Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಬರ ನಿರ್ವಹಣೆ ಕುರಿತು...

ದಾವಣಗೆರೆ: ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆ- ಜಲ ಅರಿವು ಮೂಡಿಸಲು ಸಚಿವ ಕೃಷ್ಣಭೆರೇಗೌಡ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 Jun 2019 11:39 PM IST
share
ದಾವಣಗೆರೆ: ಬರ ನಿರ್ವಹಣೆ ಕುರಿತು ಪರಿಶೀಲನಾ ಸಭೆ- ಜಲ ಅರಿವು ಮೂಡಿಸಲು ಸಚಿವ ಕೃಷ್ಣಭೆರೇಗೌಡ ಸೂಚನೆ

ದಾವಣಗೆರೆ, ಜೂ.21: ಜಿಲ್ಲೆಯಲ್ಲಿ ಬರಗಾಲವಿದ್ದು, ಈ ವರ್ಷ ಒಂದು ಸಾವಿರ ಚೆಕ್ ಡ್ಯಾಂ ನಿರ್ಮಿಸುವಂತೆ ಹಾಗೂ ಜಲಾಮೃತ ಕಾರ್ಯ ಕ್ರಮದಡಿ ಪ್ರತಿ ಸರಕಾರಿ ಶಾಲೆ, ಕಾಲೇಜು, ಗ್ರಾಪಂಗಳಲ್ಲಿ ನೀರಿನ ಅರಿವು ಮೂಡಿಸುವುದು ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಆಂದೋಲನದ ರೀತಿಯಲ್ಲಿ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಸೂಚನೆ ನೀಡಿದ್ದಾರೆ.

ಜಿಪಂ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯಕ್ರಮಗಳ ಹಾಗೂ ಬರ ನಿರ್ವಹಣೆ ಕುರಿತು ಶುಕ್ರವಾರ ಏರ್ಪಡಿಸಲಾಗಿದ್ದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2019ನ್ನು ಜಲವರ್ಷವನ್ನಾಗಿ ಘೋಷಿಸಲಾಗಿದ್ದು, ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಎಲ್ಲ ಕಡೆ ಭೀಕರ ಬರಗಾಲದ ಛಾಯೆ ಇದೆ. ಈ ಹಂತಕ್ಕೆ ತಲುಪಿದ ಮೇಲೂ ಎಚ್ಚೆತ್ತುಕೊಳ್ಳದಿದ್ದರೆ ಹೇಗೆ? ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜಲಸಂರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದರು.

