Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರ-ಜನರ ನಡುವೆ ನಿಕಟ ಸಂಪರ್ಕ...

ಸರಕಾರ-ಜನರ ನಡುವೆ ನಿಕಟ ಸಂಪರ್ಕ ಸಾಧಿಸುವುದು ಗ್ರಾಮವಾಸ್ತವ್ಯ ಉದ್ದೇಶ: ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ13 Jun 2019 10:52 PM IST
share
ಸರಕಾರ-ಜನರ ನಡುವೆ ನಿಕಟ ಸಂಪರ್ಕ ಸಾಧಿಸುವುದು ಗ್ರಾಮವಾಸ್ತವ್ಯ ಉದ್ದೇಶ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ. 13: ಗ್ರಾಮ ವಾಸ್ತವ್ಯ ಸಾಂಕೇತಿಕ. ಅದು ಜನಪ್ರಿಯತೆಗಾಗಿ ಮಾಡಿದ ಕಾರ್ಯಕ್ರಮವಲ್ಲ. ಗ್ರಾಮವಾಸ್ತವ್ಯದ ನೈಜ ಉದ್ದೇಶ ಸರಕಾರ ಮತ್ತು ಜನತೆ ನಡುವೆ ನಿಕಟ ಸಂಪರ್ಕ ಸಾಧಿಸುವುದು. ಸ್ಥಳೀಯ ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿಕೊಡುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದಿಲ್ಲಿ ತಿಳಿಸಿದರು.

21.06.2019 ರಂದು ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ ತಾಲೂಕಿನ ಚಂದರಕಿ ಗ್ರಾಮ, 22.06.2019ರಂದು ಅಫ್ಜಲ್ಪುರ ತಾಲೂಕಿನ ಹೆರೂರು-ಬಿ ಗ್ರಾಮಗಳಲ್ಲಿ ಮತ್ತು 26.06.2019ರಂದು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಿಗುಡ್ಡ ಗ್ರಾಮ, 27.06.2019ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಜಳಂಬ ಗ್ರಾಮಗಳಲ್ಲಿ ಆಯೋಜಿಸಿರುವ ಗ್ರಾಮವಾಸ್ತವ್ಯ ಕಾರ್ಯಕ್ರಮಗಳ ಪೂರ್ವಬಾವಿ ತಯಾರಿಗಾಗಿ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ನನ್ನ ವಾಸ್ತವ್ಯಕ್ಕೆ ಪ್ರಾಮುಖ್ಯತೆ ನೀಡಬೇಕಿಲ್ಲ. ಸರಳ ಸಿದ್ಧತೆಗಳಾದರೆ ಸಾಕು ಎಂದ ಅವರು ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನನ್ನ ಗುರಿ. ರಸ್ತೆ, ಕುಡಿಯುವ ನೀರು, ಶಾಲಾ ಕಾಲೇಜುಗಳ ಸುಧಾರಣೆಯ ಬಗೆಗೆ ನನ್ನ ಆದ್ಯತೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿಕೊಡುವುದು ನನ್ನ ಧ್ಯೇಯ ಎಂದು ನುಡಿದರು.

ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಉಸ್ತುವಾರಿ ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಬಂಡೆಪ್ಪಕಾಶೆಂಪೂರ, ರಾಜಶೇಖರ್ ಪಾಟೀಲ್ ಅವರುಗಳು ಭಾಗವಹಿಸಿದ್ದ ಸಭೆಯಲ್ಲಿ ಸಚಿವರುಗಳಾದ ಎಚ್.ಡಿ.ರೇವಣ್ಣ, ಸಾ.ರಾ ಮಹೇಶ್ ಅವರು ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯದಿಂದ ಸ್ಥಳೀಯ ಸಮಸ್ಯೆಗಳ ಪರಿಹಾರವಷ್ಟೇ ಅಲ್ಲದೆ ಆಯಾ ಜಿಲ್ಲೆಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಇದೊಂದು ಅತ್ಯುತ್ತಮ ಬೆಳವಣಿಗೆ ಎಂಬ ಅಭಿಪ್ರಾಯವನ್ನು ಸಚಿವರು ವ್ಯಕ್ತಪಡಿಸಿದರು. ಸಂಬಂಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪ್ರಮುಖ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯಕಾರ್ಯದರ್ಶಿ ರಮಣರೆಡ್ಡಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X