ಗೋ ಕಳ್ಳಸಾಗಾಟ ತಡೆಯುವಂತೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ, ಜೂ.24: ಗೋವುಗಳ ಕಳ್ಳಸಾಗಾಟವನ್ನು ತಡೆಯುವಂತೆ ಆಗ್ರಹಿಸಿ ಕುರಿತು ವಿಶ್ವ ಹಿಂದು ಪರಿಷತ್ ಬಜರಂಗದಳ ಉಡುಪಿ ಜಿಲ್ಲಾ ಘಟಕ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿತು.
ಜಿಲ್ಲೆಯಲ್ಲಿ ನಿರಂತರವಾಗಿ ಗೋವುಗಳ ಅಕ್ರಮ ಕಳ್ಳ ಸಾಗಾಟ ನಡೆಯುತ್ತಿದ್ದು, ಸಮಾಜದ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಹಾಳು ಮಾಡುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ಎಸಗುತ್ತಿದ್ದಾರೆ. ಗೋ ಕಳ್ಳರಿಂದ ಬಡ ಕೃಷಿ ಕುಟುಂಬಗಳು ಬೀದಿ ಪಾಲಾಗುವ ಪರಿಸ್ಥಿತಿಯಲ್ಲಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಆದುದರಿಂದ ಪ್ರತಿ ಠಾಣಾ ವ್ಯಾಪ್ತಿಯ ದಲ್ಲಾಳಿಗಳು ಹಾಗೂ ಗೋ ಕಳ್ಳ ಸಾಗಾಟಗಾರರನ್ನು ಪತ್ತೆ ಹಚ್ಚಿ ಅವರ ಮೇಲೆ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಜಿಲ್ಲಾದ್ಯಂತ ಪೋಲೀಸ್ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಅನಧೀಕೃತ ಸಂಖ್ಯೆಯೊಂದಿಗೆ ಸಂಚರಿಸುವ ವಾಹನಗಳನ್ನ ಪರಿಶೀಲಿಸಿ ಗೋ ಹತ್ಯೆಯನ್ನು ತಡೆಯಬೇಕು ಎಂದು ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಮಂದಾರ್ತಿ, ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ಜಿಲ್ಲಾ ಗೋ ರಕ್ಷಾ ಪ್ರಮುಖ್ ದಿನೇಶ್ ಶೆಟ್ಟಿ ಹೆಬ್ರಿ, ಜಿಲ್ಲಾ ಸುರಕ್ಷಾ ಪ್ರಮುಖ್ ಮಹೇಶ್ ಶೆಣೈ ಬೈಲೂರು, ಉಡುಪಿ ನಗರ ವಿಎಚ್‌ಪಿ ಅಧ್ಯಕ್ಷ ಸಂತೋಷ್ ಸುವರ್ಣ ಬೊಳ್ಜೆ, ಕುಂದಾಪುರ ವಿಎಚ್‌ಪಿ ಅಧ್ಯಕ್ಷ ವಿಜಯ್ ಶೆಟ್ಟಿ ಗೋಳಿ ಯಂಗಡಿ, ಉಡುಪಿ ನಗರ ಬಜರಂಗದಳ ಸಂಚಾಲಕ ಲೋಕೇಶ್ ಶೆಟ್ಟಿಗಾರ್ ಉಪಸ್ಥಿತರಿದ್ದರು.





