Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡಾನೆ ದಾಳಿ: ವಿದ್ಯಾರ್ಥಿಗೆ ಗಂಭೀರ ಗಾಯ

ಕಾಡಾನೆ ದಾಳಿ: ವಿದ್ಯಾರ್ಥಿಗೆ ಗಂಭೀರ ಗಾಯ

ವಾರ್ತಾಭಾರತಿವಾರ್ತಾಭಾರತಿ26 Jun 2019 11:17 PM IST
share
ಕಾಡಾನೆ ದಾಳಿ: ವಿದ್ಯಾರ್ಥಿಗೆ ಗಂಭೀರ ಗಾಯ

ಮಡಿಕೇರಿ, ಜೂ.26 : ಕಾಡಾನೆಯೊಂದರ ಹಠಾತ್ ದಾಳಿಗೆ ಸಿಲುಕಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊಬ್ಬ ಗಂಭೀರ ಗಾಯಗೊಂಡು, ಆತನ ಸಹಪಾಠಿಗಳು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿರುವ ಘಟನೆ ನಗರದಂಚಿನ ಬಿಟ್ಟಂಗಾಲ ಗ್ರಾಮದಲ್ಲಿ ನಡೆದಿದೆ.

ಬಿಟ್ಟಂಗಾಲ ಗ್ರಾಮದ ನಿವಾಸಿ ಬಿ.ಎ.ಸುಭಾಷ್ ಚಂದ್ರ ಮತ್ತು ನೇತ್ರಾವತಿ ದಂಪತಿಗಳ ಪುತ್ರ ಚಂದನ್ ಬಿ.ಎಸ್.(11) ಎಂಬಾತ ಗಾಯಗೊಂಡ ವಿದ್ಯಾರ್ಥಿ. ಕಾಡಾನೆ ದಾಳಿಯಿಂದ ಈತನ ತಲೆ ಮತ್ತು ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ  ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬಿಟ್ಟಂಗಾಲ ಗ್ರಾಮದ ಅಂಬಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಬೆಳಗ್ಗೆ ಸುಭಾಷ್‍ಚಂದ್ರ ಅವರ ಮಕ್ಕಳಾದ ಚಂದನ್, ಈತನ ಸಹೋದರ ಕೀರ್ತನ್, ತಂಗಿ ಶಾಲಿನಿ ಮತ್ತು ಸುಭಾಷ್ ಚಂದ್ರ ಅವರ ತಮ್ಮನ ಮಗ ಪವನ್ ಅವರು ತೆರಳುತ್ತಿದ್ದರು. ಇವರು ಶಾಲೆಗೆ ತೆರಳುವ ಮಾರ್ಗದ ಸಮೀಪದ ಆಲ್ಬರ್ಟ್ ಎಂಬವರ ತೋಟದಲ್ಲಿ ಐದು ಕಾಡಾನೆಗಳ ಹಿಂಡು ಬೀಡುಬಿಟ್ಟಿತ್ತು ಎನ್ನಲಾಗಿದೆ.

ಮಕ್ಕಳು ಶಾಲೆಯತ್ತ ಸಾಗುತ್ತಿದ್ದ ಸಂದರ್ಭ ಹಠಾತ್ತನೆ ಕಾಡಾನೆಯೊಂದು ಮಕ್ಕಳ ಮೇಲೆ ದಾಳಿ ನಡೆಸಿ, ಚಂದನ್‍ನನ್ನು ಸೊಂಡಿಲಿನಿಂದ ಎತ್ತಿ ಒಗೆದಿದೆ. ಈ ಹಂತದಲ್ಲಿ ಭಯಭೀತರಾದ ಸಹಪಾಠಿಗಳು ಜೋರಾಗಿ ಕಿರುಚಿಕೊಂಡು ಸ್ಥಳದಿಂದ ಓಡಿ ಅಪಾಯದಿಂದ ಪಾರಾಗಿ, ಸುತ್ತಮುತ್ತಲಿನ ಮನೆಮಂದಿಗೆ ವಿಷಯ ಮುಟ್ಟಿಸಿದರು.

ತಕ್ಷಣ ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಗಾಯಗೊಂಡು ಬಿದ್ದಿದ್ದ ಚಂದನ್‍ನನ್ನು ವೀರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು. ನಂತರ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಮಂಗಳೂರಿಗೆ ಕರೆದೊಯ್ಯಲಾಯಿತು.

ಅರಣ್ಯಾಧಿಕಾರಿಗಳ ಭೇಟಿ

ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಕೆ.ಗೋಪಾಲ್ ಮತ್ತು ಸಿಬ್ಬಂದಿಗಳು ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿ ಚಂದನ್‍ನ ಚಿಕಿತ್ಸಾ ವೆಚ್ಚವನ್ನು ಇಲಾಖೆಯ ವತಿಯಿಂದ ಭರಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಗ್ರಾಮಸ್ಥರ ಆಕ್ರೋಶ

ಬಿಟ್ಟಂಗಾಲ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿಲ್ಲ. ಕಾಡಾನೆಗಳ ದಾಳಿಗೆ ಒಳಗಾದವರಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಗ್ರಾಮಸ್ಥರಾದ  ದಾಮೋದರ್, ಸಣ್ಣಪ್ಪ, ರತನ್, ನವೀನ್ ಮಂದಣ್ಣ, ಮುತ್ತಪ್ಪ, ಸಂಜು ಯೋಗೇಶ್ ಮೊದಲಾದವರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X