Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರವ್ ಮೋದಿ, ಸೋದರಿ ಪೂರ್ವಿಯ ನಾಲ್ಕು...

ನೀರವ್ ಮೋದಿ, ಸೋದರಿ ಪೂರ್ವಿಯ ನಾಲ್ಕು ಸ್ವಿಸ್‌ಬ್ಯಾಂಕ್ ಖಾತೆಗಳ ಮುಟ್ಟುಗೋಲು

ಖಾತೆಗಳಲ್ಲಿ ಒಟ್ಟು 283.16 ಕೋಟಿ ರೂ.

ವಾರ್ತಾಭಾರತಿವಾರ್ತಾಭಾರತಿ27 Jun 2019 10:02 PM IST
share
ನೀರವ್ ಮೋದಿ, ಸೋದರಿ ಪೂರ್ವಿಯ ನಾಲ್ಕು ಸ್ವಿಸ್‌ಬ್ಯಾಂಕ್ ಖಾತೆಗಳ ಮುಟ್ಟುಗೋಲು

   ಹೊಸದಿಲ್ಲಿ, ಮಾ.27: ಪಂಜಾಬ್ ನ್ಯಾಶನಲ್ ಬ್ಯಾಂಕ್‌ಗೆ 13 ಸಾವಿರ ಕೋಟಿ ರೂ. ವಂಚನೆ ಹಗರಣದ ಆರೋಪಿ ನೀರವ್ ಮೋದಿ ಹಾಗೂ ಆತನ ಸಹೋದರಿ ಪೂರ್ವಿ ಮೋದಿಗೆ ಸೇರಿದ ನಾಲ್ಕು ಸ್ವಿಸ್ ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯವು ಗುರುವಾರ ಮುಟ್ಟುಗೋಲು ಹಾಕಿದೆ. ಈ ನಾಲ್ಕು ಖಾತೆಗಳು ಒಟ್ಟು 283.16 ಕೋಟಿ ರೂ. ಮೌಲ್ಯದ ಹಣವನ್ನು ಹೊಂದಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

 ಈ ಹಣವು ಅಪರಾಧದ ಮೂಲಕ ಸಂಗ್ರಹವಾದ ಆದಾಯವಾಗಿದ್ದು, ಅದನ್ನು ಮುಟ್ಟುಗೋಲು ಹಾಕುವಂತೆ ಜಾರಿ ನಿರ್ದೇಶನಾಲಯವು ಮನವಿ ಮಾಡಿದ ಹಿನ್ನೆಲೆಯಲ್ಲಿ ಸ್ವಿಸ್ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.

    ಬ್ರಿಟನ್‌ಗೆ ಪರಾರಿಯಾಗಿದ್ದ 48 ವರ್ಷದ ನೀರವ್‌ಮೋದಿಯನ್ನು ಪ್ರಸಕ್ತ ಲಂಡನ್‌ನ ವ್ಯಾಂಡ್ಸ್‌ವರ್ತ್ ಜೈಲಿನಲ್ಲಿರಿಸಲಾಗಿದೆ. ಪಂಜಾಬ್ ನ್ಯಾಶನಲ್ ಬ್ಯಾಂಕ್ ವಂಚನೆ ಹಗರಣಕ್ಕೆ ಸಂಬಂಧಿಸಿ ನೀರವ್‌ನನ್ನು ತನಗೆ ಹಸ್ತಾಂತರಿಸಬೇಕೆಂದು ಭಾರತ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬ್ರಿಟಿಶ್ ಪೊಲೀಸರು ಆತನನ್ನು ಬಂಧಿಸಿದ್ದರು.

 ನೀರವ್ ರಿಮಾಂಡ್ ಅವಧಿ ಜುಲೈ 25ರವರೆಗೆ ವಿಸ್ತರಣೆ

 ಪಂಜಾಬ್ ನ್ಯಾಶನಲ್ ಬ್ಯಾಂಕ್‌ಗೆ ಕೋಟ್ಯಂತರ ರೂ. ವಂಚನೆ ಹಗರಣದ ಆರೋಪಿ ನೀರವ್ ಮೋದಿಗೆ ವಿಧಿಸಿರುವ ಜೈಲು ರಿಮಾಂಡ್‌ನ ಅವಧಿಯನ್ನು ಬ್ರಿಟನ್‌ನ ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಮುಂದಿನ ವಿಚಾರಣೆ ನಡೆಯಲಿರುವ ದಿನಾಂಕವಾದ ಜುಲೈ 25ರವರೆಗೆ ವಿಸ್ತರಿಸಿದೆ. ಈ ವರ್ಷದ ಮಾರ್ಚ್‌ನಿಂದ ಮೋದಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಪಂಜಾಬ್ ನ್ಯಾಶನಲ್ ಬ್ಯಾಂಕ್‌ಗೆ 13 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ವಂಚಿಸಿದ ಆರೋಪದಲ್ಲಿ ನೀರವ್‌ನನ್ನು ಬಂಧಿಸಲಾಗಿದೆ.

 ಇಂದು ತನ್ನನ್ನು ಇರಿಸಲಾಗಿರುವ ವ್ಯಾಂಡ್ಸ್‌ವರ್ತ್ ಜೈಲಿನಿಂದ ವಿಡಿಯೋ ಸಂಪರ್ಕದ ಮೂಲಕ ನೀರವ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನೀರವ್ ಅವರ ಜಾಮೀನು ಅರ್ಜಿಯನ್ನು ಬ್ರಿಟನ್ ನ್ಯಾಯಾಲಯ ತಳ್ಳಿಹಾಕಿರುವುದು ಇದು ನಾಲ್ಕನೆ ಸಲವಾಗಿದೆ. ತನ್ನ ಗಡಿಪಾರು ಕೋರಿ ಭಾರತ ಸಲ್ಲಿಸಿರುವ ಮನವಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮೋದಿಗೆ ಒದಗಿಸಲು ತನ್ನಿಂದ ಸಾಧ್ಯವಿರುವುದೆಲ್ಲವನ್ನೂ ಮಾಡುವುದಾಗಿ ನ್ಯಾಯಾಲಯ ಈ ಸಂದರ್ಭದಲ್ಲಿ ನೀರವ್‌ಗೆ ಭರವಸೆ ನೀಡಿತು. ತನ್ನ ವಿರುದ್ಧ ಭಾರತ ಸರಕಾರವು ದಾಖಲಿಸಿರುವ 5 ಸಾವಿರ ಪುಟಗಳ ದೋಷಾರೋಪಪಟ್ಟಿಯ ಪರಾಮರ್ಶೆ ನಡೆಸಲು ತನಗೆ ಲ್ಯಾಪ್‌ಟಾಪ್ ಒದಗಿಸುವಂತೆ ನೀವರ್‌ರ ನ್ಯಾಯವಾದಿಗಳ ತಂಡವು ನ್ಯಾಯಾಧೀಶರನ್ನು ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X