Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆನ್‌ಲಾಕ್ ಆಸ್ಪತ್ರೆಯ ಬಗ್ಗೆ ದೂರುಗಳ...

ವೆನ್‌ಲಾಕ್ ಆಸ್ಪತ್ರೆಯ ಬಗ್ಗೆ ದೂರುಗಳ ಮಹಾಪೂರ: 24 ಖಾಸಗಿ ಆಸ್ಪತ್ರೆಗಳ ಜತೆ ಶೀಘ್ರ ಸಭೆಗೆ ನಿರ್ಧಾರ

ಸದಸ್ಯರ ಅಹವಾಲು ಸಭೆಯಾದ ಜಿ.ಪಂ. ಸಾಮಾನ್ಯ ಸಭೆ!

ವಾರ್ತಾಭಾರತಿವಾರ್ತಾಭಾರತಿ27 Jun 2019 10:40 PM IST
share
ವೆನ್‌ಲಾಕ್ ಆಸ್ಪತ್ರೆಯ ಬಗ್ಗೆ ದೂರುಗಳ ಮಹಾಪೂರ: 24 ಖಾಸಗಿ ಆಸ್ಪತ್ರೆಗಳ ಜತೆ ಶೀಘ್ರ ಸಭೆಗೆ ನಿರ್ಧಾರ

ಮಂಗಳೂರು, ಜೂ.27: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣದಿಂದ ಕಳೆದ ಸುಮಾರು ಐದು ತಿಂಗಳ ಬಳಿಕ ಇಂದು ನಿಗದಿಯಾದ ಜಿ.ಪಂ. ಸಾಮಾನ್ಯ ಸಭೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಸದಸ್ಯರಿಂದ ಅಹವಾಲು ಸಲ್ಲಿಕೆಯ ಸಭೆಯಾಗಿ ಮಾರ್ಪಟ್ಟಿತ್ತು.

ಸಾಮಾನ್ಯ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಜರಾಗಿ, ನನಗೆ ಜಿಲ್ಲಾ ಪಂಚಾಯತ್ ಸದಸ್ಯರಿಂದ ಯಾವುದೇ ಸಮಸ್ಯೆಗಳು ಬಾರದ ಕಾರಣ ನಾನೇ ಸಭೆಗೆ ಹಾಜರಾಗಿರುವುದಾಗಿ ಹೇಳಿದರು. ಈ ಸಂದರ್ಭವನ್ನು ಉಪಯೋಗಿಸಿಕೊಂಡ ಸದಸ್ಯರೆಲ್ಲರೂ ಹಲವು ಅಹವಾಲು, ಸಮಸ್ಯೆಗಳನ್ನು ತೆರೆದಿಟ್ಟರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯರಿಂದ ಮುಖ್ಯವಾಗಿ ವೆನ್‌ಲಾಕ್ ಆಸ್ಪತ್ರೆಯ ಕುರಿತಂೆಯೇ ದೂರುಗಳು ವ್ಯಕ್ತವಾದವು.

ವೆನ್‌ಲಾಕ್ ಆಸ್ಪತ್ರೆಯಲ್ಲಿ ಆರೋಗ್ಯಶ್ರೀ, ಆಯುಷ್ಮಾನ್ ಭಾರತ್ ಮೊದಲಾದ ಯೋಜನೆಗಳಡಿ ಚಿಕಿತ್ಸೆ ಪಡೆಯಲು ರೋಗಿಗಳು ಪರದಾಡಬೇಕಾಗುತ್ತದೆ. ಜನಪ್ರತಿನಿಧಿಗಳು ಮೇಲಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ ವಹಿಸಲಾಗುತ್ತದೆ ಎಂಬುದಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜನಾರ್ದನ ಗೌಡ, ವಿನೋದ್ ಕುಮಾರ್, ಶಾಹುಲ್ ಹಮೀದ್, ಮಮತಾ ಗಟ್ಟಿ, ಧನಲಕ್ಷ್ಮಿ, ಮುಹ್ಮುದ್ ಮೊದಲಾದವರು ದೂರಿದರು.

ಈ ಸಂದರ್ಭ ಸಭೆಯಲ್ಲಿ ವೆನ್‌ಲಾಕ್ ಡಿಎಂಒ ರಾಜೇಶ್ವರಿ ದೇವಿ ಅನುಪಸ್ಥಿತರಿದ್ದು, ಅವರನ್ನು ಸಭೆಗೆ ಕರೆಸಲಾಯಿತು.
ಸದಸ್ಯರ ದೂರುಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮುಂದಿನ ವಾರ ಜಿಲ್ಲಾಧಿಕಾರಿಯ ಉಪಸ್ಥಿತಿಯಲ್ಲಿ ವಿವಿಧ ಸರಕಾರಿ ಯೋಜನೆಗಳು ಲಭ್ಯವಿರುವ ಜಿಲ್ಲೆಯ 24 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿಯನ್ನು ಕರೆಯಿಸಿ ಸಭೆ ಡೆಸುವುದಾಗಿ ಭರವಸೆ ನೀಡಿದರು.

