ಜೂ.14: ಸರಕಾರದ ವಿರುದ್ಧ ಬಿಎಸ್‌ವೈ ನೇತೃತ್ವದಲ್ಲಿ ಅಹೋರಾತ್ರಿ ಧರಣಿ

ಬೆಂಗಳೂರು, ಜೂ.13: ಜಿಂದಾಲ್ ಕಂಪೆನಿಗೆ ಭೂಮಿ ಹಸ್ತಾಂತರಿಸುವ ಮೂಲಕ ರಾಜ್ಯದ ಸಮ್ಮಿಶ್ರ ಸರಕಾರ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಹಾಗೂ ಬರ ಪರಿಹಾರ ಕಾರ್ಯಕೈಗೊಳ್ಳುವಲ್ಲಿ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಜೂ.14ರಂದು ಬೆಳಗ್ಗೆ 11 ಗಂಟೆಯಿಂದ ನಗರದ ಆನಂದ್ ರಾವ್ ವೃತ್ತದಲ್ಲಿರುವ ಮೌರ್ಯ ಹೊಟೇಲ್ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯಲಿದೆ.
ಬಿಜೆಪಿ ನಾಯಕರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಶೋಭಾ ಕರಂದ್ಲಾಜೆ, ಎನ್.ರವಿಕುಮಾರ್, ಬಿಜೆಪಿಯ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಸೇರಿದಂತೆ ಇನ್ನಿತರ ಮುಖಂಡರು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
Next Story





