ರೋಶನ್ ಬೇಗ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ

ಬೆಂಗಳೂರು, ಜೂ.22: ಶಾಸಕ ರೋಶನ್ ಬೇಗ್ ವಿರುದ್ಧ ಮಾನಹಾನಿ ಸುದ್ದಿಗಳನ್ನು ಪ್ರಸಾರ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.
'ನನ್ನ ಹಾಗೂ ನಮ್ಮ ಕುಟುಂಬದ ವಿರುದ್ಧವಾಗಿ ಆಕ್ಷೇಪಾರ್ಹವಾದ ವರದಿ ಪ್ರಕಟಿಸದಂತೆ ತಡೆಯಾಜ್ಞೆ ನೀಡಬೇಕು ಎಂದು ರೋಶನ್ ಬೇಗ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯವು, ರೋಷನ್ ಬೇಗ್ ಹಾಗೂ ಅವರ ಕುಟುಂಬದ ವಿರುದ್ಧ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಯಾವುದೇ ರೀತಿಯ ಮಾನಹಾನಿಕಾರಕ, ವ್ಯಂಗ್ಯವಾಗಿ ಚಿತ್ರಿಸುವ ವರದಿಗಳನ್ನು ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ.
Next Story





