ಮೈಸೂರು ಜಿ.ಪಂ ಇಂಜಿನಿಯರ್ ಮನೆಗೆ ಎಸಿಬಿ ದಾಳಿ
ಮೈಸೂರು,ಜೂ.21: ಎಸಿಬಿ ಅಧಿಕಾರಿಗಳು ಮೈಸೂರಿನಲ್ಲಿ ಇಂದು ಇಂಜಿನಿಯರ್ ಮನೆಗೆ ದಾಳಿ ಮಾಡಿ ಶಾಕ್ ನೀಡಿದ್ದಾರೆ.
ಮೈಸೂರಿನ ಗಾಯತ್ರಿ ಪುರಂ ಬಡಾವಣೆಯಲ್ಲಿರುವ ಜಿಲ್ಲಾ ಪಂಚಾಯತ್ ಜ್ಯೂನಿಯರ್ ಇಂಜಿನಿಯರ್ ಅರ್ಷದ್ ಪಾಷಾ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಂ ಬೆಳಿಗ್ಗೆ ಜಿ.ಪಂ. ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.
Next Story