Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ...

4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ22 Jun 2019 8:33 PM IST
share
4 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು, ಜೂ.22: ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಸೇರಿ ನಾಲ್ಕು ಅಧಿಕಾರಿಗಳ ಕಚೇರಿ, ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದ ಪ್ರಕರಣ ಸಂಬಂಧ, ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಅಸಮತೋಲನ ಆಸ್ತಿ-ಪಾಸ್ತಿಗಳನ್ನು ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಿಸಿ, ರಾಜ್ಯದ 14 ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿ, ಶುಕ್ರವಾರ ಕಾರ್ಯಾಚರಣೆ ನಡೆಸಿದ್ದರು.

ಜಂಟಿ ಆಯುಕ್ತ: ವಿಭಾಗೀಯ ಸರಕು ಮತ್ತು ಸೇವಾ ಕಚೇರಿ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ಎಂ.ಬಿ.ನಾರಾಯಣಸ್ವಾಮಿ ಅವರ ಕುಟುಂಬಸ್ಥರ ಹೆಸರಿನಲ್ಲಿ ಕೋಲಾರ ನಗರ ವ್ಯಾಪ್ತಿಯಲ್ಲಿ 3 ಅಂತಸ್ಥಿನ ಮನೆ, ಬೆಂಗಳೂರಿನ ಮೇಡಹಳ್ಳಿಯಲ್ಲಿ 3 ನಿವೇಶನ, ಕೋಲಾರ ಮತ್ತು ಚಿಂತಾಮಣಿ ತಾಲೂಕಿನಲ್ಲಿ 45 ಎಕರೆ ಕೃಷಿ ಭೂಮಿ, 123 ಗ್ರಾಂ ಚಿನ್ನ, 1.310 ಕೆಜಿ ಬೆಳ್ಳಿ, 2 ಟ್ರ್ಯಾಕ್ಟರ್, 3 ಕಾರು, 10 ದ್ವಿಚಕ್ರ ವಾಹನ, 60 ಸಾವಿರ ಬ್ಯಾಂಕ್ ಠೇವಣಿ, ವಿಮೆ ಪಾಲಿಸಿಗಳು ಹಾಗೂ 13.53 ಲಕ್ಷ ಗೃಹೋಪಯೋಗಿ ವಸ್ತುಗಳ ದಾಖಲೆ ಪತ್ರ ಪತ್ತೆಯಾಗಿವೆ.

ರಾಮನಗರ ಜಿಲ್ಲೆಯ(ಬೆಂಗಳೂರು ಮಿಲ್ಕ್ ಯೂನಿಯನ್) ಬಮೂಲ್ ಉಪ ವ್ಯವಸ್ಥಾಪಕ ಡಾ.ಶಿವಶಂಕರ್ ಅವರ ಮತ್ತು ಕುಟುಂಬಸ್ಥರ ಹೆಸರಿನಲ್ಲಿ ರಾಮನಗರದಲ್ಲಿ ಮೂರು ಅಂತಸ್ಥಿನ ಮನೆ, 3 ನಿವೇಶನ, ಯಲಹಂಕದಲ್ಲಿ 1 ನಿವೇಶನ, ದೊಡ್ಡಬಳ್ಳಾಪುರದ ಲಕ್ಷ್ಮೀದೇವಿಪುರದಲ್ಲಿ 2 ಎಕರೆ 16 ಗುಂಟೆ ಕೃಷಿ ಭೂಮಿ, 530 ಗ್ರಾಂ ಚಿನ್ನ, ಕಾರು, ಬೈಕ್, 30.60 ಲಕ್ಷ ಬ್ಯಾಂಕ್‌ನಲ್ಲಿ ನಿಶ್ಚಿತ ಠೇವಣಿ ಮತ್ತು 5 ಲಕ್ಷ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಮೈಸೂರಿನ ಪಿರಿಯಾಪಟ್ಟಣ ಉಪ ವಿಭಾಗ ಪಂಚಾಯತ್ ರಾಜ್ ಇಲಾಖೆ ಸಹಾಯಕ ಅಭಿಯಂತರ ಅರ್ಶದ್ ಪಾಷಾ ಅವರ ಮತ್ತು ಕುಟುಂಬಸ್ಥರ ಹೆಸರಿನಲ್ಲಿ 2 ಮನೆ, 5 ನಿವೇಶನ, 7 ಎಕರೆ ಕೃಷಿ ಭೂಮಿ, 428 ಗ್ರಾಂ ಚಿನ್ನ, 235 ಗ್ರಾಂ ಬೆಳ್ಳಿ, 2 ಕಾರು, 1 ಬೈಕ್, 12.49 ಲಕ್ಷ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತದೆ.

ಹಾಸನ ವಿಶೇಷ ವಿಭಾಗದ ಪಿಬ್ಲ್ಯೂಡಿ ಇಲಾಖೆ ಸಹಾಯಕ ಅಭಿಯಂತರ ಎಚ್.ಎಸ್.ಚೆನ್ನೇಗೌಡ ಅವರ ಮತ್ತು ಕುಟುಂಬಸ್ಥರ ಹೆಸರಿನಲ್ಲಿ 1 ಮನೆ, 3 ನಿವೇಶನ, 3.6 ಎಕರೆ ಕೃಷಿ ಭೂಮಿ, 293 ಗ್ರಾಂ ಚಿನ್ನ , 2.484 ಕೆಜಿ ಬೆಳ್ಳಿ, ಕಾರು, ಬೈಕ್, ಎಲ್‌ಐಸಿ ವಿಮೆ, 15 ಲಕ್ಷ ಠೇವಣಿ, 1 ಲಾಕರ್ ಹಾಗೂ 10 ಲಕ್ಷ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿರುತ್ತದೆ.

ಈ ಬಗ್ಗೆ ತನಿಖೆ ಹಾಗೂ ಈಗಾಗಲೇ ದೊರೆತಿರುವ ದಾಖಲೆಗಳ ಪರಿಶೀಲನಾ ಕಾರ್ಯ, ಸಂಬಂಧಪಟ್ಟ ಮಾಹಿತಿ ಸಂಗ್ರಹಣೆ ಮುಂದುವರೆದಿದೆ ಎಂದು ಎಸಿಬಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X