Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಕ್ಕೆ...

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಕ್ಕೆ ಡಿಸಿ ಸಸಿಕಾಂತ್ ಸೆಂಥಿಲ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Jun 2019 8:17 PM IST
share
ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಕ್ಕೆ ಡಿಸಿ ಸಸಿಕಾಂತ್ ಸೆಂಥಿಲ್ ಸೂಚನೆ

ಮಂಗಳೂರು, ಜೂ.20: ಮಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಕಾಮಗಾರಿಯನ್ನು ತ್ವರಿತಗೊಳಿಸಿ ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಂಗಳೂರಿನ ಉರ್ವಸ್ಟೋರ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನಕ್ಕೆ ರಾಜ್ಯ ಸರಕಾರದಿಂದ 12 ಕೋಟಿ ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಅಂತಿಮ ಘಟ್ಟದಲ್ಲಿದೆ. ಆಗಸ್ಟ್ 15ರಂದು ಇದರ ಉದ್ಘಾಟನೆಗೆ ಪೂರ್ವ ತಯಾರಿ ನಡೆಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಡಾ.ಯೋಗೀಶ್ ಮಾತನಾಡಿ, ಅಂಬೇಡ್ಕರ್ ಭವನದ ಸಮಗ್ರ ನಿರ್ವಹಣೆಗೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ರಚನೆಯಾಗಲಿದೆ. ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಲಾಗುವುದು. ಕಡಬ ತಾಲೂಕು ಕೇಂದ್ರದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ದೌರ್ಜನ್ಯ ಪ್ರಕರಣಗಳ ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ನಿಗಾ ವಹಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಪರೋಕ್ಷವಾಗಿಯೂ ಯಾವುದೇ ಕಿರುಕುಳ, ಮಾನಸಿಕ ತೊಂದರೆಯಾಗದಂತೆ ಜಿಲ್ಲೆಯ ಎಲ್ಲ ಇಲಾಖೆಗಳ ಕಚೇರಿ ಮುಖ್ಯಸ್ಥರು ಗಮನಹರಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರನ್ನು ಗೌರವಯುತವಾಗಿ ನೋಡಿಕೊಳ್ಳಬೇಕು. ಅಲೆಮಾರಿ ಜನಾಂಗದವರಿಗೆ ಸೌಲಭ್ಯಗಳನ್ನು ಮುತುವರ್ಜಿಯಿಂದ ನೀಡಬೇಕು ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದರು.

ದುರ್ಬಲ ವರ್ಗದವರಿಗೆ ಮೀಸಲಾದ ಡಿ.ಸಿ. ಮನ್ನಾ ಭೂಮಿಗಳ ಒತ್ತುವರಿಯನ್ನು ಕಾಲಮಿತಿಯೊಳಗೆ ತೆರವುಗೊಳಿಸಬೇಕು. ಈ ಬಗ್ಗೆ ಎಲ್ಲ ತಹಶೀಲ್ದಾರ್‌ಗಳನ್ನು ಗಮನಹರಿಸಿ, ಜುಲೈ ಅಂತ್ಯದೊಳಗೆ ವರದಿ ನೀಡಲು ಅವರು ತಿಳಿಸಿದರು.

ಸಭೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಎಎಸ್‌ಪಿ ವಿಕ್ರಂ, ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯಕ್, ದಲಿತ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X