Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂದಿನ ಫೆಬ್ರವರಿಯಲ್ಲಿ ಗುರುಪುರ...

ಮುಂದಿನ ಫೆಬ್ರವರಿಯಲ್ಲಿ ಗುರುಪುರ ಫಲ್ಗುಣಿ ನದಿಯ ಸೇತುವೆ ಲೋಕಾರ್ಪಣೆ

ಸಂಸದ ನಳಿನ್‌ರಿಂದ ಕಾಮಗಾರಿ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ22 Jun 2019 5:45 PM IST
share
ಮುಂದಿನ ಫೆಬ್ರವರಿಯಲ್ಲಿ ಗುರುಪುರ ಫಲ್ಗುಣಿ ನದಿಯ ಸೇತುವೆ ಲೋಕಾರ್ಪಣೆ

ಮಂಗಳೂರು, ಜೂ.22: ಗುರುಪುರದಲ್ಲಿ ಫಲ್ಗುಣಿ ನದಿಗೆ 39.42 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸ ಸೇತುವೆಯ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಫೆಬ್ರವರಿ ಅಂತ್ಯದೊಳಗೆ ಲೋಕಾರ್ಪಣೆಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಗುರುಪುರದಲ್ಲಿ ಶನಿವಾರ ಹೊಸ ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೊಸ ಸೇತುವೆ 175 ಮೀಟರ್ ಉದ್ದ, 16 ಮೀಟರ್ ಅಗಲವಿದೆ. ತಲಾ 27 ಮೀಟರ್‌ನ 7 ಅಂಕಣಗಳಿವೆ. 2.5 ಮೀ.ನ ಕಾಲುದಾರಿ ಒಳಗೊಂಡಿದೆ. ರಸ್ತೆ ಅಗಲ 11 ಮೀ. ಇದ್ದು, ಸೇತುವೆಯ ಎರಡೂ ಕಡೆ 500 ಮೀಟರ್‌ವರೆಗೆ ರಸ್ತೆ ವಿಸ್ತರಣೆಗೊಳ್ಳಲಿದೆ. ಇದರ ಕಾಮಗಾರಿಯ ಗುತ್ತಿಗೆಯನ್ನು ಮುಗ್ರೋಡಿ ಕನ್‌ಸ್ಟ್ರಕ್ಷನ್ ವಹಿಸಿಕೊಂಡಿದೆ. ಈ ವರ್ಷದ ಫೆ.21ರಂದು ಕಾಮಗಾರಿ ಆರಂಭಗೊಂಡಿದ್ದು, ಮುಂದಿನ ಫೆಬ್ರವರಿ ಅಂತ್ಯದೊಳಗೆ ಸೇತುವೆಯ ಲೋಕಾರ್ಪಣೆಗೊಳ್ಳಲಿದೆ ಎಂದು ನಳಿನ್ ತಿಳಿಸಿದರು.

ಕಾಮಗಾರಿಯು ಅತ್ಯಂತ ವೇಗದಲ್ಲಿ ನಡೆಯುತ್ತಿದೆ. ಇದೀಗ ಪಿಲ್ಲರ್ ಕೆಲಸ ಆಗಿದೆ. ಮಳೆಗಾಲದಲ್ಲಿ ಸ್ಲಾಬ್ ಅಳವಡಿಸುವ ಕಾರ್ಯ ನಡೆಯಲಿದೆ. ಕಾಮಗಾರಿ ಬಿಟ್ಟುಕೊಡಲು 2021ರ ಫೆ.20ರವರೆಗೆ ಕಾಲಾವಕಾಶವಿದೆ. ಆದರೆ ಹೊಸ ತಂತ್ರಜ್ಞಾನದಿಂದ ಕಾಮಗಾರಿಯು ವೇಗ ಪಡೆಯುತ್ತಿವೆ. ಹಾಗಾಗಿ 2020ರ ಫೆಬ್ರವರಿ ಅಂತ್ಯದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ನಳಿನ್ ನುಡಿದರು.