ಶಾಸಕ ಎಂ. ಪಿ. ರೇಣುಕಾಚಾರ್ಯ ಮಾತನಾಡಿ, ಹೊನ್ನಾಳಿ ತಾಲೂಕಿನಲ್ಲಿ ಬರಗಾಲವಿದೆ. ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಜಿಪಿಎಸ್ ಅಳವಡಿಸಲು ಡಿಸಿ ಸೂಚಿಸಿದ್ದು, ತಕ್ಷಣಕ್ಕೆ ಅದು ಸಾಧ್ಯವಾಗುವುದಿಲ್ಲ. ತುರ್ತಾಗಿ ಬೋರ್ ಕೊರೆಸುವಂತಹ ಕೆಲಸಗಳಿಗೆ ಅನುದಾನ ನೀಡಬೇಕೆಂದರು.
ಎನ್‌ಆರ್‌ಡಿಡಬ್ಲ್ಯುಪಿ ಕಾರ್ಯಕ್ರಮದಡಿ 86.02 ಕೋಟಿ ರೂ. ಜಿಲ್ಲೆಗೆ ನಿಗದಿಗೊಳಿಸಿದ್ದು, ಅದರಲ್ಲಿ 38.4 ಲಕ್ಷ ರೂ. ಬಹುಗ್ರಾಮ ಕುಡಿಯುವ ನೀರಿಗೆ, 47.62 ಲಕ್ಷ ರೂ. ಕುಡಿಯುವ ನೀರಿನ ಯೋಜನೆಗೆ ಮೀಸಲಿಡಲಾಗಿದೆ. ಅದರಲ್ಲಿ 14.59 ಲಕ್ಷ ರೂ.ಮುಂದುವರಿದ ಕಾಮಗಾರಿಗಳಿಗೆ ನಿಗದಿಗೊಳಿಸಿದ್ದು, ಹೊಸ ಕಾಮಗಾರಿಗಳಿಗೆ 33 ಕೋಟಿ ರೂ.ಹಂಚಿಕೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕುಡಿಯುವ ನೀರಿನ ಕುರಿತು ಪ್ರತಿ ಬಾರಿ ಟೆಂಡರ್ ಕರೆಯುವ ಅಗತ್ಯ ಇಲ್ಲ. ದರ ಗುತ್ತಿಗೆದಾರರೊಂದಿಗೆ ಎಂಪಾನೆಲ್ ಆಗಿ 15 ತಿಂಗಳ ಕಾಲ ಕೆಲಸ ತೆಗೆದುಕೊಳ್ಳಬಹುದು. ಸಂತೇಬೆನ್ನೂರು ಪೈಪ್ ರಿಪ್ಲೇಸ್‌ಮೆಂಟ್ ಮಾಡಬೇಕಾಗಿದ್ದು ಅದನ್ನು ವಿನ್ಯಾಸಗೊಳಿಸುವ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಬರಗಾಲದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಯೋಜನೆಗೆ ಜಿಲ್ಲೆಗೆ ಟಾಸ್ಕ್‌ಫೋರ್ಸ್ ಅನುದಾನದಲ್ಲಿ 5 ಕೋಟಿ ರೂ., ಪಂಚಾಯತ್ ರಾಜ್ ಇಲಾಖೆಯಿಂದ 7.5 ಕೋಟಿ ರೂ. ನೀಡಲಾಗಿತ್ತು. ಪಂಚಾಯತ್ ರಾಜ್ ಅಡಿಯಲ್ಲಿ 2.80 ಕೋಟಿ ರೂ. ಖರ್ಚಾಗಿದ್ದು ಬಾಕಿ ಅನುದಾನವನ್ನು ಶೀಘ್ರವಾಗಿ ಖರ್ಚು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮೋಡ ಬಿತ್ತನೆ: ಶಾಸಕರು, ಜಿಪಂ ಸದಸ್ಯರು ಮೋಡ ಬಿತ್ತನೆ ಮಾಡುವಂತೆ ಸಚಿವರಿಗೆ ಮನವಿ ಮಾಡಿದಾಗ, ಸಚಿವರು ರಾಜ್ಯಾದ್ಯಂತ ಜುಲೈ ಎರಡನೇ ವಾರದಿಂದ ಮೋಡ ಬಿತ್ತನೆ ಆರಂಭಿಸಲಾಗುವುದು ಎಂದು ಹೇಳಿದರು. ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ, ಜಿಪಂ ಸದಸ್ಯ ವಾಗೀಶ್ ಮಾತನಾಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಜಿಪಂ ಸಿಇಒ ಎಚ್.ಬಸವರಾಜೇಂದ್ರ, ಉಪ ಕಾರ್ಯದರ್ಶಿ ಭೀಮಾನಾಯ್ಕ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷರು, ಜಿಪಂ ಸದಸ್ಯರು ಇತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ 256 ಚೆಕ್ ಡ್ಯಾಂಗೆ ಪ್ರಸ್ತಾವವಿದೆ. ಆದರೆ ಇದು ಜಿಲ್ಲೆಗೆ ಸಾಕಾಗುವುದಿಲ್ಲ. ಜಿಲ್ಲೆಯಲ್ಲಿ ಹಳ್ಳಗಳಿಗೆ ಕೊರತೆ ಇಲ್ಲ. ಹಳ್ಳ ಇರುವೆಡೆ ಚೆಕ್‌ಡ್ಯಾಂ ನಿರ್ಮಿಸಿದರೆ ನೀರಿನ ಸಂರಕ್ಷಣೆ ಸಾಧ್ಯ. ಪ್ರತಿ ಗ್ರಾಪಂನಲ್ಲಿ ಸರಾಸರಿ 5ರಂತೆ ಚೆಕ್‌ಡ್ಯಾಂ ನಿರ್ಮಿಸಿ, ಅದಕ್ಕೆ ಸಮನಾಗಿ ನಾಲೆ ನಿರ್ವಹಣೆ, ಕೆರೆ ಹೂಳೆತ್ತುವುದನ್ನು ಸರಿದೂಗಿಸಿಕೊಂಡು ನಿರ್ಮಿಸಬೇಕು. ಈ ವರ್ಷ ಕನಿಷ್ಠ ಜಿಲ್ಲೆಯಲ್ಲಿ ಒಂದು ಸಾವಿರ ಚೆಕ್‌ಡ್ಯಾಂ ನಿರ್ಮಿಸಬೇಕು.
- ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

‘8 ಜಿಲ್ಲೆಗೆ ಜಲಧಾರೆ ಯೋಜನೆ ವಿಸ್ತರಣೆ’
ಜಲಮೂಲವನ್ನು ಆಧಾರವಾಗಿಟ್ಟುಕೊಂಡು ಬಹುಗ್ರಾಮ ಯೋಜನೆ ವಿನ್ಯಾಸಗೊಳಿಸಲಾಗುವುದು. ಈ ಬಾರಿ ರಾಯಚೂರು, ಮಂಡ್ಯ, ಕೋಲಾರ, ಬೀದರ್ ಸೇರಿದಂತೆ 5 ಜಿಲ್ಲೆಯಲ್ಲಿ ಜಲಧಾರೆ ಯೋಜನೆಯಡಿ ಹಳೆ ನ್ಯೂನತೆಗಳನ್ನು ಸರಿಪಡಿಸಿ ನೀರು ಒದಗಿಸುವ ಯೋಜನೆ ಹಾಕಿಕೊಂಡಿದ್ದು, ಮುಂದಿನ ಸಾಲಿನಲ್ಲಿ ದಾವಣಗೆರೆ ಸೇರಿದಂತೆ 8 ಜಿಲ್ಲೆಗೆ ಜಲಧಾರೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X