Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಸುರತ್ಕಲ್ ಫ್ಯಾಕ್ಟರಿಗೆ ನುಗ್ಗಿ...

​ಸುರತ್ಕಲ್ ಫ್ಯಾಕ್ಟರಿಗೆ ನುಗ್ಗಿ ಮ್ಯಾನೇಜರ್‌ಗೆ ಕೊಲೆ ಬೆದರಿಕೆ: ಪ್ರಕರಣ ದಾಖಲು

ಲಕ್ಷಾಂತರ ರೂ. ಮೌಲ್ಯದ ಸೊತ್ತು ನಾಶಪಡಿಸಿ, ನಗದು ಕಳವು- ಆರೋಪ

ವಾರ್ತಾಭಾರತಿವಾರ್ತಾಭಾರತಿ28 Jun 2019 7:31 PM IST
share

ಮಂಗಳೂರು, ಜೂ.28: ಸುರತ್ಕಲ್ ಸಮೀಪದ ಇಡ್ಯಾ ಗ್ರಾಮದ ಫ್ಯಾಕ್ಟರಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳ ಗುಂಪೊಂದು, ಫ್ಯಾಕ್ಟರಿಯಲ್ಲಿನ ಸೊತ್ತು ಸಹಿತ ನಗದು ಕಳವುಗೈದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಡ್ಯಾ ಗ್ರಾಮದ ಪ್ರೇಮ್‌ಸಾಗರ್-ಬಾಟ್ಲಿಂಗ್ ಆ್ಯಂಡ್ ಬೇವರೇಜಸ್ ಫ್ಯಾಕ್ಟರಿಯ ಮ್ಯಾನೇಜರ್ ಮ್ಯಾಕ್ಸಿಂ ಜೋಸೆಫ್ ನೊರೊನ್ಹ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಅನಿಲ್ ಹೆಗ್ಡೆ, ಅನ್ಸಿಲ್, ಮುಜೀಬ್, ನಾರಾಯಣ, ಉದಯ ಸಹಿತ ಒಂಬತ್ತು ಮಂದಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವಿವರ: ಫ್ಯಾಕ್ಟರಿಯ ಮಾಲಕ ಡ್ಯಾನಿ ಆಂತೋನಿ ಪೌಲ್ ಜೂ.22ರಂದು ವ್ಯವಹಾರ ನಿಮಿತ್ತ ದುಬೈಗೆ ತೆರಳಿದ್ದರು. ಈ ಮಧ್ಯೆ ಜೂ. 25ರಂದು ಬೆಳಗ್ಗೆ 8 ಗಂಟೆ ಸುಮಾರು ಫ್ಯಾಕ್ಟರಿಗೆ ಅಕ್ರಮ ಪ್ರವೇಶಿಸಿದ ಆರೋಪಿಗಳು, ಮ್ಯಾನೇಜರ್‌ಗೆ ಕೊಲೆ ಬೆದರಿಕೆ ಹಾಕಿ, ಫ್ಯಾಕ್ಟರಿಯ ಮಾಲಕರ ಕ್ಯಾಬೀನ್ ಫೈಬರ್ ಶೀಟ್‌ನ್ನು ಒಡೆದು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕ್ಯಾಬೀನ್‌ನಲ್ಲಿದ್ದ ಸಿಸಿಟಿವಿ, ಡಿವಿಆರ್, ಹಾರ್ಡ್‌ ಡಿಸ್ಕ್, ಮೂರು ಚಿನ್ನದ ಉಂಗುರ, 1.21 ಲಕ್ಷ ರೂ. ನಗದು, ಚೆಕ್‌ಪುಸ್ತಕ, ಮೊಬೈಲ್, ಜಿಎಸ್‌ಟಿ ಪೈಲ್ಸ್, ಮೂರು ಯುಎಸ್‌ಬಿ ಟೆಕ್ನಿಕಲ್ ಸ್ಪೆಸಿಫಿಕೇಶನ್ ಪೈಲ್ಸ್ ಹಾಗೂ ಗ್ರಾಹಕರು ನೀಡಿದ ಪೋಸ್ಟ್ ಪೇಮೆಂಟ್ ಚೆಕ್‌ಗಳನ್ನು ಕಳವುಗೈಯಲಾಗಿದೆ. ಜತೆಗೆ, ಫ್ಯಾಕ್ಟರಿಯ ಮುಂಭಾಗದ ಬೋರ್ಡ್‌ಗೆ ಬಣ್ಣ ಬಳಿದು ಕೃತ್ಯ ಎಸಗಲಾಗಿದೆ ಎಂದು ಡ್ಯಾನಿ ಆಂತೋನಿ ಪೌಲ್ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣ

ಕೊಲೆ ಬೆದರಿಕೆ ಆರೋಪ ಪ್ರಕರಣದ ಪ್ರಧಾನ ಆರೋಪಿ ಅನಿಲ್ ಹೆಗ್ಡೆ ವಿರುದ್ಧ ಸುರತ್ಕಲ್ ಠಾಣೆಯಲ್ಲಿ 2019ರ ಎಪ್ರಿಲ್ 28ರಂದು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಂಚನೆ ಪ್ರಕರಣ ದಾಖಲಾಗಿದೆ.

ಆಸ್ತಿ ವಿವಾದ: ಸುರತ್ಕಲ್ ಸಮೀಪದ ಫ್ಯಾಕ್ಟರಿಯ ಮಾಲಕ ಹಾಗೂ ಪ್ರಕರಣದ ಆರೋಪಿಗೆ ಈ ಮೊದಲೇ ಆಸ್ತಿ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವ್ಯಾಜ್ಯದ ವಿಚಾರಣೆ ನಡೆಯುತ್ತಿದೆ. ಆರೋಪಿಯು ತನಗೆ ಸೇರಿದ ಸೊತ್ತುಗಳನ್ನು ತೆಗೆದುಕೊಂಡು ಹೋಗಿದ್ದಾನೆ ಎನ್ನುವ ಮಾಹಿತಿ ಇದೆ. ಆರೋಪಿ ವಿರುದ್ಧ ಕಳವು ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506 (ಕೊಲೆ ಬೆದರಿಕೆ), 448 (ಅಕ್ರಮ ಪ್ರವೇಶ), 427 (ಆಸ್ತಿಹಾನಿ), 380 (ಕಳವು), 341 (ಕಾನೂನು ಕೈಗೆ ತೆಗೆದುಕೊಂಡ ಬಗ್ಗೆ), 149 (ಕಾನೂನುಬಾಹಿರ ಗುಂಪು ಕೂಡುವಿಕೆ) ಪ್ರಕಾರ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X