Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅವರ ತಲೆ, ಕಣ್ಣಿಗೆ ಗುಂಡಿಕ್ಕಿದೆ’:...

‘ಅವರ ತಲೆ, ಕಣ್ಣಿಗೆ ಗುಂಡಿಕ್ಕಿದೆ’: ದಾಭೋಲ್ಕರ್ ಹತ್ಯೆ ಆರೋಪಿಯ ತಪ್ಪೊಪ್ಪಿಗೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು

“ಬಂದೂಕು ಬಳಕೆ, ಬಾಂಬ್ ತಯಾರಿ ತರಬೇತಿಯನ್ನೂ ನೀಡಲಾಗಿತ್ತು”

ವಾರ್ತಾಭಾರತಿವಾರ್ತಾಭಾರತಿ27 Jun 2019 3:32 PM IST
share
‘ಅವರ ತಲೆ, ಕಣ್ಣಿಗೆ ಗುಂಡಿಕ್ಕಿದೆ’: ದಾಭೋಲ್ಕರ್ ಹತ್ಯೆ ಆರೋಪಿಯ ತಪ್ಪೊಪ್ಪಿಗೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು

ಹೊಸದಿಲ್ಲಿ, ಜೂ.27: ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಆರು ವರ್ಷಗಳ ಹಿಂದೆ ಪುಣೆಯಲ್ಲಿ ಹತ್ಯೆಗೈದ ಆರೋಪದ ಮೇಲೆ ಬಂಧಿತನಾಗಿರುವ ಶರದ್ ಕಲಸ್ಕರ್ ತಾನು 67 ವರ್ಷದ ದಾಭೋಲ್ಕರ್ ಅವರ ತಲೆಗೆ ಒಮ್ಮೆ ಹಿಂದಿನಿಂದ ಹಾಗೂ ಅವರು ನೆಲಕ್ಕೆ ಕುಸಿದಾಗ ಅವರ ಬಲಗಣ್ಣಿನ ಮೇಲೆ ಗುಂಡಿಕ್ಕಿದ್ದಾಗಿ ವಿಚಾರಣಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ndtv.com ವರದಿ ಮಾಡಿದೆ.

ಒಟ್ಟು 14 ಪುಟಗಳ ಆತನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ತಾನು ವಿಚಾರವಾದಿ ಗೋವಿಂದ ಪನ್ಸಾರೆ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳಲ್ಲೂ ಶಾಮೀಲಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಕಳೆದ ವರ್ಷ ಬಂಧಿತನಾದ ಶರದ್ ಕಲಸ್ಕರ್ ವಿರುದ್ಧ ಕೊಲೆ ಹಾಗೂ ಕೊಲೆ ಸಂಚಿನ ಆರೋಪವಿದೆ. ಪುಣೆಯಲ್ಲಿ ಆಗಸ್ಟ್ 2013ರಲ್ಲಿ ದಾಭೋಲ್ಕರ್ ಹತ್ಯೆ ನಡೆದರೆ ಫೆಬ್ರವರಿ 2015ರಲ್ಲಿ ಗೋವಿಂದ್ ಪನ್ಸಾರೆ ಹಾಗೂ  ಅದೇ ವರ್ಷದ ಆಗಸ್ಟ್ ತಿಂಗಳಲ್ಲಿ ವಿದ್ವಾಂಸ ಎಂ ಎಂ ಕಲಬುರ್ಗಿಯವರ ಹತ್ಯೆ ನಡೆದಿತ್ತು.

ತನ್ನನ್ನು ಹಲವಾರು ಬಲಪಂಥೀಯ ಸಂಘಟನೆಗಳ ಸದಸ್ಯರು ಸಂಪರ್ಕಿಸಿದ್ದರು, ಅವರ ಸಿದ್ಧಾಂತದ ಬಗ್ಗೆ ಮಾಹಿತಿ, ಬಂದೂಕು ಬಳಕೆ ಹಾಗೂ ಬಾಂಬ್ ತಯಾರಿ ತರಬೇತಿಯನ್ನೂ ನೀಡಲಾಗಿತ್ತು ಎಂದು ಕಲಸ್ಕರ್ ತನ್ನ ತಪ್ಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದ್ದಾನೆಂಬ ಮಾಹಿತಿಯಿದೆ.

