Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಸಭೆ:...

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಸಭೆ: 50 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ

ಶಾಸಕರಿಗೆ 1 ಕೋಟಿ ರೂ. ಅನುದಾನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Jun 2019 11:16 PM IST
share
ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ ಸಭೆ: 50 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ

ಶಿವಮೊಗ್ಗ, ಜೂ. 14: ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೊಳಪಡುವ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗುವ ಸುಮಾರು 50 ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ರಾಜೇಗೌಡರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸರ್ವಾನುಮತದ ಅನುಮೋದನೆ ನೀಡಲಾಯಿತು. 

ನಗರದ ಎಂಎಡಿಬಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಂಡಳಿಯ ಪ್ರಸಕ್ತ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಇದೇ ವೇಳೆ ಪ್ರಾಧಿಕಾರದಿಂದ ಕೈಗೊಳ್ಳುವ ಕಾಮಗಾರಿ ಹಾಗೂ ಸಮಸ್ಯೆಗಳ ಪರಿಹಾರದ ಕುರಿತಂತೆ ಚರ್ಚಿಸಲಾಯಿತು. 
'ಪ್ರಸ್ತುತ ಸಂದರ್ಭದಲ್ಲಿ ಪ್ರಾಧಿಕಾರದ ವ್ಯಾಪ್ತಿಗೊಳಪಡುವ ಪ್ರತಿ ವಿಧಾನ ಪರಿಷತ್ ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕರಿಗೆ, ತಲಾ 1 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ ಅನುದಾನ ಮಂಜೂರಾಗಿದೆ' ಎಂದು ಡಿ.ಟಿ.ರಾಜೇಗೌಡ ತಿಳಿಸಿದರು. 

'ಮಂಡಳಿಯು 13 ಜಿಲ್ಲೆಗಳ ವಿಶಾಲ ವ್ಯಾಪ್ತಿ ಹೊಂದಿದೆ. ಜಿಲ್ಲಾ ಪಂಚಾಯತ್ ಗಳಿಗೆ ಬಿಡುಗಡೆಯಾಗುವ ಅನುದಾನವೂ ಕಡಿಮೆಯಾಗಿದೆ. ಆದ್ದರಿಂದ ಪ್ರಾಧಿಕಾರದ ವತಿಯಿಂದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೂ ಅನುದಾನ ಬಿಡುಗಡೆಗೊಳಿಸಬೇಕು' ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಒತ್ತಾಯಿಸಿದರು. ಈ ಬೇಡಿಕೆಯನ್ನು ಸಭೆಯ ನಡಾವಳಿಯಲ್ಲಿ ಸೇರಿಸಲಾಗುವುದು. ಸರ್ಕಾರದ ಗಮನ ಸೆಳೆಯಲಾಗುವುದು. ಅಗತ್ಯವಿದ್ದಲ್ಲಿ ಅಧ್ಯಕ್ಷರ ವಿವೇಚನಾ ನಿಧಿ ಬಳಕೆಯ ಬಗ್ಗೆಯೂ ಚಿಂತನೆ ನಡೆಸಲಾಗುವುದು ಡಿ.ಟಿ.ರಾಜೇಗೌಡ ಹೇಳಿದರು. 

ಸರ್ಕಾರಕ್ಕೆ ಸಲ್ಲಿಸಲಾಗಿದ್ದ 70 ಕೋ. ರೂ.ಗಳ ಪ್ರಸ್ತಾವನೆಯ ಪೈಕಿ ಕಳೆದ ಬಜೆಟ್‍ನಲ್ಲಿ 27.42 ಕೋ. ರೂ. ಕಾಮಗಾರಿಗಳಿಗೆ ಅನುಮೋದನೆ ದೊರೆತಿದೆ. ಈ ಹಿಂದೆ ಬಳಕೆಯಾಗದೆ ಉಳಿದ 23 ಕೋ. ರೂ. ಅನುದಾನಕ್ಕೆ 300 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.

