Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ...

ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾ.ಪಂ. ನೌಕರರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ19 Jun 2019 5:52 PM IST
share
ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾ.ಪಂ. ನೌಕರರಿಂದ ಧರಣಿ

ತುಮಕೂರು,ಜೂ19: ಗ್ರಾಮ ಪಂಚಾಯತ್ ಸಿಬ್ಬಂದಿಗಳ ವೇತನವನ್ನು ನಿಗದಿತ ಸಮಯಕ್ಕೆ ನೀಡಬೇಕು ಮತ್ತು ಕನಿಷ್ಟ ವೇತನ ಪಾವತಿ, ಇಎಫ್‍ಎಂಎಸ್ ಅಳವಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾ.ಪಂ. ನೌಕರರು ಸಿಐಟಿಯು ನೇತೃತ್ವದಲ್ಲಿ ತುಮಕೂರಿನಲ್ಲಿ ಧರಣಿ ನಡೆಸಿದರು.

ಟೌನ್‍ಹಾಲ್ ವೃತ್ತದಿಂದ ಜಿಲ್ಲಾ ಪಂಚಾಯತ್ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಗ್ರಾಮ ಪಂಚಾಯತ್ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ, ಪಂಚಾಯತ್ ಸಿಬ್ಬಂದಿಗಳಿಗೆ 2018 ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ ಬಾಕಿ ಉಳಿಸಿಕೊಂಡಿರುವ ವೇತನ ಪೂರ್ಣವಾಗಿ ಪಾವತಿಸಬೇಕು. ಕೈಬಿಟ್ಟ ಹೋದ ನೌಕರರ ವಿವರವನ್ನು ಪಂಚತಂತ್ರದಲ್ಲಿ ಅಳವಡಿಸಲು ಉಪಕಾರ್ಯದರ್ಶಿಯವರು ಕ್ರಮ ಕೈಗೊಳ್ಳಬೇಕು ಹಾಗೂ ವೇತನವನ್ನು ಮಾರ್ಚ್ 1, 2018ರಿಂದ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಗ್ರಾ.ಪಂ ಸಿಬ್ಬಂದಿಗಳಿಗೆ 2018 ಮಾರ್ಚ್ ತಿಂಗಳಿಗೂ ಹಿಂದೆ ಉಳಿಸಿಕೊಂಡಿರುವ ಹಿಂದಿನ ವೇತನವನ್ನು ಪಂಚಾಯತ್ ನಿಧಿಯಿಂದ ಪಾವತಿಸಬೇಕು. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಅರ್ಹ ಸಿಬ್ಬಂದಿಗಳಿಗೆ ಭಡ್ತಿ ನೀಡಬೇಕು. ಗ್ರಾ.ಪಂ ನೌಕರರನ್ನು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ವೇತನ ಶ್ರೇಣಿ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯತ್ ಹಂತದಲ್ಲಿರುವ ಕೆಲಸಗಳನ್ನು ಜುಲೈ 15ರೊಳಗೆ ಕಾರ್ಯಗತಗೊಳಿಸದೇ ಹೋದರೆ ಮುಂದೆ ಎಲ್ಲಾ ನೌಕರರು ಜಿಲ್ಲಾ ಪಂಚಾಯತ್ಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. ಇಎಫ್‍ಎಂಎಸ್ ತಂತ್ರಾಂಶದಲ್ಲಿ ಸೇರ್ಪಡೆ ಗೊಳ್ಳದ ಸಿಬ್ಬಂದಿಗಳನ್ನು ಕೂಡಲೇ ಇಎಫ್‍ಎಂಎಸ್‍ಗೆ ಅಳವಡಿಸಬೇಕು. ಗ್ರಾ.ಪಂ ಸಿಬ್ಬಂದಿಗಳ ವೇತನಕ್ಕೆ ಬೇಕಾದ ಅನುದಾನವನ್ನು ಸರ್ಕಾರ ಭರಿಸಿ ತಿಂಗಳಿಗೆ ಸರಿಯಾಗಿ ವೇತನ ನೀಡಬೇಕು. ಅಪರ ಕಾರ್ಯದರ್ಶಿ ಸ್ವಾಮಿ ವರದಿಯಂತೆ ಬಾಕಿ ಇರುವ ಎಲ್ಲಾ ನೌಕರರನ್ನು ಏಕ ಕಾಲದಲ್ಲಿ ಅನುಮೋದನೆ ನೀಡಬೇಕು ಎಂದರು.

