Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಒಂದು ರಾಷ್ಟ್ರ ಒಂದು ಚುನಾವಣೆ’: ಎಲ್ಲ...

‘ಒಂದು ರಾಷ್ಟ್ರ ಒಂದು ಚುನಾವಣೆ’: ಎಲ್ಲ ಪಕ್ಷಗಳ ಅಧ್ಯಕ್ಷರ ಜೊತೆ ಮೋದಿ ಸಭೆ

ವಾರ್ತಾಭಾರತಿವಾರ್ತಾಭಾರತಿ16 Jun 2019 8:53 PM IST
share
‘ಒಂದು ರಾಷ್ಟ್ರ ಒಂದು ಚುನಾವಣೆ’: ಎಲ್ಲ ಪಕ್ಷಗಳ ಅಧ್ಯಕ್ಷರ ಜೊತೆ ಮೋದಿ ಸಭೆ

 ಹೊಸದಿಲ್ಲಿ,ಜೂ.16: ಸಂಸತ್ತಿನ ಮುಂಗಡಪತ್ರ ಅಧಿವೇಶನದ ಆರಂಭದ ಮುನ್ನಾದಿನವಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿ ಸರ್ವಪಕ್ಷಗಳ ಸಭೆಯನ್ನು ನಡೆಸಿದರು. ಕೃಷಿ ಸಂಕಷ್ಟ,ನಿರುದ್ಯೋಗ ಮತ್ತು ಬರ ಸೇರಿದಂತೆ ಹಲವಾರು ವಿಷಯಗಳ ಮೇಲೆ ಚರ್ಚೆಗೆ ಪ್ರತಿಪಕ್ಷವು ಆಗ್ರಹಿಸಿತು. ನೂತನವಾಗಿ ರಚನೆಯಾಗಿರುವ 17ನೇ ಲೋಕಸಭೆಯ ಮೊದಲ ಅಧಿವೇಶನ ಜೂ.17ರಿಂದ ಜು.26ರವರೆಗೆ ನಡೆಯಲಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಝಾದ್,ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಮತ್ತು ಟಿಎಂಸಿ ನಾಯಕ ಡೆರೆಕ್ ಒ’ಬ್ರಿಯಾನ್ ಸೇರಿದಂತೆ ಎಲ್ಲ ಪಕ್ಷಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಮಸೂದೆಗಳನ್ನು ಬೆಂಬಲಿಸುವಂತೆ ಪ್ರಧಾನಿ ಕೋರಿಕೆಗೆ ಸ್ಪಂದಿಸಿದ ಆಝಾದ್,ಜನರ ಹಿತಾಸಕ್ತಿಯಲ್ಲಿರುವ ಮಸೂದೆಗಳಿಗೆ ವಿರೋಧವಿರುವುದಿಲ್ಲ ಎಂದು ಭರವಸೆ ನೀಡಿದರು.

ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಶೀಘ್ರವೇ ಚುನಾವಣೆಗಳನ್ನು ನಡೆಸುವಂತೆ ಆಝಾದ್ ಸೂಚಿಸಿದರು. ಲೋಕಸಭಾ ಚುನಾವಣೆಗಳ ಜೊತೆಯಲ್ಲಿಯೇ ವಿಧಾನಸಭಾ ಚುನಾವಣೆಗಳನ್ನೇಕೆ ನಡೆಸಲಿಲ್ಲ ಎಂದು ಪ್ರಶ್ನಿಸಿದ ಅವರು,ಕೇಂದ್ರವು ರಾಜ್ಯಪಾಲರ ಆಡಳಿತದ ಮೂಲಕವೇ ರಾಜ್ಯವನ್ನು ನಡೆಸಲು ಬಯಸಿರುವಂತಿದೆ ಎಂದು ಆರೋಪಿಸಿದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಸದನದಲ್ಲಿ ತಕ್ಷಣವೇ ಮಂಡಿಸುವಂತೆ ಒ’ಬ್ರಿಯೆನ್ ಆಗ್ರಹಿಸಿದರು.

ಸಭೆಯ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಅವರು, ಪ್ರತಿಪಕ್ಷಗಳು 16ನೇ ಲೋಕಸಭೆಯ ಕೊನೆಯ ಎರಡು ವರ್ಷಗಳ ಕಲಾಪಗಳನ್ನು ವ್ಯರ್ಥಗೊಳಿಸಿದ ಹಿನ್ನೆಲೆಯಲ್ಲಿ ಸಂಸದರಿಗೆ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಸಾಧ್ಯವೇ ಎಂಬ ಬಗ್ಗೆ ಆತ್ಮಪರೀಕ್ಷೆ ಮಾಡಿಕೊಳ್ಳುವಂತೆ ಮೋದಿ ಅವರು ಎಲ್ಲ ಪಕ್ಷಗಳ ನಾಯಕರನ್ನು ಒತ್ತಾಯಿಸಿದರು ಎಂದು ತಿಳಿಸಿದರು.

ಸಂಸತ್ತಿನ ಉಭಯ ಸದನಗಳ ಕಲಾಪಗಳು ಸುಗಮವಾಗಿ ನಡೆಯಲು ಎಲ್ಲ ಪಕ್ಷಗಳ,ವಿಶೇಷವಾಗಿ ಪ್ರತಿಪಕ್ಷಗಳ ಸಹಕಾರವನ್ನು ಸರಕಾರವು ಕೋರಿದೆ ಎಂದೂ ಜೋಶಿ ತಿಳಿಸಿದರು.

‘ಒಂದು ರಾಷ್ಟ್ರ,ಒಂದು ಚುನಾವಣೆ ’ಕುರಿತು ಚರ್ಚೆಗೆ ಜೂ.19ರಂದು ಎಲ್ಲ ಪಕ್ಷಾಧ್ಯಕ್ಷರ ಸಭೆ

‘ಒಂದು ರಾಷ್ಟ್ರ,ಒಂದು ಚುನಾವಣೆ ’ವಿಷಯವನ್ನು ಚರ್ಚಿಸಲು ಪ್ರಧಾನಿ ಮೋದಿಯವರು ಜೂ.19ರಂದು ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಪ್ರಾತಿನಿಧ್ಯ ಹೊಂದಿರುವ ಎಲ್ಲ ಪಕ್ಷಗಳ ಅಧ್ಯಕ್ಷರ ಸಭೆಯೊಂದನ್ನು ಕರೆದಿದ್ದಾರೆ ಎಂದು ಜೋಶಿ ತಿಳಿಸಿದರು.

ಮೋದಿಯವರು ಜೂ.20ರಂದು ಸಂಸದರ ಸಭೆಯೊಂದನ್ನೂ ಕರೆದಿದ್ದು,2022ರಲ್ಲಿ ಭಾರತದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಈ ವರ್ಷ ಮಹಾತ್ಮಾ ಗಾಂಧಿಯವರ 150ನೇ ಜಯಂತಿಯ ಆಚರಣೆ ಇತ್ಯಾದಿಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X