ಮೂಲರಪಟ್ಣ ಸೇತುವೆ ಕುಸಿದಾಗ ಗುರುಪುರ ಸೇತುವೆಯ ಬಗ್ಗೆಯೂ ಕೆಲವರು ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಿಂದ ತಜ್ಞರನ್ನು ಕರೆಸಿ ಸಾಮರ್ಥ್ಯ ಪರೀಕ್ಷೆ ನಡೆಸಲಾಗಿತ್ತು. ಹಳೆಯ ಸೇತುವೆಯನ್ನು ಇನ್ನೂ 10 ವರ್ಷಗಳ ಕಾಲ ಬಳಸಬಹುದು ಎಂದು ತಜ್ಞರು ತಿಳಿಸಿದ್ದರೂ ಕುಲಶೇಖರ-ಕಾರ್ಕಳ ಹೆದ್ದಾರಿ ಚತುಷ್ಪಥ ಹಿನ್ನೆಲೆಯಲ್ಲಿ ಹೊಸ ಸೇತುವೆ ಅವಶ್ಯಕತೆ ಇತ್ತು. ವಾಹನ ದಟ್ಟಣೆ ಹಿನ್ನೆಲೆಯಲ್ಲಿ ಬ್ರಿಟಿಷರ ಕಾಲದ ಗುರುಪುರ ಸೇತುವೆಯ ಬದಲಾಗಿ ಹೊಸ ಸೇತುವೆ ನಿರ್ಮಿಸುವಂತೆ ಸ್ಥಳೀಯ ಶಾಸಕ ಡಾ. ವೈ. ಭರತ್ ಶೆಟ್ಟಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಸಲ್ಲಿಸಿದ ಮನವಿಯಂತೆ ಕಾಮಗಾರಿಗೆ ಹಣ ಬಿಡುಗಡೆಗೊಂಡು ಶೀಘ್ರ ಟೆಂಡರ್ ನಡೆಯಿತು. ಕಾಮಗಾರಿ ಉತ್ತಮವಾಗಿ ನಡೆಯುತ್ತಿದೆ ಎಂದು ನಳಿನ್ ವಿವರಿಸಿದರು.

*ಕುಲಶೇಖರ-ಕಾರ್ಕಳ ಹೆದ್ದಾರಿ ಚತುಷ್ಪಥಕ್ಕೆ ಕೇಂದ್ರ ಸರಕಾರದ ಒಪ್ಪಿಗೆ ದೊರೆತಿದೆ. ಸರ್ವೆ ಕಾರ್ಯವೂ ಪೂರ್ಣಗೊಂಡಿದೆ. ಭೂಸ್ವಾಧೀನ ಪ್ರಕ್ರಿಯೆ ಮುಗಿದೊಡನೆ ಟೆಂಡರ್ ಆಗಲಿದೆ. 35 ಕಿ.ಮೀ. ಉದ್ದದ ರಸ್ತೆ 45 ಮೀ. ಅಗಲದಲ್ಲಿ 800 ಕೋ.ರೂ. ವೆಚ್ಚದಲ್ಲಿ ಚತುಷ್ಪಥಗೊಳ್ಳಲಿದೆ. ಈ ಹೆದ್ದಾರಿಗೆ ಸಂಬಂಧಿಸಿದಂತೆ ಯೋಜನಾ ನಿರ್ದೇಶಕರ ಕಚೇರಿಯು ತುಮಕೂರಿನಿಂದ ಮಂಗಳೂರಿಗೆ ಸ್ಥಳಾಂತರವಾಗಿದೆ ಎಂದರು.

