Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರಪತಿ ಚಹಾಕೂಟದ ನಿರೀಕ್ಷೆಯಲ್ಲಿ...

ರಾಷ್ಟ್ರಪತಿ ಚಹಾಕೂಟದ ನಿರೀಕ್ಷೆಯಲ್ಲಿ ಬಂಟ್ವಾಳದ ಸ್ವಾತಂತ್ರ್ಯ ಹೋರಾಟಗಾರ

ವಾರ್ತಾಭಾರತಿವಾರ್ತಾಭಾರತಿ18 Jun 2019 10:18 PM IST
share
ರಾಷ್ಟ್ರಪತಿ ಚಹಾಕೂಟದ ನಿರೀಕ್ಷೆಯಲ್ಲಿ ಬಂಟ್ವಾಳದ ಸ್ವಾತಂತ್ರ್ಯ ಹೋರಾಟಗಾರ

ಬಂಟ್ವಾಳ : ಕ್ವಿಟ್ ಇಂಡಿಯಾ ಚಳುವಳಿಯ ಅಂಗವಾಗಿ ಪ್ರತೀವರ್ಷ ದೆಹಲಿಯಲ್ಲಿ ಏರ್ಪಾಡುಗೊಳ್ಳುತ್ತಿರುವ ರಾಷ್ಟ್ರಪತಿ ಅವರ ಚಹಾ ಕೂಟದಲ್ಲಿ ಪಾಲ್ಗೊಳ್ಳಬೇಕೆಂಬ ಆಸೆಯಿಂದ, ಕಳೆದ ನಾಲ್ಕೈದು ವರ್ಷಗಳಿಂದ ಬಂಟ್ವಾಳ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರೊಬ್ಬರು ಕಾತರದಿಂದ ಕಾಯುತ್ತಿದ್ದು, ಈ ವರ್ಷವಾದರೂ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ.

ತಲೆಯ ಮೇಲೆ ಗಾಂಧಿಟೋಪಿ, ಹಣೆಗೆ ವಿಭೂತಿ, ಕಣ್ಣಿಗೆ ದಪ್ಪ ಕನ್ನಡಕ, ಸುಕ್ಕುಗಟ್ಟಿದ ಚರ್ಮ 94 ಹರೆಯದ ಈ ಹಿರಿಯ ಜೀವ, ರಾಷ್ಟ್ರಪತಿ ಅವರ ಗೌರವದ ಚಹಾಕೂಟದ ಒಂದು ಚಹಾಕ್ಕಾಗಿ ಹಾತೊರೆಯುತ್ತಿದೆ.

ಭಾರತಕ್ಕೆ ಸ್ವಾತಂತ್ರ್ಯ ದೊರೆತು 72 ವರ್ಷ ಕಳೆದಿದೆ. ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದವರಲ್ಲಿ ಬಹುತೇಕರು ನಮ್ಮೊಂದಿಗಿಲ್ಲ. ಇರುವವರಲ್ಲಿ ಹಲವರು ಹಾಸಿಗೆ ಹಿಡಿದಿದ್ದರೆ, ಕೆಲವರು ಮಾತ್ರ ದೈಹಿಕವಾಗಿ ಸಮರ್ಥರಾಗಿ ಅತ್ತಿಂದಿತ್ತ ಓಡಾಡುತ್ತಿದ್ದಾರೆ. ಅಂತವರ ಸಾಲಿನಲ್ಲಿ ಬಂಟ್ವಾಳ ತಾಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ಕೂಡ ಒಬ್ಬರು.

ಮೂಲತಃ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನವರಾದ ಶ್ಯಾಮರಾವ್, ತಾಲೂಕಿನ ಉಳಿಗ್ರಾಮದಲ್ಲಿ ಸರಕಾರ ನೀಡಿರುವ ಜಮೀನಿನಲ್ಲಿ ಸ್ವಂತ ಮನೆ ಹೊಂದಿದ್ದರೂ, ವಿಶ್ರಾಂತ ಜೀವನದ ಹಿನ್ನೆಲೆಯಲ್ಲಿ ಶಿವಮೊಗ್ಗದ ತನ್ನ ಮಗನ ಮನೆಯಲ್ಲಿ ವಾಸ್ತವ್ಯವಿದ್ದಾರೆ. ಆದರೂ, ಬಂಟ್ವಾಳದ ನಂಟು ಬಿಡದೆ, ತಾಲೂಕಿನ ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಿಂದ ಕರೆ

