೆಯು ಜಾರಿಗೆ ಬಂದಿದೆ. ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಆದ್ಯತೆ ನೀಡುವ ಕಾರ್ಯಕ್ರಮ ಇದಾಗಿದೆ ಎಂದು ಅವರು ಹೇಳಿದರು.

ಮೇಕೆದಾಟು ಯೋಜನೆಯು ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದ್ದು, ಬೆಂಗಳೂರು ನಗರಕ್ಕೆ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲಭಾಗಗಳಲ್ಲಿ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯ ಮೊದಲನೇ ಹಂತದ ಏತ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಮುಂಗಾರಿನಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡುವ ಕಾರ್ಯಕ್ಕೆ ವೇಗ ನೀಡಬೇಕೆಂದು ಅವರು ತಿಳಿಸಿದರು.

ಕೆ.ಸಿ.ವ್ಯಾಲಿ ಯೋಜನೆಯಿಂದ ಕೋಲಾರ ಭಾಗದ ರೈತರಿಗೆ ಅನುಕೂಲವಾಗಿದ್ದು, ಅಂತರ್‌ಜಲ ಮಟ್ಟ ಹೆಚ್ಚಾಗಿದೆ. ಕೃಷಿ ಬಳಕೆಗೆ ನೀರು ಯೋಗ್ಯವಾಗಿದ್ದು, ನೀರಿನ ಪುನರ್ಬಳಕೆಯ ಇಂತಹ ಯೋಜನೆಗಳಿಗೆ ಆದ್ಯತೆ ನೀಡಬೇಕು. ರಾಜ್ಯದ ಅಭಿವೃದ್ಧಿಗೆ ಪ್ರಮುಖ ಅಂಗವಾಗಿರುವ ಜಲಸಂಪನ್ಮೂಲ ಇಲಾಖೆ ಎರಡು ಆಯವ್ಯಯದಲ್ಲಿ ಒಟ್ಟಾರೆ 37 ಸಾವಿರ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಈ ಅನುದಾನದ ಸದ್ಬಳಕೆ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಅವರು ಹೇಳಿದರು.

ನಿರಂತರ ಬರ ಹಾಗೂ ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿನ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹಂತ ಹಂತವಾಗಿ ಕುಸಿಯುತ್ತಿದೆ. ಇದೇ ಸಮಯದಲ್ಲಿ ಕುಡಿಯುವ ನೀರಿಗೆ ಬೇಡಿಕೆಯೂ ಹೆಚ್ಚಾಗಿದೆ. ಪ್ರತಿ ಗ್ರಾಮ ಮತ್ತು ನಗರಕ್ಕೆ ಕುಡಿಯುವ ನೀರು ಹಾಗೂ ಕೃಷಿಗೆ ನೀರನ್ನು ಒದಗಿಸುವುದು ಪ್ರಥಮ ಆದ್ಯತೆ ಆಗಬೇಕು. ಕುಡಿಯುವ ನೀರು ಹೊರತುಪಡಿಸಿ, ಉಳಿದ ನೀರನ್ನು ದುರ್ಬಳಕೆ ಮಾಡದೆ ಕಡಿಮೆ ನೀರು ಬಳಸಿ ಬೆಳೆಯಬಹುದಾದ ಬೆಳೆಗಳ ಬಗ್ಗೆ ರೈತರಿಗೆ ತಿಳುವಳಿಕೆ ಮೂಡಿಸಬೇಕಿದೆ ಎಂದು ಅವರು ಹೇಳಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ನಮ್ಮ ನೀರಾವರಿ ಸಾಮರ್ಥ್ಯವನ್ನು ತಲುಪಲು ನೀಲನಕ್ಷೆಯನ್ನು ರೂಪಿಸಬೇಕು. ಗುರಿ ಮುಟ್ಟಲು ಕಾರ್ಯನಿರತರಾಗಬೇಕು. ಯೋಜನೆಗಳನ್ನು ರೂಪಿಸುವ ಸಂದರ್ಭದಲ್ಲಿ ದೂರದೃಷ್ಟಿ ಇರಬೇಕು. ಜಲಸಂಪನ್ಮೂಲ ಇಲಾಖೆಯ ಅಧೀನದಲ್ಲಿ ಬರುವ ಪ್ರತಿ ನಿಗಮದ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಿ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು, ಜಲಸಂಪನ್ಮೂಲ ಇಲಾಖೆಯ ಸಂಸದೀಯ ಕಾರ್ಯದರ್ಶಿ ಗೋಪಾಲಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಸುಬ್ರಮಣ್ಯಂ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X