Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ...

ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಗೂಂಡಾಗಳಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ21 Jun 2019 10:20 PM IST
share
ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಗೂಂಡಾಗಳಿಂದ ಹಲ್ಲೆ

ಪಾಂಡವಪುರ, ಜೂ.21: ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಸ್ವಗ್ರಾಮದಲ್ಲೇ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಲಾಗಿದ್ದು, ಘಟನೆಯಲ್ಲಿ 6 ರಿಂದ 7 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುರುವಾರ ತಡರಾತ್ರಿಯಲ್ಲಿ ನಡೆದಿದೆ ಎನ್ನಲಾಗಿದೆ.

ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ 20 ಮಂದಿ ಗೂಂಡಾಗಳು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಪಟ್ಟಣದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿನಕುರಳಿ ಗ್ರಾಮದ ಬಿಸಿಎಂ ಹಾಸ್ಟೆಲ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾರ್ಡನ್ ಶಿವರಾಜು ಹಾಗೂ ಅಡುಗೆ ಸಹಾಯಕ ನಂದೀಶ್, ಹೊರಗುತ್ತಿಗೆ ನೌಕರೆ ಪದ್ಮಮ್ಮ ಎಂಬುವವರು ಹುಳು ಮಿಶ್ರಿತ ಆಹಾರ ನೀಡಿದ್ದನ್ನು ಪ್ರಶ್ನಿಸಿ ಮೇಲಾಧಿಕಾರಿಗಳಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಗೂಂಡಾಗಳಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.

ಹಾಸ್ಟೆಲ್ ವಾರ್ಡನ್ ಹಾಗೂ ಅಡುಗೆ ಸಹಾಯಕರ ಕುಮ್ಮಕ್ಕಿನಿಂದ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ದೌರ್ಜನ್ಯ ನಡೆಸಿ ಹಲ್ಲೆ ನಡೆಸಲಾಗಿದ್ದು, ಸಿಸಿ ಟಿವಿಯಲ್ಲಿ ಇದು ದಾಖಲಾಗಿದೆ. ಹೀಗಾಗಿ ಈ ಕೂಡಲೇ ಇವರನ್ನು ಅಮಾನತ್ತು ಮಾಡಬೇಕು. ಜತೆಗೆ ಗೂಂಡಾಗಳ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಎಂದು ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳು ವಾರ್ಡನ್ ಶಿವರಾಜು, ಅಡುಗೆ ಸಹಾಯಕ ನಂದೀಶ್ ವಿರುದ್ಧ ದೂರು ನೀಡಿದ್ದ ಮೇರೆಗೆ ವಿದ್ಯಾರ್ಥಿಗಳ ದೂರಿನ ಹಿನ್ನೆಲೆ ಹಾಸ್ಟೆಲ್‍ಗೆ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಬಿಸಿಎಂ ಇಲಾಖೆಯ ಜಿಲ್ಲಾಧಿಕಾರಿ ಎನ್.ರಾಣಿ ಗುರುವಾರ ತಡರಾತ್ರಿ ಹಾಸ್ಟೆಲ್ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರಲ್ಲದೇ, ಹಾಸ್ಟೆಲ್ ವಾರ್ಡನ್ ಶಿವರಾಜು ಹಾಗೂ ಅಡುಗೆ ಸಹಾಯಕಿ ಪದ್ಮಮ್ಮ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಪಾಂಡವಪುರ ಟೌನ್ ಹಾಸ್ಟೆಲ್ ವಾರ್ಡನ್ ಆನಂದಕುಮಾರ್ ಅವರನ್ನು ನಿಯೋಜಿಸಲಾಗಿದೆ. ಜತೆಗೆ ಹಾಸ್ಟೆಲ್ ಬಳಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ ಎಂದರು.

ವಿದ್ಯಾರ್ಥಿಗಳ ಜತೆಯಲ್ಲಿ ತಾವು ಗೂಂಡಾಗಳ ವಿರುದ್ಧ ಸಿಸಿ ಟಿವಿ ದೃಶ್ಯಾವಳಿಗಳನ್ನಾಧರಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಬಗ್ಗೆ ಮಾತುಕತೆ ನಡೆಸಲಾಗಿದ್ದು, ವಿದ್ಯಾರ್ಥಿಗಳು ಹೆದರಿದ ಹಿನ್ನೆಲೆಯಲ್ಲಿ ಘಟನೆ ಕುರಿತು ದೂರು ಸಲ್ಲಿಸದಿರಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X