ಎಸೆಸೆಲ್ಸಿ ಪೂರಕ ಪರೀಕ್ಷೆ:107 ಮಂದಿ ಗೈರು
ಉಡುಪಿ, ಜೂ.21: ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ನಡೆದ 2019ನೇ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಯಲ್ಲಿ ಇಂದು ಗಣಿತ ವಿಷಯಕ್ಕೆ ಒಟ್ಟು 107 ಮಂದಿ ಗೈರುಹಾಜರಾಗಿದ್ದಾರೆ. ಒಟ್ಟು 1138 ಮಂದಿ ಹೆಸರು ನೊಂದಾಯಿಸಿಕೊಂಡಿದ್ದು, ಇವರಲ್ಲಿ 1031 ಮಂದಿ ಪರೀಕ್ಷೆ ಬರೆದಿದ್ದಾರೆ.
ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆದಿಲ್ಲ ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





