Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 94 ‘ಸಿ’, 94 ‘ಸಿಸಿ’ ಅಡಿ ಅರ್ಹ...

94 ‘ಸಿ’, 94 ‘ಸಿಸಿ’ ಅಡಿ ಅರ್ಹ ಮನೆಗಳಿಗೂ ಪರಿಹಾರ: ಕಂದಾಯ ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ28 Jun 2019 8:49 PM IST
share
94 ‘ಸಿ’, 94 ‘ಸಿಸಿ’ ಅಡಿ ಅರ್ಹ ಮನೆಗಳಿಗೂ ಪರಿಹಾರ: ಕಂದಾಯ ಸಚಿವ ದೇಶಪಾಂಡೆ

ಬೆಂಗಳೂರು, ಜೂ. 28: ಕೊಡಗು ಜಿಲ್ಲೆಯಲ್ಲಿ 94 ‘ಸಿ’ ಮತ್ತು 94 ‘ಸಿಸಿ’ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದು, ಸಕ್ರಮಕ್ಕೆ ಅರ್ಹತೆ ಪಡೆದಿದ್ದ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಗೊಳಗಾಗಿದ್ದರೆ ಅಂತಹ ಮನೆಗಳಿಗೂ ಪರಿಹಾರ ನೀಡಲು ಆದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಬರ ಪರಿಹಾರ ಕಾಮಗಾರಿ ಪರಿಶೀಲನೆಯನ್ನು ಕೈಗೊಂಡ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಸಂತ್ರಸ್ತರು ಹಾಗೂ ಅಧಿಕಾರಿಗಳು ಈ ವಿಷಯವನ್ನು ಸಚಿವರ ಗಮನಕ್ಕೆ ತಂದು ವಿನಂತಿಸಿದ್ದರು. ಇದಕ್ಕೆ ತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ದೇಶಪಾಂಡೆ, ಈ ಬಗ್ಗೆ ಸರಕಾರದಿಂದ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡಿದ್ದ ಹಲವು ಸಂತ್ರಸ್ತರು ಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಇವರು ಅರ್ಹತೆ ಪಡೆದಿದ್ದಾಗ್ಯೂ ಪ್ರವಾಹದಲ್ಲಿ ಮನೆ ಕೊಚ್ಚಿ ಹೋಗಿದ್ದರಿಂದ ಸೂಕ್ತ ಪರಿಹಾರ ದೊರಕದೆ ತೊಂದರೆಗೀಡಾಗಿದ್ದರು. ಈ ಆದೇಶದಿಂದಾಗಿ ಸಂತ್ರಸ್ತರಿಗೆ ಅನುಕೂಲ ಆಗಲಿದೆ ಎಂದು ಅವರು ವಿವರಿಸಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94‘ಸಿ’ ಮತ್ತು 94‘ಸಿಸಿ’ ಅಡಿ ಅರ್ಹವಿದ್ದರೆ ‘ಸಿ’ ಮತ್ತು ‘ಡಿ’ ವರ್ಗೀಕೃತ ಜಮೀನುಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿಕೊಂಡಿರುವ ವಾಸದ ಮನೆಗಳನ್ನು ಸಕ್ರಮಗೊಳಿಸಲು ಮತ್ತು ಕಂದಾಯ ಇಲಾಖೆಯ ಸುಪರ್ದಿಯಲ್ಲಿರುವ ‘ಸಿ’ ಮತ್ತು ‘ಡಿ’ ವರ್ಗೀಕೃತ ಜಮೀನುಗಳಲ್ಲಿ ಬಗರ್ ಹುಕುಂ ಅಡಿ ಸಕ್ರಮೀಕರಣ ಕೋರಿ ಬಾಕಿ ಇರುವ ಅರ್ಜಿಗಳನ್ನು ವಿಲೇ ಮಾಡಲು ಆದೇಶಿಸಲಾಗಿದೆ.

ಕಂದಾಯ ಸಚಿವರು ಇದೇ ದಿನ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಭೂ ಸರ್ವೇಕ್ಷಣಾ ಇಲಾಖೆಯು ಸೇರಿದಂತೆ ಇತರೆ ಸಂಸ್ಥೆಗಳ ನುರಿತ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿನ ಭೂ ಪರಿವರ್ತನೆ ವಿಷಯ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X