ಆಯುಷ್ಮಾನ್ ಯೋಜನೆಗೆ ಸಂಬಂಧಿಸಿ 169 ತುರ್ತು ಚಿಕಿತ್ಸೆಗಳಿಗೆ ಸಂಬಂಧಿಸಿ ಖಾಸಗಿ ಆಸ್ಪತ್ರೆಯಲ್ಲಿ ಬಡ ರೋಗಿಗೆ ಚಿಕಿತ್ಸೆ ಒದಗಿಸಬೇಕಾದರೆ ವೆನ್‌ಲಾಕ್ ಆಸ್ಪತ್ರೆಯಿಂದ ಶಿಫಾರಸ್ಸು ಪತ್ರಕ್ಕಾಗಿ ರೋಗಿ ಅಥವಾ ಅವರ ಕುಟುಂಬವನ್ನು ಅಲೆದಾಡಿಸಬಾರದು. ಶಿಫಾರಸ್ಸಿನ ಅಗತ್ಯವಿದ್ದಲ್ಲಿ ಒದಗಿಸಬೇಕು. ಜಿಲ್ಲಾಸ್ಪತ್ರೆಯಾದ ವೆನ್‌ಲಾಕ್ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಸೌಲಭ್ಯ ಲಭ್ಯವಿಲ್ಲದಾಗ, ವ್ಯವಸ್ಥೆ ಇರುವ ಆಸ್ಪತ್ರೆಗೇ ರೋಗಿಯನ್ನು ಕಳುಹಿಸಬೇಕು. ಮಾತ್ರವಲ್ಲದೆ, ಆರೋಗ್ಯ ಮಿತ್ರನ ಮೂಲಕ ರೋಗಿ ಅಥವಾ ಅವರ ಕುಟುಂಬಕ್ಕೆ ಸಂಪೂರ್ಣ ಮಾಹಿತಿಯನ್ನು ಒದಗಿಸುವ ವ್ಯವಸ್ಥೆಯನ್ನು ಮಾಡಬೇಕು ಎಂದು ಡಿಎಂಒಗೆ ನಿರ್ದೇಶನ ನೀಡಿದರು.

ವೆನ್‌ಲಾಕ್ ಆಸ್ಪತ್ರೆಯಲ್ಲಿ ಬಡ ರೋಗಿಗಳ ತುರ್ತು ಚಿಕಿತ್ಸೆಗಾಗಿ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದಾಗ ಸೂಕ್ತ ಸ್ಪಂದನ ದೊರೆಯುವುದಿಲ್ಲ ಎಂಬ ಸದಸ್ಯರ ದೂರಿಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ.ಖಾದರ್, ಜಿಲ್ಲಾಸ್ಪತ್ರೆಯ ಸಮಿತಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರನ್ನು ಕೂಡಾ ಸೇರ್ಪಡೆಗೊಳಿಸಲಾಗುವುದು. ಯಾವುದೇ ಯೋಜನೆಗಳಿಗೆ ಸಂಬಂಧಿಸಿ ಕಾನೂನಾತ್ಮಕ ಬದಲಾವಣೆ ಆಗಬೇಕಿದ್ದಲ್ಲಿ ಅದನ್ನು ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಕ್ರವು ಕೈಗೊಳ್ಳಲಾಗುವುದು ಎಂದರು.

ವಿವಿಧ ಯೋಜನೆಗಳಿಗೆ ಒಳಪಡುವ ಆಸ್ಪತ್ರೆಗಳಲ್ಲಿ ಯಾವೆಲ್ಲಾ ಚಿಕಿತ್ಸೆಗಳು ರೋಗಿಗಳಿಗೆ ಲಭ್ಯವಿದೆ ಹಾಗೂ ಆರೋಗ್ಯ ಮಿತ್ರಗೆ ಸಂಬಂಧಿಸಿ ಕಿರು ಪುಸ್ತಕವನ್ನು ತಯಾರಿಸಿ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾ.ಪಂ. ಅಧ್ಯಕ್ಷರಿಗೆ ಒದಗಿಸುವಂತೆಯೂ ಆರೋಗ್ಯ ಇಲಾಖೆಗೆ ಸಚಿವು ಈ ಸಂದರ್ಭ ಸೂಚನೆ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿತಾ ಹೇಮನಾಥ್,ಯು.ಪಿ. ಇಬ್ರಾಹೀಂ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X