ಕಳೆದ ಕೆಲವು ವರ್ಷಗಳ ಹಿಂದೆ ಇವರಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕರೆ ಬಂದಿತ್ತು. ರಾಷ್ಟ್ರಪತಿಗಳ ಚಹಾಕೂಟಕ್ಕೆ ತೆರಳುವಿರಾ ?, ಒಪ್ಪಿಗೆ ಪತ್ರ ಕಳುಹಿಸಿ ಎಂದು. ಅದರಂತೆ ಇವರು ಒಪ್ಪಿಗೆ ಸೂಚಿಸಿದರು. ಜೊತೆಯಾಗಿ ತೆರಳುವ ಸಹಾಯಕನ ವಿವರವನ್ನೂ ನೀಡಿದರು. ಆದರೆ, ಆ ವರ್ಷ ಇವರ ಪತ್ರಕ್ಕೆ ಮರಳಿ ಪ್ರತಿಕ್ರಿಯೆ ಸಿಕ್ಕಲೇ ಇಲ್ಲ. ನಂತರದ ವರ್ಷ ಇವರನ್ನು ಅನಾರೋಗ್ಯ ಕಾಡಿತ್ತು. ಹಾಗಾಗಿ ದೆಹಲಿಗೆ ಬರಲಾರೆ ಎಂದಿದ್ದರು.

ಆ ಬಳಿಕದ ವರ್ಷದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸೂಚನೆಯಂತೆ ಬಂಟ್ವಾಳ ತಾಲೂಕಿನ ಆಗಿನ ತಹಶೀಲ್ದಾರರು ಶ್ವಾಮ್ ರಾವ್ ಅವರನ್ನು ಕರೆಸಿ ಅವರಿಂದ ಒಪ್ಪಿಗೆ ಪತ್ರ ಕೇಳಿದ್ದರು. ಶ್ವಾಮ್ ರಾವ್ ಅವರು ದೆಹಲಿಗೆ ಹೊರಡುವ ಎಲ್ಲ ಉತ್ಸಾಹದಲ್ಲೂ ಇದ್ದರು. ಆದರೆ, ಆ. 9ರಂದು ನಡೆಯುವ ಚಹಾಕೂಟಕ್ಕೆ "ನಿಮ್ಮ ಸ್ವಂತ ಖರ್ಚಿನಲ್ಲಿ ಬನ್ನಿ" ಎಂಬ ಪತ್ರ ಆ. 7ರಂದು ಇವರ ಕೈ ಸೇರಿತ್ತು. ಎರಡು ದಿನಗಳ ಅವಧಿಯಲ್ಲಿ ಪ್ರಯಾಣ ತ್ರಾಸವೆನಿಸಿ ಆ ವರ್ಷವೂ ರಾಷ್ಟ್ರಪತಿ ಅವರ ಚಹಾಕೂಟದ ಆಸೆ ಕೈಬಿಡಬೇಕಾಯಿತು. ಹೀಗೆ ಕಳೆದ ಕೆಲವೊಂದು ವರ್ಷಗಳಿಂದ ರಾಷ್ಟ್ರಪತಿಗಳ ಚಹಾ ಕೂಟದಲ್ಲಿ ಭಾಗವಹಿಸಬೇಕೆನ್ನುವ ಕಾತರದಲ್ಲಿರುವ ಎಂ.ಡಿ.ಶ್ಯಾಮರಾವ್ ರವರು ಕೊನೆಗೆ ಪತ್ರಿಕೆಗಳಲ್ಲಿ ಬರುವ ರಾಷ್ಟ್ರಪತಿಗಳ ಚಹಾಕೂಟದ ಭಾವಚಿತ್ರ ಹಾಗೂ ವರದಿಯನ್ನು ನೋಡಿ ಸಮಾಧಾನ ಪಟ್ಟುಕೊಳ್ಳುವಂತಾಗಿದೆ.

