Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು...

ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹರಿಸಿ: ಅಧಿಕಾರಿಗಳಿಗೆ ಸಚಿವ ದೇಶಪಾಂಡೆ ಸೂಚನೆ

ಮೈಸೂರು: ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ20 Jun 2019 10:58 PM IST
share
ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹರಿಸಿ: ಅಧಿಕಾರಿಗಳಿಗೆ ಸಚಿವ ದೇಶಪಾಂಡೆ ಸೂಚನೆ

ಮೈಸೂರು,ಜೂ.20: ಗ್ರಾಮಗಳಿಗೆ ತೆರಳಿ ಗ್ರಾಮ ಪಂಚಾಯತ್ ಮಟ್ಟದಲ್ಲೇ ಖಾತೆ, ಕಂದಾಯ ಸೇರಿದಂತೆ ಜನರ ಸಮಸ್ಯೆಗಳನ್ನು ಪರಿಹರಿಸಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕುಳಿತು ಸಮಸ್ಯೆ ಬಗೆಹರಿಸುವ ಬದಲು ಗ್ರಾಮಗಳಿಗೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಕಂಡು ಸೂಕ್ತ ರೀತಿಯ ಪರಿಹಾರ ಒದಗಿಸಿ, ಗ್ರಾಮೀಣ ಮಟ್ಟದಲ್ಲಿ ಜನರು ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಗೆ ಆಗಬೇಕಿರುವ ಖಾತೆ, ಕಂದಾಯ, ವೃದ್ಧಾಪ್ಯ ವೇತನ, ವಿಡೊ ಪೆನ್ಶನ್ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಿ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರು ಹಣ ಖರ್ಚು ಮಾಡಿಕೊಂಡು ನಗರ ಪ್ರದೇಶಗಳಿಗೆ ಅಲೆಯುವುದು ಬೇಡ, ಅವರ ಏನೇ ಕೆಲಸಗಳಿದ್ದರೂ ಗ್ರಾಮಗಳಲ್ಲೇ ಪರಿಹರಿಸಿ, ಅಗತ್ಯವಿದ್ದರೆ ಮಾತ್ರ ನಗರ ಪ್ರದೇಶಗಳಿಗೆ ಬರಲಿ, ಜನರ ಸಮಸ್ಯೆಗಳನ್ನು ಗ್ರಾಮಮಟ್ಟದಲ್ಲೇ ಪರಿಹರಿಸಲು ವಿಫಲವಾದರೆ ಅಂತಹ ಅಧಿಕಾರಿಗಳನ್ನು ಬೇರೆಡೆಗೆ ಕಳುಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು.

ಕುಡಿಯುವ ನೀರು, ದನ-ಕರುಗಳ ಮೇವುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದು, ಕುಡಿಯುವ ನೀರಿಗೆ ಮತ್ತು ಮೇವು ಖರೀದಿಸಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸಾಕಷ್ಟು ಹಣವಿದೆ. ಎಲ್ಲಿ ನೀರಿಗೆ ಸಮಸ್ಯೆಯಾಗುತ್ತದೊ ಅಲ್ಲಿ ಕೊಳವೆ ಬಾವಿಗಳನ್ನು ಕೊರೆಸಿ ನೀರು ಕೊಡಿ, ಕೊಳವೆ ಬಾವಿಯಲ್ಲಿ ನೀರು ಬಾರದಿದ್ದರೆ ಟ್ಯಾಂಕರ್ ಗಳ ಮೂಲಕ ನೀರು ಕೊಡಿ ಎಂದು ಆದೇಶಿಸಿದರು.

ಮೈಸೂರು ಜಿಲ್ಲೆಯಲ್ಲಿ 2019ನೇ ಸಾಲಿನ ಜನವರಿಯಿಂದ ಮೇವರೆಗಿನ ಮಾಹೆವಾರು ಮಳೆಯ ವಿವರ ಪಡೆದರು. ಅದೇ ರೀತಿ ಮೈಸೂರು ಜಿಲ್ಲೆಯಲ್ಲಿ ವಾರ್ಷಿಕ ವಾಡಿಕೆ ಮಳೆ 815.3, ಈ ವರ್ಷದ ಜೂನ್ ಒಳಗೆ ಒಟ್ಟು ವಾಡಿಕೆ ಮಳೆ 261.3, 19.6.2019ರ ವರೆಗೆ ಬಿದ್ದ ಮಳೆ 234.9, ಕೊರತೆ/ಹೆಚ್ಚು(ಶೇಕಡ)-10.1, 2018ರಲ್ಲಿ ಇದೇ ಅವಧಿಯಲ್ಲಿ ಬಿದ್ದ ಮಳೆ 433.4 ಎಂದು ಮಾಹಿತಿ ನೀಡಿದರು.

ಇದೇ ವೇಲೆ ಸಚಿವರು ನಷ್ಟವಾದ ಬೆಳೆಯ ವಿವರವನ್ನು ಪಡೆದರು. ಕುಡಿಯುವ ನೀರಿನ ಪೂರೈಕೆ ಯಾವ ರೀತಿಯಲ್ಲಿ ನಡೆಯುತ್ತಿದೆಹಾಗೂ ಮೇವಿನ ಲಭ್ಯತೆಯ ವಿವರವನ್ನೂ ಪಡೆದರು.

ಇದೇ ವೇಳೆ ಅಧಿಕಾರಿಗಳು ಹೆಚ್.ಡಿ.ಕೋಟೆಯಲ್ಲಿ ಆತ್ಮಹತ್ಯೆಯ ಪ್ರಕರಣಗಳು 4, ಹುಣಸೂರಿನಲ್ಲಿ 21, ಕೆ.ಆರ್.ನಗರದಲ್ಲಿ 17, ಮೈಸೂರು 3, ನಂಜನಗೂಡು 4, ಪಿರಿಯಾಪಟ್ಟಣ 39, ಟಿ.ನರಸೀಪುರ 3, ವರದಿಯಾದ ಪ್ರಕರಣಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಸಚಿವರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿ.ಪಂ.ಸಿಇಒ ಕೆ.ಜ್ಯೋತಿ, ಮೇಯರ್ ಪುಷ್ಪಲತಾ ಜಗನ್ನಾಥ್, ಮುಡಾ ಅಧ್ಯಕ್ಷ ವಿಜಯ್ ಕುಮಾರ್, ಜಿ.ಪಂ.ಅಧ್ಯಕ್ಷೆ ಪರಿಮಳ ಶ್ಯಾಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X