ಡ್ಯಾನ್ಸ್‌ಬಾರ್ ಮೇಲೆ ಸಿಸಿಬಿ ದಾಳಿ: ಯುವತಿಯರ ರಕ್ಷಣೆ

ಬೆಂಗಳೂರು, ಜೂ.22: ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಡ್ಯಾನ್ಸ್‌ಬಾರ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 38 ಮಹಿಳೆಯರನ್ನು ರಕ್ಷಿಸಿ, 27 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಮಹಿಳೆಯರನ್ನಿಟ್ಟು ಡ್ಯಾನ್ಸ್ ಬಾರ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತರ ಪೈಕಿ, ಲಕ್ಷ್ಮೀಕಾಂತ್ ಎಂಬಾತ ಡ್ಯಾನ್ಸ್ ಬಾರ್ ವ್ಯವಹಾರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ. ಮತ್ತೊಬ್ಬ ಶಂಕರ್ ಎಂಬಾತನಿಂದ 1.6 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಈ ಸಂಬಂಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
Next Story