ಸಿಎಂಗೆ ಮನವಿ: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವಾನ್ ಡಿ'ಸೋಜರವರು ಮಾತನಾಡಿ, 'ಮಂಡಳಿಯು ವಿಶಾಲವಾದ ವ್ಯಾಪ್ತಿ ಹೊಂದಿದೆ. ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯಿಂದ ಹಾಗೂ ಪ್ರಾಕೃತಿಕ ವಿಕೋಪಗಳಿಗೆ ಗೋಡೆ ಕುಸಿತ, ರಸ್ತೆ ದುರಸ್ತಿ, ಕಾಲುಸಂಕ ನಿರ್ಮಾಣ, ಕೆರೆ-ಕಟ್ಟೆ-ಕಾಲುವೆಗಳ ದುರಸ್ತಿಗೆ ಅನುದಾನದ ಅಗತ್ಯವಿದೆ. ಮಂಡಳಿಯು ಕೈಗೊಳ್ಳುವ ಕಾಮಗಾರಿ ಹಾಗೂ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗುತ್ತಿರುವ ಅನುದಾನ ಬಹಳ ಕಡಿಮೆ. ಆದ್ದರಿಂದ ಇನ್ನಷ್ಟು ಹೆಚ್ಚಿನ ಮೊತ್ತದ ಅನುದಾನ ಅಗತ್ಯವಿದ್ದು, ಅದಕ್ಕಾಗಿ ಪ್ರತ್ಯೇಕ ಕ್ರಿಯಾಯೋಜನೆ ಸಲ್ಲಿಸಿ, ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಬೇಕಾಗಿದೆ ಎಂದರು. ಇದಕ್ಕೆ ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ಸದಸ್ಯರು ಸಮ್ಮತಿ ಸೂಚಿಸಿದರು. 

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ಕೆಲವು ಜಿಲ್ಲೆಗಳಿಗೆ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾತ್ರವಲ್ಲದೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಹೆಚ್ಚಿನ ಅನುದಾನ ಲಭ್ಯವಾಗುತ್ತಿದೆ. ಇದರಿಂದ ಮಲೆನಾಡಿನ ಜಿಲ್ಲೆಗಳಿಗೆ ಅನುದಾನದ ಕೊರತೆ ಕಾಣುತ್ತಿದೆ. ಇದನ್ನು ಸರಿದೂಗಿಸಿ ಮಲೆನಾಡಿನ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ಕಾಯ್ದಿರಿಸುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಶಾಸಕರಾದ ಕೆ.ಬಿ.ಅಶೋಕ್‍ ನಾಯ್ಕ್, ಡಿ.ಎಸ್.ಸುರೇಶ್, ಸಿ.ಎಂ.ನಿಂಬಣ್ಣನವರ್, ಹರೀಶ್ ಪೂಂಜಾ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಧರ್ಮಸೇನ, ಶ್ರೀಕಾಂತ್ ಎಲ್. ಆಡಳಿತಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು.

25 ಸಂವತ್ಸರ ಪೂರೈಸಿದ ಮಂಡಳಿ
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಚಟುವಟಿಕೆಗಳು ಕಾರ್ಯಾರಂಭಗೊಂಡು ಸುಮಾರು 25ಸಂವತ್ಸರಗಳು ಪೂರ್ಣಗೊಳ್ಳುತ್ತಿರುವ ಶುಭ ಸಂದರ್ಭದ ಸವಿನೆನಪಿಗಾಗಿ ರಜತ ಮಹೋತ್ಸವ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸಲು ಉದ್ದೇಶಿಸಲಾಗಿದೆ. ಆದ್ದರಿಂದ ಅದಕ್ಕೆ ಪೂರಕವಾಗಿ ಎಲ್ಲಾ ಸದಸ್ಯ ಅಗತ್ಯ ಸಲಹೆ-ಸಹಕಾರ ನೀಡುವಂತೆ' ಮಂಡಳಿಯ ಅಧ್ಯಕ್ಷ ರಾಜೇಗೌಡರವರು ಸದಸ್ಯರಿಗೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X