ಮಂಗಳೂರು: ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು, ಜೂ. 28: ಜಿಲ್ಲೆಯ ನಡೆದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ ಉಳಾಯಿಬೆಟ್ಟು ನಿವಾಸಿ ಅನ್ಸಾರ್ ಎಂಬಾತನನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಈತ ಕೆಲವು ಸಮಯದಿಂದ ಪೊಲೀಸರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಉಳಾಯಿಬೆಟ್ಟುವಿನಲ್ಲಿ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.
ಈತನ ಮೇಲೆ ಕಳೆದ 7 ವರ್ಷಗಳಿಂದ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Next Story





