ಬಂಟ್ವಾಳ: ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಜೂ.14: ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ವಾಮದಪದವು, ಮಣಿನಾಲ್ಕೂರು ಹಾಗೂ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ವಾಮದಪದವು, ಚೆನ್ನೈತ್ತೋಡಿ, ಬಿ.ಸಿ.ರೋಡು ಮತ್ತು ವಿಟ್ಲ ಇಲ್ಲಿಗೆ ಸಾಮಾನ್ಯ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲಾಗುವುದು.
ಅರ್ಹ ವಿದ್ಯಾರ್ಥಿಗಳಿಂದ http://karepass.cgg.gov.in ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು ಆನ್‌ಲೈನ್ ಅರ್ಜಿಯ ಪ್ರತಿ ಹಾಗೂ ಅಪ್‌ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಡೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಂಟ್ವಾಳ ಅಥವಾ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಜು.12ರೊಳಗೆ ಸಲ್ಲಿಸಬೇಕು ಎಂದು ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಪ್ರಕಟನೆ ತಿಳಿಸಿದೆ.







