Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ...

ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ ಮಾಹಿತಿ ನೀಡಿ

ವಾರ್ತಾಭಾರತಿವಾರ್ತಾಭಾರತಿ17 Jun 2019 8:33 PM IST
share
ಮಕ್ಕಳ ಸಹಾಯವಾಣಿ ಜಾಗೃತಿ ಕಾರ್ಯಕ್ರಮಗಳ ಮಾಹಿತಿ ನೀಡಿ

ಉಡುಪಿ, ಜೂ.17: ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯದಿಂದ ರಕ್ಷಿಸುವ ಸಲುವಾಗಿ ಮತ್ತು ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಮಾಹಿತಿಯನ್ನು 10 ದಿನಗಳೊಳಗೆ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿ ಅವರು, ಮಕ್ಕಳ ಸಹಾಯವಾಣಿ ಕುರಿತು ಜಿಲ್ಲೆಯಾದ್ಯಂತ ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು. ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಗೋಡೆಬರಹ, ಪೋಸ್ಟರ್‌ಗಳನ್ನು ಅಂಟಿಸುವುದು, ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು, ಸಾರಿಗೆ ಸಂಪರ್ಕ ವ್ಯವಸ್ಥೆಗಳಾದ ಆಟೋರಿಕ್ಷಾ, ಬಸ್‌ಗಳಲ್ಲಿ ಮಕ್ಕಳ ಸಹಾಯವಾಣಿಯ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬಹುದು ಎಂದರು.

ಪ್ರತೀ ತಿಂಗಳು ಗ್ರಾಮ ಮಟ್ಟದಲ್ಲಿ ಮಕ್ಕಳ ಸಭೆಯನ್ನು ಮಾಡಿ, ಸಹಾಯವಾಣಿಗೆ ಬಂದಂತಹ ಕರೆಗಳ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ಮಾಡಬೇಕು. ಬಳಿಕ ಈ ಬಗ್ಗೆ ತಾಲೂಕು ಮಟ್ಟದಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಬೇಕು ಎಂದರು. ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಜೊತೆಯಾಗಿ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಆರೋಗ್ಯ ಇಲಾಖೆ ಮತ್ತು ಸಂಬಂಧಿಸಿದ ಇತರ ಇಲಾಖೆಗಳು ಸೇರಿದಂತೆ ಯಾವುದೇ ಇಲಾಖೆಯ ಕಾರ್ಯಕ್ರಮಗಳಲ್ಲಿ ಮಕ್ಕಳ ಸಹಾಯವಾಣಿಯ ಲೋಗೋವನ್ನು ಬಳಸಬೇಕು. ಗ್ರಾಮ ಮಟ್ಟದಲ್ಲಿ ಒಂದೊಂದು ಪ್ರದೇಶದಲ್ಲಿ ಓರ್ವ ಮಕ್ಕಳ ನಾಯಕನನ್ನು ಗುರುತಿಸಿ ಮಕ್ಕಳ ಸಹಾಯವಾಣಿಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಮಾತನಾಡಿ, ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಯಾವುದೇ ಪ್ರಕರಣದಲ್ಲಿ ಮಕ್ಕಳ ಹೇಳಿಕೆಗೆ ಆದ್ಯತೆ ನೀಡಿ ಸಮಗ್ರ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಉಡುಪಿ ಜಿಲ್ಲಾ ಸಹಾಯವಾಣಿಯ ಕಾರ್ಯಕ್ಷಮತೆ ಕೋ-ಆರ್ಡಿನೇಟರ್ ಅರವಿಂದ್ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಮಾರ್ಚ್‌ನಿಂದ ಈವರೆಗೆ 22 ಕರೆಗಳು ಬಂದಿದ್ದು, ಎಲ್ಲಾ ಕರೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ಸಹಾಯವಾಣಿ ಕಾರ್ಯ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಸೌಲ್ಯಗಳನ್ನು ಒದಗಿಸುವಂತೆ ಮತ್ತು ಗ್ರಾಮ ಮಟ್ಟದಲ್ಲಿ ನಡೆಯುವ ಗ್ರಾಮಸಭೆಗೆ ಚೈಲ್ಡ್‌ಲೈನ್ ಸಂಯೋಜಕರನ್ನು ಆಹ್ವಾನಿಸುವುದು, ಮಕ್ಕಳ ಸಹಾಯವಾಣಿ ಫಲಕವನ್ನು ಪ್ರದರ್ಶಿಸಲು ನಿರ್ದೇಶನ ನೀಡುವುದು, ಮಕ್ಕಳ ರಕ್ಷಣಾ ನೀತಿ ಯನ್ನು ಎಲ್ಲಾ ಶಾಲೆಗಳಲ್ಲಿ ವ್ಯವಸ್ಥಿತವಾಗಿ ಅಳವಡಿಸಿಕೊಳ್ಳಲು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಶಾಲಾ ಕಾಲೇಜುಗಳಲ್ಲಿ ಚೈಲ್ಡ್‌ಲೈನ್ 1098, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸುವುದು, ಮಕ್ಕಳ ರಕ್ಷಣೆ ಮತ್ತು ಪೋಷಣೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಗತ್ಯ ಸಹಕಾರ ನೀಡಬೇಕು.  ಸಂಬಂದಪಟ್ಟ ಇಲಾಖೆಗಳು ಪ್ರತೀ ತಿಂಗಳಿಗೊಮ್ಮೆ ಕಡ್ಡಾಯವಾಗಿ ಭಿಕ್ಷಾಟನೆ ಯಲ್ಲಿ ನಿರತರಾದವರ ರಕ್ಷಣಾ ಕಾರ್ಯಚರಣೆ ಹಮ್ಮಿಕೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಲೇಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಚೈಲ್ಡ್ ಇಂಡಿಯಾ ಪೌಂಡೇಶನ್ ಚೆನೈನ ಹಿರಿಯ ಕಾರ್ಯಕ್ರಮ ಸಂಯೋಜಕಿ ಚಿತ್ರಾ ಆಂಚನ್, ಚೈಲ್ಡ್‌ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ, ಮಕ್ಕಳ ಕಲ್ಯಾಣ ಸಮಿತಿ ಮಾಜಿ ಅಧ್ಯಕ್ಷ ನಾರಾಯಣ ಬಿ.ಕೆ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಸ್ವಯಂ ಸೇವಾ ಸಮಿತಿಯ ಸದಸ್ಯು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X