‘ಕೊಡಗು ಅತಿವೃಷ್ಟಿ’ ಮೂಲ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ: ಸಿಎಂಗೆ ಕೇಂದ್ರ ಸಚಿವ ಡಿವಿಎಸ್ ಪತ್ರ

ಬೆಂಗಳೂರು, ಜೂ. 13: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಅತಿವೃಷ್ಟಿ ಪರಿಹಾರ ಕಾರ್ಯಗಳ ಬಗ್ಗೆ ಫಲಾನುಭವಿಗಳಿಗೆ ವಿತರಿಸಿರುವ ಮೂಲಸೌಲಭ್ಯದ ಪೂರ್ಣ ಮಾಹಿತಿ ಒದಗಿಸಿ ಎಂದು ಸಿಎಂ ಕುಮಾರಸ್ವಾಮಿಯವರಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪತ್ರ ಬರೆದಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು, ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಬಿಡುಗಡೆ ಮಾಡಿದ ಅನುದಾನದಲ್ಲಿ ಕಲ್ಪಿಸಿರುವ ಮೂಲ ಸೌಲಭ್ಯಗಳ ಬಗ್ಗೆ ಮಾಹಿತಿ ಕೋರಿದ್ದಾರೆ.
ಅತಿವೃಷ್ಟಿ ಪರಿಹಾರ ಸಂಬಂಧ ಕೇಂದ್ರ ಸರಕಾರದಿಂದ ಪಡೆಯಬಹುದಾದ ಅನುದಾನ ಹಾಗೂ ಇತರ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಲು ಕೇಂದ್ರ ಸಚಿವರ ಸಭೆಯನ್ನು ಕರೆಯಲು ದಿನಾಂಕವನ್ನು ಗೊತ್ತುಪಡಿಸುವಂತೆ ಪತ್ರದಲ್ಲಿ ಸದಾನಂದಗೌಡ ತಿಳಿಸಿದ್ದಾರೆ.
Next Story