ಆಸೆ ಮತ್ತೆ ಚಿಗುರಿದೆ

94ರ ಇಳಿವಯಸ್ಸಿನಲ್ಲಿದ್ದರೂ ಸರಕಾರ ಕೊಟ್ಟಿರುವ ಬಸ್‍ಪಾಸ್ ನೆರವಿನಿಂದ ಈಗಲೂ ಶಿವಮೊಗ್ಗ-ಬಂಟ್ವಾಳಕ್ಕೆ ಬಸ್ಸಿನಲ್ಲೇ ಪಯಣಿಸುತ್ತಾ ಚುರುಕುತನ ಮೆರೆಯುತ್ತಿರುವ ಎಂ.ಡಿ.ಶ್ಯಾಮರಾವ್ ಅವರ ದೆಹಲಿ ಚಹಾಕೂಟದ ಆಸೆ ಈ ಬಾರಿ ಮತ್ತೆ ಚಿಗುರಿದೆ. ದ.ಕ.ಜಿಲ್ಲಾಧಿಕಾರಿಗಳ ಕಚೇರಿಯ ಸೂಚನೆಯಂತೆ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಸ್ವಾತಂತ್ರ್ಯ ಯೋಧ ಶ್ಯಾಮರಾವ್ ಅವರ ಆರೋಗ್ಯದ ಕುರಿತಾದ ವರದಿ, ಒಪ್ಪಿಗೆ ಪತ್ರ ಹಾಗೂ ಸಹಾಯಕರಾಗಿ ತೆರಳುವ ಪುತ್ರ ಸತೀಶ್ ಎಸ್‍ಎಸ್ ಅವರ ವಿವರವನ್ನೂ ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ, ಈ ಹಿಂದಿನ ವರ್ಷಗಳಂತೆ ಎಂ.ಡಿ.ಶ್ಯಾಮರಾವ್ ಅವರ ಒಪ್ಪಿಗೆ ಪತ್ರ ಮೂಲೆ ಸೇರದೆ, ಸಕಾಲದಲ್ಲಿ ಇವರಿಗೆ ದೆಹಲಿಯಿಂದ ಆಹ್ವಾನ ಬರಲಿ. ರಾಷ್ಟ್ರಪತಿಗಳ ಚಹಾಕೂಟದಲ್ಲಿ ಭಾಗಿಯಾಗಬೇಕೆಂಬ ಇವರ ಬಯಕೆ ಈಡೇರಬೇಕಿದೆ.

ದೆಹಲಿಯಲ್ಲಿ ನಡೆಯುವ ರಾಷ್ಟ್ರಪತಿಗಳ ಚಹಾಕೂಟದಲ್ಲಿ ಭಾಗಿಯಾಗಬೇಕೆಂಬ ಆಸೆ ಇದೆ. ಕಳೆದ ನಾಲ್ಕೈದು ವರ್ಷಗಳಿಂದ ಒಂದಲ್ಲ ಒಂದು ಕಾರಣದಿಂದ ಇದು ತಪ್ಪಿ ಹೋಗುತ್ತಿದೆ. ಸ್ವಾಮಿಯ (ಸಾಯಿಬಾಬಾ) ಪ್ರೇರಣೆ ಇಲ್ಲವೋ ಏನೋ. ಈ ಬಾರಿಯಾದರೂ ನನ್ನ ಆಸೆ ಈಡೇರಬಹುದೆಂಬ ನಿರೀಕ್ಷೆ ಹೊಂದಿದ್ದೇನೆ.
-ಎಂಡಿ.ಶ್ಯಾಮರಾವ್
ಸ್ವಾತಂತ್ರ್ಯ ಹೋರಾಟಗಾರರು

ರಾಷ್ಟ್ರಪತಿ ಅವರ ಚಹಾಕೂಟದಲ್ಲಿ ಭಾಗಿಯಾಗುವ ವಿಚಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‍ರಾವ್ ಅವರಿಗೆ ಈ ಹಿಂದಿನ ವರ್ಷಗಳಲ್ಲಿ ಆಗಿರುವಂತೆ ಈ ಬಾರಿ ಆಗಬಾರದು ಎನ್ನುವ ಕಾರಣಕ್ಕೆ ಈ ವರ್ಷ ತಾನೇ ಹೆಚ್ಚಿನ ಮುತುವರ್ಜಿ ವಹಿಸಿ, ಅವರ ಪತ್ರವನ್ನು, ಅಗತ್ಯವಿವರವನ್ನು ಜಿಲ್ಲಾಧಿಕಾರಿ ಕಚೇರಿಗೆ ಕಳುಹಿಸಿಕೊಡಲಾಗಿದೆ.
- ರಶ್ಮಿ ಎಸ್.ಆರ್, 
ತಹಶೀಲ್ದಾರ್-ಬಂಟ್ವಾಳ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X