ಕೊಲೆ ಮಾಡಬೇಕಾಗಿದೆ ಎಂದು ತನಗೆ ಹೇಳಲಾಗಿತ್ತು ಎಂದು ಆತ ತಿಳಿಸಿದ್ದಾನೆ. ``ನಾವು ಕೆಲವೊಂದು ಕೆಟ್ಟ ಜನರನ್ನು ಮುಗಿಸಬೇಕಾಗಿದೆ'' ಎಂದು ತನಗೆ  ವೀರೇಂದ್ರ ತಾವ್ಡೆ ಹೇಳಿದ್ದನೆಂದು ಕಲಸ್ಕರ್ ಬಾಯ್ಬಿಟ್ಟಿದ್ದಾನೆ. ತಾವ್ಡೆ ಪ್ರಮುಖ  ಸಂಚುಕೋರನೆಂದು ಗುರುತಿಸಲಾಗಿದ್ದು, ಆತ ಈ ಕೊಲೆಗಳನ್ನು ನಡೆಸುವ ಸಲುವಾಗಿ ಹಲವರ ಮನಃಪರಿವರ್ತನೆ ನಡೆಸಿದ್ದನೆಂಬ ಆರೋಪವಿದೆ.

ಆತನನ್ನು ಕೂಡ ಸಿಬಿಐ ಈಗಾಗಲೇ ಬಂಧಿಸಿದೆ. ಕಲಸ್ಕರ್ ನೀಡಿದ ತಪ್ಪೊಪ್ಪಿಗೆ ಹೇಳಿಕೆ ಪ್ರಕಾರ ತಾವ್ಡೆ ಆತನಿಗೆ ಅಮೋಲ್ ಕಾಳೆಯ ಪರಿಚಯ ಮಾಡಿಸಿದ್ದ. ಕಾಳೆಯನ್ನು ಪೊಲೀಸರು ಗೌರಿ ಲಂಕೇಶ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಗೌರಿ ಹತ್ಯೆ ಸಂಚು ಹೂಡಲು ಸಂಘಟಿಸಲಾದ ಹಲವು ಸಭೆಗಳಲ್ಲಿ ತಾನು ಭಾಗವಹಿಸಿದ್ದಾಗಿಯೂ ಕಲಸ್ಕರ್ ಹೇಳಿದ್ದಾನೆ. ``ಆಗಸ್ಟ್ 2016ರಲ್ಲಿ ಬೆಳಗಾವಿಯಲ್ಲಿ ಸಭೆಯೊಂದು ನಡೆದಿತ್ತು ಹಾಗೂ ಇಲ್ಲಿ ಹಿಂದು ಧರ್ಮದ ವಿರುದ್ಧ ಕೆಲಸ ಮಾಡುವ ಜನರ ಹೆಸರುಗಳನ್ನು ಕೇಳಲಾಯಿತು. ಆ ಸಭೆಯಲ್ಲಿ ಗೌರಿ ಲಂಕೇಶ್ ಆವರ ಹೆಸರು ಕೇಳಿ ಬಂದು ಅವರ ಹತ್ಯೆಗೈಯ್ಯುವ ನಿರ್ಧಾರ ಕೈಗೊಳ್ಳಲಾಯಿತು,'' ಎಂದು ಆತ ತನಿಖಾಧಿಕಾರಿಗಳಿಗೆ ಹೇಳಿದ್ದಾನೆನ್ನಲಾಗಿದೆ. ಮುಂದೆ ಆಗಸ್ಟ್ 2017ರಲ್ಲಿ ಭರತ್ ಕುರ್ನೆ ನಿವಾಸವಿರುವ ಶಾಸ್ತ್ರಿನಗರದಲ್ಲಿ ಸಭೆ ನಡೆದು  ಅಂತಿಮ ನಿರ್ಧಾರ ಕೈಗೊಂಡು ಈ ಕಾರ್ಯದ ಜವಾಬ್ದಾರಿಯನ್ನು ಕೆಲವರಿಗೆ ವಹಿಸಲಾಗಿತ್ತೆಂಬ ಮಾಹಿತಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X