Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೂಕ್ಷ್ಮ ಪ್ರದೇಶಗಳ ಜನರನ್ನು...

ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಿ: ಕೊಡಗು ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jun 2019 11:37 PM IST
share
ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಿ: ಕೊಡಗು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜೂ.16: ಜಿಲ್ಲೆಯಲ್ಲಿ ಜೂ.20ರಿಂದ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು. ಜೂ.19 ರಿಂದ ಸಕಲ ಸನ್ನದ್ಧರಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆ ದೃಷ್ಟಿಯಿಂದ ಪುರ್ನವಸತಿ ಕೆಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ  ಕಚೇರಿ ಸಭಾಂಗಣದಲ್ಲಿ ನಡೆದ ತುರ್ತು ಪರಿಹಾರ ಕಾರ್ಯ ಹಾಗೂ ಮುಂಜಾಗ್ರತಾ ಕ್ರಮಗಳ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ನೈರ್ಸಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮಾಹಿತಿಯ ಅನ್ವಯ ಜೂ.20 ರಿಂದ ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮುಂಜಾಗ್ರತಾ ಕ್ರಮವಾಗಿ ಮಳೆಗಾಲ ಮುಗಿಯುವವರೆಗೆ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಪುನರ್ವಸತಿ ಸಂಬಂಧ ಪ್ರಥಮ ಹಾಗೂ ದ್ವಿತೀಯ ಪಟ್ಟಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಮುಂದಿನ ಮೂರು ತಿಂಗಳಿಗೆ ಅವಶ್ಯವಿರುವ ಮನೆ ಬಾಡಿಗೆ ಹಣವನ್ನು ಎರಡು ದಿನಗಳಲ್ಲಿ ಪಾವತಿಸಲು ಕ್ರಮಕೈಗೊಂಡು ವರದಿ ನಿಡುವಂತೆ ಉಪವಿಭಾಗಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈಗಾಗಲೇ ಗುರುತಿಸಿರುವ ಪ್ರಕೃತಿ ವಿಕೋಪ ಸಂಭವಿಸಿದ ಪ್ರದೇಶದಲ್ಲಿನ ಜನರಿಗೆ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ವತಿಯಿಂದ ತೆರೆಯಲಾಗುವ ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸುವುದು ಹಾಗೂ ಈ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿ ನಿಲಯಗಳಲ್ಲಿ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.

ಮಳೆಯಿಂದ ಉಂಟಾಗಬಹುದಾದ ಅನಾಹುತಗಳನ್ನು ಸಮರ್ಥವಾಗಿ ತಡೆಯುವ ನಿಟ್ಟಿನಲ್ಲಿ ಅಗತ್ಯವಿರುವ ಜೀವ ರಕ್ಷಕ ಜಾಕೆಟ್, ರೈನ್‍ಕೋಟ್, ಟಾರ್ಪಲ್‍ಗಳ ದಾಸ್ತಾನು ಮಾಡಿಕೊಂಡು ಅಗತ್ಯ ಬಿದ್ದಲ್ಲಿ ಬಳಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂ ಸರ್ವೇಕ್ಷಣಾ ಇಲಾಖೆ ಗುರುತಿಸಿರುವ ಸೂಕ್ಷ್ಮ ಪ್ರದೇಶಗಳಲ್ಲಿನ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ರೋಗಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಕೃತಿ ವಿಕೋಪದಿಂದ ಸಂಭವಿಸಬಹುದಾದ ಅನಾಹುತಗಳನ್ನು ಸಮರ್ಥವಾಗಿ ನಿರ್ವಹಿಸಲು ನೋಡಲ್ ಅಧಿಕಾರಿಗಳು ತೆಗೆದುಕೊಳ್ಳುವ ನಿರ್ಧಾರವು ಸಾರ್ವಜನಿಕರಿಗೆ ಅನುಕೂಲಕರವಾಗಿರಬೇಕು. ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಬರೆ ಕುಸಿತ ಸಂಭವಿಸಬಹುದಾದ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾದಾಗ ತೆರವು ಕಾರ್ಯಾಚರಣೆ ನಡೆಸಲು ಅವಶ್ಯವಿರುವ ಹಿಟಾಚಿ, ಜೆಸಿಬಿಗಳನ್ನು ಸನ್ನದ್ಧವಾಗಿಟ್ಟುಕೊಂಡು ಕಾರ್ಯಾಚರಣೆಗೆ ಬಳಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ ಮಾತನಾಡಿ,  ಈಗಾಗಲೇ 42 ಪುನರ್ವಸತಿ ಕೇಂದ್ರಗಳ ನಿರ್ವಹಣೆಗೆ ಬೇಕಾಗಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ನೋಡಲ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರಿಸಲು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ತುರ್ತು ಸೇವೆಗಳಿಗೆ ಅವಶ್ಯವಿರುವ ವಾಹನಗಳನ್ನು ಸನ್ನದ್ಧವಾಗಿರಿಸಿಕೊಳ್ಳಲು ಸೂಚನೆ ನೀಡಿದರು.

ಸಾರ್ವಜನಿಕರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳ ಕುರಿತ ಭಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅನಾವರಣಗೊಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಪುನರ್ವಸತಿ ವಿಶೇಷ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಜಿ.ಪಂ ಯೋಜನಾ ನಿರ್ದೇಶಕ  ಗುಡೂರು ಭೀಮಸೇನ್, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಭೂ ದಾಖಲೆಗಳ  ಸಹಾಯಕ ನಿರ್ದೇಶಕ ಶಂಸುದ್ದೀನ್, ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X