Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಕ್ಷಣ ಕ್ರಮ ಕೈಗೊಳ್ಳಲು ಕೇಂದ್ರ ರೈಲ್ವೆ...

ತಕ್ಷಣ ಕ್ರಮ ಕೈಗೊಳ್ಳಲು ಕೇಂದ್ರ ರೈಲ್ವೆ ಸಚಿವರ ಭರವಸೆ: ಸಂಸದ ನಳಿನ್

ಮಂಗಳೂರು-ಬೆಂಗಳೂರಿಗೆ ಪ್ರತಿನಿತ್ಯ ರೈಲು

ವಾರ್ತಾಭಾರತಿವಾರ್ತಾಭಾರತಿ27 Jun 2019 8:15 PM IST
share
ತಕ್ಷಣ ಕ್ರಮ ಕೈಗೊಳ್ಳಲು ಕೇಂದ್ರ ರೈಲ್ವೆ ಸಚಿವರ ಭರವಸೆ: ಸಂಸದ ನಳಿನ್

ಮಂಗಳೂರು : ಮಂಗಳೂರು-ಬೆಂಗಳೂರು ಮಧ್ಯೆ ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುವ ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲ್‌ನ್ನು ಪ್ರತಿನಿತ್ಯ ಓಡಿಸುವ ಕುರಿತು ತಕ್ಷಣ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಸಚಿವ ಪಿಯೂಶ್ ಗೋಯಲ್ ಭರವಸೆ ನೀಡಿರುವುದಾಗಿ ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರನ್ನು ನವದಿಲ್ಲಿಯಲ್ಲಿ ಗುರುವಾರ ಭೇಟಿಯಾದ ಸಂಸದ ನಳಿನ್‌ಕುಮಾರ್ ಕಟೀಲ್, ದ.ಕ. ಜಿಲ್ಲೆಯಲ್ಲಿ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳನ್ನು ಈಡೇರಿಸು ವಂತೆ ಸಚಿವರನ್ನು ವಿನಂತಿಸಿದ್ದಾರೆ.

ಮಂಗಳೂರಿಗೆ ಪ್ರತ್ಯೇಕ ಮಂಗಳೂರು ವಿಭಾಗ ರಚನೆ, ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ ನಿರ್ಮಾಣ ಹಾಗೂ ಇತರ ಮೂಲಸೌಕರ್ಯಗಳ ಅಭಿವೃದ್ಧಿ, ಮಂಗಳೂರು -ಬೆಂಗಳೂರು ಮಧ್ಯೆ ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುವ (ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್ 16585/86) ರೈಲ್‌ನ್ನು ಪ್ರತಿನಿತ್ಯ ಓಡಿಸುವುದು, ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ 3 ಮತ್ತು 4ನೇ ಪ್ಲಾಟ್ ಫಾರಂ ನಿರ್ಮಾಣ ಕಾಮಗಾರಿ ತ್ವರಿತಗೊಳಿಸಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.

 ಮಂಗಳೂರು-ಮೀರಜ್ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್ ರೈಲ್‌ನ್ನು ಪುನಾರಂಭಿಸಿ ಮುಂಬೈ (ಎಂಸಿಎಸ್‌ಟಿ) ವರೆಗೆ ವಿಸ್ತರಿಸುವುದು, ಮಂಗಳೂರು-ಪೂನಾ ಮಧ್ಯೆ ಹೊಸ ರೈಲ್‌ನ್ನು ಓಡಿಸುವುದು, ಮೂಕಾಂಬಿಕಾ ರೋಡ್ (ಬೈಂದೂರು) - ಕಾಸರಗೋಡು ರೈಲನ್ನು ಪುನಾರಂಭಿಸಿ ಗುರುವಾಯುರುವರೆಗೆ ವಿಸ್ತರಿಸುವುದು, ಟ್ರೇನ್ ನಂ.16515/16 ಕಾರವಾರ-ಯಶವಂತಪುರ (ಮಂಗಳೂರು ಜಂಕ್ಷನ್ ಮೂಲಕ) ಮಧ್ಯೆ ಸಂಚರಿಸುವ ಹಗಲು ರೈಲನ್ನು ತಿರುಪತಿವರೆಗೆ ವಿಸ್ತರಿಸುವುದು, ಮಂಗಳೂರು-ತಿರುಪತಿ ಮಧ್ಯೆ ಹೊಸ ರೈಲು ಮಂಜೂರು ಮಾಡುವುದು, ಮಂಗಳೂರು-ಬೆಂಗಳೂರು ಮಧ್ಯೆ ಸಂಚರಿಸುವ ರೈಲುಗಳ ವೇಗ ಹೆಚ್ಚಿಸುವುದು, ಮಂಗಳೂರಿನಿಂದ ಉತ್ತರ ಭಾರತದ ಪವಿತ್ರ ತೀರ್ಥಕ್ಷೇತ್ರಗಳಾದ ವಾರಣಾಸಿ/ಪ್ರಯಾಗ್ ರಾಜ್/ ಗೋರಕ್‌ಪುರ ಸಂಪರ್ಕಿಸುವಂತೆ ಹೊಸ ರೈಲು ಮಂಜೂರು ಮಾಡಬೇಕು ಎಂದು ಮನವಿ ಮನವಿ ಮಾಡಿದ್ದಾರೆ.

ಸುಬ್ರಹ್ಮಣ್ಯ-ಸಕಲೇಶಪುರ ಹಳಿ ದ್ವಿಪಥ ಕಾಮಗಾರಿ ಕೈಗೆತ್ತಿಕೊಳ್ಳುವುದು, ಸುಬ್ರಹ್ಮಣ್ಯ ರೋಡ್ ರೈಲುನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಮಂಗಳೂರು- ಪುತ್ತೂರು- ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಹಾಗೂ ಕಾರವಾರ-ಬೆಂಗಳೂರು ರೈಲಿನ ವೇಳೆಯಲ್ಲಿ ಬದಲಾವಣೆ ಮಾಡುವುದು, ಮಂಗಳೂರು- ಕೋಯಂಬತ್ತೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ (22609/10) ರೈಲಿಗೆ ಗುರುವಾಯೂರಿಗೆ ಪ್ರಯಾಣಿಸುವ ಯಾತ್ರಿಗಳಿಗೆ ಅನುಕೂಲವಾಗುವಂತೆ ಕುಟ್ಟಿಪುರಂ ರೈಲು ನಿಲ್ದಾಣದಲ್ಲಿ ನಿಲುಗಡೆ ಒದಗಿಸಬೇಕು. ಕೋಯಂಬತ್ತೂರು- ಮಂಗಳೂರು ಜಂಕ್ಷನ್- ಜಬಲ್ಪುರ್ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಸಚಿವರಿಗೆ ಸಂಸದರು ಮನವಿ ಮಾಡಿದರು.

ಸಂಸದರ ಬೇಡಿಕೆಗಳನ್ನು ಪರಿಶೀಲಿಸಿದ ಸಚಿವರು, ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು. ಅಲ್ಲದೆ, ಮಂಗಳೂರು-ಬೆಂಗಳೂರು ಮಧ್ಯೆ ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುವ (ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್ 16585/86) ರೈಲನ್ನು ಪ್ರತಿನಿತ್ಯ ಓಡಿಸುವ ಕುರಿತು ತಕ್ಷಣ ಕ್ರಮ ಕೈಗೊಳ್ಳುವುದಾಗಿ ಸಂಸದರಿಗೆ ರೈಲ್ವೆ ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X