ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಜೂ.21: ಕೃಷಿ ಕ್ಷೇತ್ರದಲ್ಲಿ ಅಮೂಲ್ಯ ಅನ್ವೇಷಣೆ/ವಿಶಿಷ್ಟ ಸಾಧನೆ ಮೂಲಕ ರೈತ ಸಮುದಾಯದ ಅಭಿವೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡು ತ್ತಿರುವ ಪರಿಣಿತ ಮಹನೀಯರನ್ನು ಗುರುತಿಸಿ, ಕೃಷಿ ಪಂಡಿತ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಿ ಗೌರವಿಸಲಾಗುತ್ತಿದೆ.
ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿ, ಕೃಷಿ ಕ್ಷೇತ್ರದ ಏಳಿಗೆಗೆ ಕಾರಣರಾಗಿ ರುವ ರೈತ ಮಹನೀಯರಿಗೆ ಪ್ರಥಮ 1.25 ಲಕ್ಷ ರೂ., ದ್ವಿತೀಯ 1 ಲಕ್ಷ ರೂ. ಹಾಗೂ ತೃತೀಯ 75 ಸಾವಿರ ರೂ. ಬಹುಮಾನ ನೀಡಲಾಗುತ್ತಿದ್ದು, ಉಳಿದ ವಿಜೇತರಿಗೆ ಉದಯೋನ್ಮುಖ ಕೃಷಿ ಪಂಡಿತರೆಂದು ತಲಾ 50 ಸಾವಿರ ರೂ. ನೀಡಲಾಗುತ್ತಿದೆ. ಪ್ರಶಸ್ತಿಗೆ ಅರ್ಹತೆ ಪಡೆಯಲು ರೈತರು ಕನಿಷ್ಟ 65 ಅಂಕಗಳನ್ನು ಗಳಿಸಬೇಕಾಗಿದೆ.
2018-19ನೇ ಸಾಲಿಗೆ ಅನ್ವಯವಾಗುವಂತೆ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಸಲ್ಲಿಸ ಬಯಸುವ ರೈತರಿಂದ ನಾಮ ನಿರ್ದೇಶನಗಳನ್ನು ನಿಗದಿತ ನಮೂನೆ ಯಲ್ಲಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೃಷಿ ಇಲಾಖೆಯ ಕಚೇರಿ ಗಳಿಂದ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜು.20 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.





