Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಚರಂಡಿ, ದಾರಿದೀಪ ಅಳವಡಿಕೆ...

ಉಪ್ಪಿನಂಗಡಿ: ಚರಂಡಿ, ದಾರಿದೀಪ ಅಳವಡಿಕೆ ಕಾಮಗಾರಿ ಶೀಘ್ರ ನಡೆಸಲು ಮನವಿ

ಸಮಸ್ಯೆ ಪರಿಹಾರವಾಗದಿದ್ದಲ್ಲಿ ಜೂ. 27ರಂದು ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ18 Jun 2019 11:15 PM IST
share
ಉಪ್ಪಿನಂಗಡಿ: ಚರಂಡಿ, ದಾರಿದೀಪ ಅಳವಡಿಕೆ ಕಾಮಗಾರಿ ಶೀಘ್ರ ನಡೆಸಲು ಮನವಿ

ಉಪ್ಪಿನಂಗಡಿ: ಮಳೆಗಾಲ ಆರಂಭವಾದರೂ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಇನ್ನೊಂದೆಡೆ ದಾರಿ ದೀಪಗಳು ಉರಿಯುತ್ತಿಲ್ಲ. ಆದ್ದರಿಂದ 10 ದಿನದೊಳಗೆ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿ ಆರಂಭಿಸದಿದ್ದಲ್ಲಿ ಜೂ.27ರಂದು ಗ್ರಾ.ಪಂ. ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ನಮ್ಮೂರು- ನೆಕ್ಕಿಲಾಡಿ ಸಂಘಟನೆ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಜೂ. 17ರಂದು 34ನೇ ನೆಕ್ಕಿಲಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅವರಿಗೆ ಮನವಿ ನೀಡಿದ ನಮ್ಮೂರು- ನೆಕ್ಕಿಲಾಡಿ ಹಾಗೂ ಗ್ರಾಮಸ್ಥರನ್ನೊಳಗೊಂಡ ನಿಯೋಗವು, ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ಕಡೆ ಚರಂಡಿಗಳು ಗಿಡಗಂಟಿಗಳಿಂದ ಆವರಿಸಿದ್ದು, ಹೂಳು ತುಂಬಿ ಮಳೆ ನೀರು ಹರಿದು ಹೋಗದ ಪರಿಸ್ಥಿತಿಯಿದೆ. ಇನ್ನು ಕೆಲವು ಕಡೆ ಗ್ರಾ.ಪಂ.ನ ರಸ್ತೆ ಬದಿ ಚರಂಡಿಯೇ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿದು ಹೋಗುವಂತಾಗಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ದಾರಿ ದೀಪ ವ್ಯವಸ್ಥೆ ಕೂಡಾ ಸಮರ್ಪಕವಾಗಿಲ್ಲ. ಇಲ್ಲಿನ ಶೇ. 90 ರಷ್ಟು ಕಡೆ ದಾರಿ ದೀಪಗಳು ಉರಿಯುತ್ತಿಲ್ಲ. ಹಲವು ಕಡೆ ದಾರಿ ದೀಪಗಳನ್ನೇ ಅಳವಡಿಸಿಲ್ಲ. ಈಗಾಗಲೇ ಮಳೆಗಾಲ ಆರಂಭವಾಗಿದ್ದು, 34 ನೇ ನೆಕ್ಕಿಲಾಡಿಯು ಕುಮಾರಧಾರ ಹಾಗೂ ನೇತ್ರಾವತಿ ನದಿ ತೀರದಲ್ಲಿ ಇರುವುದರಿಂದ ಇದು ನೆರೆ ಬಾಧಿತ ಪ್ರದೇಶವೂ ಹೌದು. ಆದರೆ ಮಳೆಗಾಲಕ್ಕೆ ಪೂರ್ವಭಾವಿಯಾಗಿ ಆಗಬೇಕಾದ ಕೆಲಸ ಗ್ರಾ.ಪಂ. ವ್ಯಾಪ್ತಿಯಲ್ಲಿ ಇನ್ನೂ ಆಗದಿರುವುದರಿಂದ ಜನತೆ ತೀವ್ರ ಸಮಸ್ಯೆಯನ್ನೆದುರಿಸುವಂತಾಗಿದೆ. ಆದ್ದರಿಂದ ತಕ್ಷಣವೇ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ನಿರ್ಮಾಣ, ಸ್ವಚ್ಛತೆ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿಯನ್ನು ನಡೆಸಬೇಕು. ತಪ್ಪಿದ್ದಲ್ಲಿ ಜೂ. 27ರ ಗುರುವಾರದಂದು ಬೆಳಗ್ಗೆ 11 ಗಂಟೆಗೆ 34 ನೇ ನೆಕ್ಕಿಲಾಡಿ ಗ್ರಾ.ಪಂ. ಮುಂದೆ ಗ್ರಾಮಸ್ಥರನ್ನು ಕ್ರೂಢೀಕರಿಸಿಕೊಂಡು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದೆ.

