Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ರಾಮ ವಾಸ್ತವ್ಯದಿಂದ ಅಧಿಕಾರಿಗಳಿಗೆ ಹೊಸ...

ಗ್ರಾಮ ವಾಸ್ತವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Jun 2019 11:24 AM IST
share
ಗ್ರಾಮ ವಾಸ್ತವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಕುಮಾರಸ್ವಾಮಿ

ಬೀದರ್: ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಉಜಳಂಬದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವುದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದು ಅವರು ತಿಳಿಸಿದರು. ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದರು.

ಜನತಾ ದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ. ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.

ಯಾದಗಿರಿ, ರಾಯಚೂರ ಹಾಗೂ ಬೀದರ ಜಿಲ್ಲೆಗಳಲ್ಲಿ ಮಾಡಿದ ಗ್ರಾಮವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ  ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ. ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ತಿಳಿಸಿದರು.

ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಿಎಂ ಕಚೇರಿಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗವು ತಾಯಿ ಹೃದಯದಿಂದ ಕೆಲಸ ಮಾಡಿರುವುದು ಕೂಡ ನಮ್ಮ ಬಲವಾಗಿದೆ. ಇಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಿಎಂ ಕಚೇರಿಯಿಂದ ನೇರವಾಗಿ ಸೌಕರ್ಯ ಸಿಗಲಿದೆ ಎಂದು ತಿಳಿಸಿದರು.

2006ರಲ್ಲಿ ಇಷ್ಟು ದೊಡ್ಡಮಟ್ಟದ ಗ್ರಾಮ ವಾಸ್ತವ್ಯ ನಡೆದಿರಲಿಲ್ಲ. ಈ ಹಿಂದೆ ನಾವು ಹಳ್ಳಿಗೆ ಹೋಗೋದೇ ರಾತ್ರಿ 1 ಗಂಟೆಯಾಗುತ್ತಿತ್ತು. ಬರೀ ಅಧಿಕಾರಿಗಳೇ ಅರ್ಜಿ ಪಡೆಯುತ್ತಿದ್ದರು. ಈ ಹಿಂದೆ ನಡೆದ ಗ್ರಾಮವಾಸ್ತವ್ಯ ವೇಳೆ ಪರಿಹಾರ ಪಡೆದುಕೊಂಡವರು ಅದನ್ನು ಈಗಲೂ ನೆನಪಿಸುವುದು ಈಗ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದ ವೇಳೆ ಗೊತ್ತಾಗಿದೆ ಎಂದು ಅವರು ತಿಳಿಸಿದರು.

ಈ ವೇಳೆ ಸಚಿವರಾದ ಬಂಡೆಪ್ಪ ಖಾಶೆಂಪೂರ, ರಾಜಶೇಖರ ಪಾಟೀಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ್,ಇನ್ನೀತರ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X