ಅಂಬಲಪಾಡಿಯಲ್ಲಿ ಯೋಗ ದಿನಾಚರಣೆ
ಉಡುಪಿ, ಜೂ.21: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ಗ್ರಾಪಂ ಅಂಬಲಪಾಡಿ ಹಾಗೂ ಮಹಿಳಾ ಮಂಡಲ ಕಿದಿಯೂರು ಇವರ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಅಂಬಲಪಾಡಿ ಗ್ರಾಪಂ ಸಭಾಭವನದಲ್ಲಿ ಶುಕ್ರವಾರ ಯೋಗ ಕಾರ್ಯಕ್ರಮ ನಡೆಯಿತು.
ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಉಪಾಧ್ಯಕ್ಷ ರಾಜೇಂದ್ರ ಪಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಎಲ್.ಗೊನ್ಸಾಲ್ವಿಸ್, ತಾಪಂ ಕಾರ್ಯ ನಿರ್ವಹಣಾ ಧಿಕಾರಿ ಕೆ. ರಾಜು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಗ್ರಾಪಂ ಉಪಾಧ್ಯಕ್ಷೆ ಉಷಾ, ಸುದರ್ಶನ ಕ್ರಿಯಾ ಯೋಗದ ಗುರುಗಳಾದ ವಿಮಲಾಕ್ಷಿ ಯೋಗಾಭ್ಯಾಸಕ್ಕೆ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ (ಪ್ರಬಾರ) ವೀಣಾ ವಿವೇಕಾನಂದ ಸ್ವಾಗತಿಸಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಇಂದಿರಾ ನಾಯ್ಕ ವಂದಿಸಿದರು.
ಸಾಲಿಗ್ರಾಮ: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಸದಸ್ಯರು, ಸಿಬ್ಬಂದಿ ಗಳು ಹಾಗೂ ಸಾರ್ವಜನಿಕರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಪಟ್ಟಣ ಪಂಚಾಯತ್‌ಸಭಾಂಗಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಆರ್ಟ್ ಆಪ್ ಲೀವಿಂಗ್‌ನ ಯೋಗ ಶಿಕ್ಷಕ ದಿನೇಶ್ ಶಿಬಿರ ನಡೆಸಿಕೊಟ್ಟರು. ಶಿಬಿರದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಪಟ್ಟಣ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು ಮತ್ತು ಪೌರಕಾರ್ಮಿಕರು ಭಾಗವಹಿಸಿದ್ದರು.