ಮನವಿ ನೀಡಿದ ನಿಯೋಗದಲ್ಲಿ ನಮ್ಮೂರು- ನೆಕ್ಕಿಲಾಡಿ ಅಧ್ಯಕ್ಷ ಅಬ್ದುರ್ರಹ್ಮಾನ್ ಯುನಿಕ್, ಸಂಘಟನಾ ಕಾರ್ಯದರ್ಶಿ ಝಕಾರಿಯಾ ಕೊಡಿಪ್ಪಾಡಿ, ಜೊತೆ ಕಾರ್ಯದರ್ಶಿಗಳಾದ  ವಿನೀತ್ ಶಗ್ರಿತ್ತಾಯ, ಅಝೀಝ್ ಪಿ.ಟಿ., ಸದಸ್ಯ ಖಲಂದರ್ ಶಾಫಿ, ಗ್ರಾಮಸ್ಥರಾದ ಪ್ರಕಾಶ್ ಆದರ್ಶನಗರ, ಯು.ಕೆ. ಉಸ್ಮಾನ್ ಕೊಡಿಪ್ಪಾಡಿ, ಶರೀಫ್ ಕರ್ವೇಲು, ಸಲೀಂ ಕೊಡಿಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

'ಫೋನ್ ಕಾಲ್ ಅಭಿಯಾನ'

ಚರಂಡಿ ಅವ್ಯವಸ್ಥೆ ಹಾಗೂ ದಾರಿ ದೀಪ ಇಲ್ಲದಿರುವುದರಿಂದ 34ನೇ ನೆಕ್ಕಿಲಾಡಿಯಲ್ಲಿ ಗ್ರಾಮಸ್ಥರಿಗೆ ತೀವ್ರ ಸಮಸ್ಯೆ ಉದ್ಭವವಾಗಿದೆ. ಅಧಿಕಾರಿಗಳು ಇಲ್ಲಸಲ್ಲದ ಕಾರಣ ಹೇಳಿ ದಿನ ದೂಡುತ್ತಾರೆಯೇ ಹೊರತು ಇವರು ಗ್ರಾಮಸ್ಥರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸಮರ್ಪಕ ದಾಖಲೆಯನ್ನಿಟ್ಟು ಅಂಗಡಿ ಲೈಸನ್ಸ್ ಸೇರಿದಂತೆ ಇನ್ನಿತರ ಕೆಲಸಗಳಿಗೆ ಸಾರ್ವಜನಿಕರು ಅರ್ಜಿ ನೀಡಿದರೆ ಅದನ್ನು ಹಾಗೆಯೇ ಪೆಂಡಿಂಗ್ ಇಟ್ಟು ಅವರನ್ನು ನಾಲ್ಕೈದು ತಿಂಗಳು ಅಲೆದಾಡಿಸುವ ಕೆಲಸ ಇಲ್ಲಿ ನಡೆಯುತ್ತಿರುವ ಬಗ್ಗೆ ದೂರುಗಳಿವೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ ತಕ್ಷಣಕ್ಕೆ ಅಗತ್ಯವಿರುವ ಚರಂಡಿ ಹಾಗೂ ದಾರಿ ದೀಪ ಅಳವಡಿಕೆ ಕಾಮಗಾರಿ ನಡೆಯದಿದ್ದರೆ ಮುಂದಿನ ಹೋರಾಟದ ಭಾಗವಾಗಿ `ಫೋನ್ ಕಾಲ್ ಅಭಿಯಾನ ನಡೆಸಲಾಗುವುದು' ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರ ಮೊಬೈಲ್ ನಂಬರ್‍ಗಳಿಗೆ ಗ್ರಾಮಸ್ಥರೆಲ್ಲಾ ನಿರಂತರ ಕರೆ ಮಾಡಿ 34ನೇ ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಚರಂಡಿ ಹಾಗೂ ದಾರಿ ದೀಪದ ಕಾಮಗಾರಿ ನಡೆಸುವಂತೆ ಒತ್ತಾಯಿಸಲಾಗುವುದು. ಇದು ಕಾಮಗಾರಿ ಆರಂಭಿಸುವಲ್ಲಿಯವರೆಗೆ ಈ ಅಭಿಯಾನ ಮುಂದುವರಿಯಲಿದೆ.
- ಅಬ್ದುರ್ರಹ್ಮಾನ್ ಯುನಿಕ್
ಅಧ್ಯಕ್ಷರು, ನಮ್ಮೂರು- ನೆಕ್ಕಿಲಾಡಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X