Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ರಾಷ್ಟ್ರ, ಒಂದು ಚುನಾವಣೆ: ಕಾನೂನು...

ಒಂದು ರಾಷ್ಟ್ರ, ಒಂದು ಚುನಾವಣೆ: ಕಾನೂನು ಆಯೋಗದ ಶಿಫಾರಸುಗಳು

ವಾರ್ತಾಭಾರತಿವಾರ್ತಾಭಾರತಿ19 Jun 2019 10:36 PM IST
share
ಒಂದು ರಾಷ್ಟ್ರ, ಒಂದು ಚುನಾವಣೆ: ಕಾನೂನು ಆಯೋಗದ ಶಿಫಾರಸುಗಳು

ಹೊಸದಿಲ್ಲಿ, ಜೂ.19: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸರಕಾರದ ನಿರ್ಧಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕುರಿತು ಕಾನೂನು ಆಯೋಗ ಸರಕಾರಕ್ಕೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದೆ.

ಕಾನೂನು ಆಯೋಗವು ಕಳೆದ ಆಗಸ್ಟ್‌ನಲ್ಲಿ ಸಲ್ಲಿಸಿರುವ ಕರಡು ಶಿಫಾರಸಿನಲ್ಲಿ ಇಂತಹ ಬೃಹತ್ ಪ್ರಮಾಣದ ಪ್ರಯೋಗಕ್ಕೆ ಮುನ್ನ ದೃಢ ಕಾನೂನು ಚೌಕಟ್ಟನ್ನು ರಚಿಸಲು ಸೂಚಿಸಿದೆ. ಜೊತೆಗೆ ಸಂವಿಧಾನಕ್ಕೆ ಹಾಗೂ ಪ್ರಜಾಪ್ರತಿನಿಧಿಗಳ ಕಾಯ್ದೆಗೆ ತಿದ್ದುಪಡಿ ತರಲು ಶಿಫಾರಸು ಮಾಡಿದೆ. ಸಂವಿಧಾನದ ಕನಿಷ್ಟ ಎರಡು ಉಪಬಂಧಗಳಿಗೆ ತಿದ್ದುಪಡಿ ಮಾಡುವ ಜೊತೆಗೆ ರಾಜ್ಯಗಳ ಬಹುಮತದ ಬೆಂಬಲವಿದ್ದರೆ ಲೋಕಸಭೆಗೆ ಹಾಗೂ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆಯಲ್ಲಿ ಎರಡು ಹಂತದಲ್ಲಿ ನಡೆಸಬಹುದು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ. ಆಯೋಗದ ಆಶಯಗಳಿಗೆ ಸಹಮತ ವ್ಯಕ್ತಪಡಿಸಿರುವ ಮಾಜಿ ಚುನಾವಣಾ ಆಯುಕ್ತ ಟಿಎಸ್ ಕೃಷ್ಣಮೂರ್ತಿ, ಒಂದು ದೇಶ ಒಂದು ಚುನಾವಣೆ ಎಂಬ ಯೋಜನೆ ತುಂಬಾ ಆಕರ್ಷಕವಾಗಿದ್ದರೂ, ಸಂವಿಧಾನಕ್ಕೆ ತಿದ್ದುಪಡಿ ತಂದು, ವಿಧಾನಸಭೆಗೆ ನಿಗದಿತ ಅವಧಿ ನಿರ್ಧರಿಸದ ಹೊರತು ಇದನ್ನು ಜಾರಿಗೊಳಿಸಲಾಗದು ಎಂದಿದ್ದಾರೆ. ಕೃಷ್ಣಮೂರ್ತಿ 2004ರ ಲೋಕಸಭಾ ಚುನಾವಣೆ ಸಂದರ್ಭ ಮುಖ್ಯ ಚುನಾವಣಾ ಆಯುಕ್ತರಾಗಿದ್ದರು. ಯೋಜನೆ ಜಾರಿಗೆ ಮುನ್ನ ಅರೆಸೇನಾ ಪಡೆಯ ಬಲವನ್ನು ಹೆಚ್ಚಿಸುವುದೂ ಸೇರಿದಂತೆ ಹಲವಾರು ಆಡಳಿತಾತ್ಮಕ ವ್ಯವಸ್ಥೆಯ ಅಗತ್ಯವಿದೆ.

ಈ ಯೋಜನೆಯಿಂದ ಹಲವು ಅನುಕೂಲಗಳಿವೆ. ಆದರೆ ಸರಕಾರದ ವಿರುದ್ಧ ಮಂಡನೆಯಾಗುವ ಅವಿಶ್ವಾಸ ನಿರ್ಣಯ ಈ ಯೋಜನೆಗೆ ಬಹುದೊಡ್ಡ ತೊಡಕಾಗಿದೆ. ಅಲ್ಲದೆ, ಈ ಯೋಜನೆ ಜಾರಿಗೊಳ್ಳುವಾಗ ಕೆಲವು ರಾಜ್ಯದ ವಿಧಾನಸಭೆಯ ಅವಧಿ ಇನ್ನೂ ನಾಲ್ಕು- ನಾಲ್ಕೂವರೆ ವರ್ಷ ಇರಬಹುದು. ಆಗ ಪರಿವರ್ತನೆಯ ನಿಬಂಧನೆಯ ಅಗತ್ಯ ಬೀಳಬಹುದು ಎಂದು ಕೃಷ್ಣಮೂರ್ತಿ ಹೇಳಿದ್ದಾರೆ. ಬಹುಮತ ದೊರೆತ ಪಕ್ಷದ ಮುಖಂಡನನ್ನು ಇಡೀ ಸದನ(ಲೋಕಸಭೆ ಅಥವಾ ವಿಧಾನಸಭೆ) ಪ್ರಧಾನಮಂತ್ರಿ ಅಥವಾ ಮುಖ್ಯಮಂತ್ರಿ ಎಂದು ಆಯ್ಕೆ ಮಾಡಬೇಕು. ಆಗ ಸರಕಾರ, ಲೋಕಸಭೆ ಅಥವಾ ವಿಧಾನಸಭೆಯ ಸ್ಥಿರತೆಗೆ ಪೂರಕವಾಗಿರುತ್ತದೆ ಎಂದು ಕಾನೂನು ಆಯೋಗ ಶಿಫಾರಸು ಮಾಡಿದೆ.

ಸರಕಾರದ ಚಿಂತಕರ ಚಾವಡಿ ಎನಿಸಿರುವ ನೀತಿ ಆಯೋಗವು, ಆಡಳಿತ ಕಾರ್ಯಕ್ಕೆ ಚುನಾವಣೆಯ ಪ್ರಚಾರಗಳಿಂದ ಆಗುತ್ತಿರುವ ಅಡ್ಡಿಯನ್ನು ಉಲ್ಲೇಖಿಸಿ 2014ರ ಬಳಿಕ ಏಕಕಾಲದಲ್ಲಿ ಎರಡು ಹಂತದ ಲೋಕಸಭೆ-ವಿಧಾನಸಭೆ ಚುನಾವಣೆ ನಡೆಸಲು ಕಳೆದ ವರ್ಷ ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X