*ಬಿ.ಸಿ. ರೋಡ್-ಚಾರ್ಮಾಡಿ ಹೆದ್ದಾರಿಯ ಬಿ.ಸಿ.ರೋಡ್‌ನಿಂದ ಪುಂಜಾಲಕಟ್ಟೆವರೆಗೆ ಮೊದಲ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ. ಆರಂಭದ 3.65 ಕಿಮೀ. ನಾಲ್ಕು ಪಥದ ಕಾಂಕ್ರೀಟ್ ರಸ್ತೆ, ಬಳಿಕದ 16 ಕಿ.ಮೀ. ಫೇವರ್ ಫಿನಿಶ್ ದ್ವಿಪಥ ರಸ್ತೆ ನಿರ್ಮಾಣಗೊಳ್ಳುತ್ತಿದೆ. ಇದಕ್ಕಾಗಿ 159.70 ಕೋ.ರೂ. ಹಣ ಮಂಜೂರಾಗಿದ್ದು, 98.32 ಕೋ.ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಆಗಿದೆ. ಈ ಪೈಕಿ 6 ಕಿ.ಮೀ. ಕಾಮಗಾರಿ ನಡೆದಿದೆ. ಎರಡನೇ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆಗೆ 225 ಕೋ.ರೂ., ಮೂರನೇ ಹಂತದಲ್ಲಿ ಚಾರ್ಮಾಡಿಯಿಂದ ಕೊಟ್ಟಿಗೆ ಹಾರವರೆಗಿನ ರಸ್ತೆಗೆ 200 ಕೋ.ರೂ. ಡಿಪಿಆರ್ ಸಿದ್ಧಗೊಂಡಿದ್ದು, ಅನುಮೋದನೆಗಾಗಿ ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ನಳಿನ್ ತಿಳಿಸಿದರು.

 *ಕೇಂದ್ರಿಯ ರಸ್ತೆ ನಿಧಿ (ಸಿಆರ್‌ಎಫ್‌)ನಿಂದ ದ.ಕ. ಜಿಲ್ಲೆಗೆ ಮೂರು ಹಂತದಲ್ಲಿ ಅನುದಾನ ಬಂದಿದೆ. ಮೊದಲ ಹಂತದಲ್ಲಿ 14 ಕಾಮಗಾರಿಗೆ 65.4 ಕೋ.ರೂ. ಬಿಡುಗಡೆಗೊಂಡಿದ್ದು, 71 ಕಿಮೀ ರಸ್ತೆ ನಿರ್ಮಾಣವಾಗಿದೆ. ಎರಡನೇ ಹಂತದಲ್ಲಿ 8 ಕಾಮಗಾರಿಗೆ 55.5 ಕೋ.ರೂ. ಬಿಡುಗಡೆಗೊಂಡಿದ್ದು, 58 ಕಿಮೀ ರಸ್ತೆ ಪೈಕಿ ಶೇ.50 ಕಾಮಗಾರಿ ಆಗಿದೆ. ಮೂರನೇ ಹಂತದಲ್ಲಿ 4 ಕಾಮಗಾರಿಗೆ 25.5 ಕೋ.ರೂ. ಬಿಡುಗಡೆಗೊಂಡಿದ್ದು, 30 ಕಿ.ಮೀ. ರಸ್ತೆ ಕಾಮಗಾರಿ ಟೆಂಡರ್ ಹಂತದಲ್ಲಿದೆ.

*ಸಿಆರ್‌ಎಫ್‌ನಿಂದ ಕಳೆದ 2 ವರ್ಷದಲ್ಲಿ 23 ಕೋ.ರೂ. ವೆಚ್ಚದಲ್ಲಿ ಮಣಿಹಳ್ಳ, ನಿಡಗಲ್, ಚಾರ್ಮಾಡಿಯಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಡಾಮರೀಕರಣಕ್ಕಾಗಿ ಮಾಣಿ-ಮೈಸೂರು ಹೆದ್ದಾರಿಗೆ 25 ಕೋ.ರೂ., ಕುಲಶೇಖರ ಕಾರ್ಕಳ ಹೆದ್ದಾರಿಗೆ 10 ಕೋ.ರೂ., ಪುಂಜಾಲಕಟ್ಟೆ-ಚಾರ್ಮಾಡಿಗೆ 20 ಕೋ.ರೂ.ಬಿಡುಗಡೆಗೊಂಡಿದ್ದು, ಮಳೆಗಾಲ ಕಳೆದ ಬಳಿಕ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಡಾ. ವೈ. ಭರತ್ ಶೆಟ್ಟಿ, ಎಇಗಳಾದ ರಮೇಶ್, ಕೀರ್ತಿ ಅಮೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X