ನೌಕರರ ಸಂಘದ ಉಪಾಧ್ಯಕ್ಷ ಗೋಪಾಲಕೃಷ್ಣ ಹರಳಹಳ್ಳಿ ಮಾತನಾಡಿ, ಅನುಮೋದನೆಗೊಂಡ ಎಲ್ಲಾ ನೌಕರರಿಗೆ ಸರ್ಕಾರದ ಆದೇಶದ ಪ್ರಕಾರ ಜೇಷ್ಟತೆ ಪಟ್ಟಿ ಮಾಡಿ ಬಡ್ತಿ ನೀಡಲು 2019ರ ಪವಿತ್ರ ಕೇಸಿನಲ್ಲಿ ಸುಪ್ರೀಂಕೋರ್ಟ್‍ನ ತೀರ್ಪು ಬಂದಿರುವುದರಿಂದ ಪಿ.ಡಿ.ಓ ಭಡ್ತಿ ಗ್ರೇಡ್ 1 ಭಡ್ತಿ ನೀಡಿ, ಖಾಲಿಯಾದ ಗ್ರೇಡ್ 2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಿಲ್‍ಕಲೆಕ್ಟರ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕಾತಿ ಮಾಡುವಂತಾಗಬೇಕು. ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಬಡ್ತಿಗೆ ಪರಿಗಣಿಸಬೇಕು. ಪಂಚಾಯತ್ ನ ಎಲ್ಲಾ ನೌಕರರಿಗೂ ಭವಿಷ್ಯನಿಧಿ, ಆರೋಗ್ಯ ವಿಮೆ, ನಿವೃತ್ತಿ ವೇತನ, ಜನಶ್ರೀ ವಿಮಾ ಯೋಜನೆ, ರಜೆ ಸೌಲಭ್ಯ, ಸೇವಾ ನಿಯಮಾವಳಿ, ಸೇವಾ ಪುಸ್ತಕ ಮುಂತಾದ ಸೌಲಭ್ಯಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಎನ್.ಕೆ.ಸುಬ್ರಮಣ್ಯ ಮಾತನಾಡಿ, ಗ್ರಾ.ಪಂ.ಯಲ್ಲಿ ದುಡಿಯುತ್ತಿರುವ ಎಲ್ಲಾ ನೌಕರರಿಗೂ ಪ್ರತಿ ತಿಂಗಳು ವೇತನ ನೀಡಬೇಕು. ಏಕಕಾಲಕ್ಕೆ ನೌಕರರ ಅನುಮೋದನೆಯಾಗಬೇಕು. ಪಿಎಫ್, ಇಎಸ್‍ಐ ಜಾರಿಯಾಗಬೇಕು. ಬಿಲ್ ಕಲೆಕ್ಟರ್ ಮತ್ತು ಕಂಪ್ಯೂಟರ್ ಆಪರೇಟರ್ ಗಳ ಜೇಷ್ಟತಾ ಪಟ್ಟಿಯನ್ನು ತಯಾರಿಸಲು ಜಿಲ್ಲಾ ಪಂಚಾಯತ್ ಕ್ರಮ ಕೈಗೊಳ್ಳಬೇಕು ಎಂದು 

ಪ್ರತಿಭಟನೆಯಲ್ಲಿ ಕೊರಟಗೆರೆಯ ನಾಗಭೂಷಣ್, ಚಿಕ್ಕನಾಯಕನಹಳ್ಳಿ ಶಂಕರಪ್ಪ ಮತ್ತು ಲೋಕೇಶ್, ತಿಪಟೂರು ರಾಜು, ರವಿ, ತುರುವೇಕೆರೆಯ ರಮೇಶ್, ಪಾವಗಡದ ಸಿದ್ದೇಶ್ವರಪ್ಪ, ಸುಬ್ಬರಾಯಪ್ಪ, ಮಧುಗಿರಿಯ ಲಕ್ಷ್ಮೀಪತಿ, ಸುಬ್ರಹ್ಮಣ್ಯ, ಶಿರಾದ ಬಾಲರಾಜು ಮುದ್ದುರಾಜು, ಗುಬ್ಬಿಯ ಬಷೀರ್ ಅಹಮದ್, ತುಮಕೂರು ತಾಲೂಕಿನ ಅಧ್ಯಕ್ಷ ಎಸ್.ಎಸ್. ಪಂಚಾಕ್ಷರಯ್ಯ, ಕಾರ್ಯದರ್ಶಿ ಚಂದ್ರಯ್ಯ, ಕುಣಿಗಲ್‍ನ ಶ್ರೀನಿವಾಸ್ ಮತ್ತು ಪ್ರಕಾಶ್ , ಕಂಪ್ಯೂಟರ್ ಆಪರೇಟರ್ ಗಳಾದ ಎಚ್. ಗಂಗಣ್ಣ, ಮೋಹನ್‍ಕುಮಾರ್, ದಯಾನಂದ್, ರಾಜು, ಬಿಲ್‍ ಕಲೆಕ್ಟರ್ ಗಳು, ವಾಟರ್ ಮೆನ್‍ಗಳು, ಜವಾನರು, ಸ್ವಚ್ಛತಾಗಾರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X