Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ಹೊಟೇಲ್ ಬಂದ್ ಮಾಡಿಸಿದ...

ಮಂಗಳೂರಿನ ಹೊಟೇಲ್ ಬಂದ್ ಮಾಡಿಸಿದ ಪ್ರತಿಭಟನಾಕಾರರು

ಕಾಸರಗೋಡಿನ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Jun 2019 9:37 PM IST
share
ಮಂಗಳೂರಿನ ಹೊಟೇಲ್ ಬಂದ್ ಮಾಡಿಸಿದ ಪ್ರತಿಭಟನಾಕಾರರು

ಮಂಗಳೂರು, ಜೂ.28: ನಗರದ ಬಂಟ್ಸ್ ಹಾಸ್ಟೆಲ್ ಸಮೀಪ ಕಾರ್ಯಚರಿಸುತ್ತಿರುವ ಪಾಪ್ ಟೆಟ್ಸ್ ಈಟೆರಿ ಹೊಟೇಲ್ ನಲ್ಲಿ ಆಹಾರ ಸೇವಿಸಿದ ಕೇರಳದ ಕಾಸರಗೋಡಿನ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಕಾಸರಗೋಡು ಜಿಪಂ ಸದಸ್ಯರೊಬ್ಬರು ಪ್ರತಿಭಟನೆ ನಡೆಸಿ, ಗುರುವಾರ ರಾತ್ರೋರಾತ್ರಿ ಹೊಟೇಲ್‌ನ್ನು ಬಂದ್ ಮಾಡಿಸಿದ್ದಾರೆ.

ಅಸ್ವಸ್ಥಗೊಂಡವರ ಪೈಕಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಪಾಪ್ ಟೆಟ್ಸ್ ಈಟೆರಿ ಹೊಟೇಲ್ ನಲ್ಲಿ ಜೂ. 23ರಂದು ಕಾಸರಗೋಡು ನಿವಾಸಿಗಳು ಆಹಾರ ಸೇವಿಸಿ ಸುಮಾರು 22ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಆರೋಪಿಸಿ ಕಾಸರಗೋಡು ಜಿಪಂ ಸದಸ್ಯರೊಬ್ಬರ ನೇತೃತ್ವದಲ್ಲಿ ಗುರುವಾರ ಹೊಟೇಲ್‌ಗೆ ಆಗಮಿಸಿದ ಸಂತ್ರಸ್ತರು ಈ ಬಗ್ಗೆ ಪ್ರಶ್ನಿಸಿದ್ದರು. ಆದರೆ ಹೊಟೇಲ್ ಮಾಲಕತ್ವದಿಂದ ಸೂಕ್ತ ಉತ್ತರ ಸಿಕ್ಕಿರಲಿಲ್ಲ. ಇದರಿಂದ ಆಕ್ರೋಶಗೊಂಡ ಸಂತ್ರಸ್ತರು ರಾತ್ರಿ ಹೊಟೇಲ್ ಎದುರು ಪ್ರತಿಭಟನೆಗೆ ಮುಂದಾದರು.

ನಂತರ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಹಿರಿಯ ಆರೋಗ್ಯ ಅಧಿಕಾರಿ ಮಂಜಯ್ಯ ಶೆಟ್ಟಿ ಎದುರು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ತೆರೆದಿದ್ದ ಹೊಟೇಲ್‌ನ್ನು ಬಂದ್ ಮಾಡಲಾಯಿತು. ಅಲ್ಲದೆ, ಪಾಲಿಕೆಯ ಆರೋಗ್ಯ ವಿಭಾಗದ ತಂಡ ಹೊಟೇಲ್‌ಗೆ ಬೀಗ ಹಾಕಿತು.

ವಿವಿಧ ಆಸ್ಪತ್ರೆಗಳಿಗೆ ದಾಖಲು

ಮಂಜೇಶ್ವರದ ಸ್ವರ್ಣೋದ್ಯಮಿ ಕುಟುಂಬ ಸೇರಿದಂತೆ ಹಲವು ಮಂದಿ ರವಿವಾರ ಈ ಹೊಟೇಲ್‌ನಲ್ಲಿ ಆಹಾರ ಸೇವಿಸಿ ತೆರಳಿದ್ದರು. ಬಳಿಕ ಆಹಾರ ಸೇವಿಸಿದ ಎಲ್ಲರೂ ಅಸ್ವಸ್ಥರಾಗಿದ್ದರು. ಇವರಲ್ಲಿ ಹಲವರು ಕಲ್ಲಡ್ಕ, ದೇರಳಕಟ್ಟೆ ಹಾಗೂ ಕಾಸರಗೋಡಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಅಸ್ವಸ್ಥಗೊಂಡವರ ಪೈಕಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಸಂತ್ರಸ್ತ ಕುಟುಂಬದ ಮೂಲಗಳು ತಿಳಿಸಿವೆ.

ಹೊಟೇಲ್‌ವೊಂದರಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದೇವೆ. ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದೇವೆ.

- ಹೆಸರು ಬಹಿರಂಗಪಡಿಸಲು ಇಚ್ಛಿಸದ ಸಂತ್ರಸ್ತ

ಮಂಗಳೂರಿನ ಹೊಟೇಲ್‌ವೊಂದರಲ್ಲಿ ಆಹಾರ ಸೇವಿಸಿದ ಕೇರಳದ ಕಾಸರಗೋಡಿನ ಹಲವು ಮಂದಿ ಅಸ್ವಸ್ಥಗೊಂಡಿದ್ದರು. ಘಟನೆ ಇತ್ತೀಚೆಗೆ ನಡೆದಿದ್ದು, ಗುರುವಾರ ತಮ್ಮ ಗಮನಕ್ಕೆ ಬಂದಿತ್ತು. ಕೂಡಲೇ ಹೊಟೇಲ್‌ಗೆ ಬೀಗ ಹಾಕಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

- ಮಂಜಯ್ಯ ಶೆಟ್ಟಿ, ಹಿರಿಯ ಆರೋಗ್ಯಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X