Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ...

ಭಟ್ಕಳ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಈಶ್ವರ ನಾಯ್ಕ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ14 Jun 2019 11:42 PM IST
share
ಭಟ್ಕಳ: ರೋಟರಿ ಕ್ಲಬ್ ನೂತನ ಅಧ್ಯಕ್ಷರಾಗಿ ಈಶ್ವರ ನಾಯ್ಕ ಪದಗ್ರಹಣ

ಭಟ್ಕಳ: ರೋಟರಿ ಕ್ಲಬ್ ಭಟ್ಕಳ ಇದರ ನೂತನ ಅಧ್ಯಕ್ಷರಾಗಿ ಈಶ್ವರ ನಾಯ್ಕ ಹಾಗೂ ಕಾರ್ಯದರ್ಶಿಯಾಗಿ ಶ್ರೀನಿವಾಸ ಪಡಿಯಾರ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು.

ಗುರುವಾರ ಸಂಜೆ ಇಲ್ಲಿನ ರಬಿತಾ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ರೋಟರಿ ಗವರ್ನರ್ ಡಾ.ಮಾಸೂರ್‍ಕರ್, ತನಗಾಗಿ ಹಾಗೂ ತನ್ನ ಕುಟುಂಬಕ್ಕೆ ಸೀಮಿತರಾಗದೇ ಪರರಿಗಾಗಿ ಬದುಕುವವರು ಜನರ ಮನಸ್ಸಿನಲ್ಲಿ ಹೆಚ್ಚು ಕಾಲ ನೆಲೆಸಿರುತ್ತಾರೆ. ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಾ ಹೋಗುತ್ತಿದ್ದರೂ ಸಂಪನ್ಮೂಲಗಳ ಗಾತ್ರ ಬದಲಾಗಿಲ್ಲ. ಭಾರತ ವಿಶ್ವ ಗುರುವಾಗಲು ದೇಶದ ಜನರ ಮನೋಭಾವನೆ ಬದಲಾಗಬೇಕಿದೆ. ಯುವ ಜನರು ಈ ಬಗ್ಗೆ ಹೆಚ್ಚು ಚಿಂತನೆ ನಡೆಸಬೇಕಾಗಿದೆ ಎಂದರು.

ಕರ್ನಾಟಕ ವಿದ್ಯುಚ್ಛಕ್ತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್, 2 ದಶಕದ ಹಿಂದಿನ ಭಟ್ಕಳಕ್ಕೂ ಈಗಿನ ಭಟ್ಕಳಕ್ಕೂ ಅಂತಹ ವ್ಯತ್ಯಾಸ ಕಂಡು ಬರುವುದಿಲ್ಲ. ಜನರ ಭಾವನೆ, ಪ್ರೀತಿ ಎಲ್ಲವೂ ಹಾಗೆಯೇ ಉಳಿದುಕೊಂಡಿದೆ. ಭಟ್ಕಳ ರೋಟರಿ ಕ್ಲಬ್ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಆಶಯ ವ್ಯಕ್ತಪಡಿಸಿದರು.

ನೂತನ ಅಧ್ಯಕ್ಷ ಈಶ್ವರ ನಾಯ್ಕ ಮಾತನಾಡಿ, ಭಟ್ಕಳದಲ್ಲಿ ರೋಟರಿ ಕ್ಲಬ್ ಬಹಳಷ್ಟು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದೆ. ಡಯಾಲಿಸಿಸ್ ಸೆಂಟರ್, ಶಾಲೆ ಅಂಗನವಾಡಿಗಳಿಗೆ ಪೀಟೋಪಕರಣಗಳ ಪೂರೈಕೆ ಇದರಲ್ಲಿ ಪ್ರಮುಖವಾಗಿವೆ. ಎಲ್ಲರ ಸಹಕಾರದೊಂದಿಗೆ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ರೋಟರಿ ಉಪ ಗವರ್ನರ್ ಜಿ.ಎಸ್.ಹೆಗಡೆ, ಜೂನ್ ತಿಂಗಳ ರೋಟರಿ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ರೋಟರಿ ನಿಕಟಪೂರ್ವ ಅಧ್ಯಕ್ಷ ರಾಜೇಶ ನಾಯಕ್, ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ನಂಬಿಯಾರ್ ವರದಿ ವಾಚಿಸಿದರು. ರೋಟರಿಯನ್ ಗೌರೀಶ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ ಪಡಿಯಾರ ವಂದಿಸಿದರು. ರೋಟರಿ ಕ್ಲಬ್ ವತಿಯಿಂದ ಆಯೋಜಿಸಲಾದ ವಿವಿಧ ಸ್ಪರ್ಧಾ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X