ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಜೂ.28: 2019-20ನೇ ಸಾಲಿನಲ್ಲಿ ಯುಪಿಎಸ್‌ಸಿ/ ಕೆಪಿಎಸ್‌ಸಿ ಸ್ಪರ್ದಾತ್ಮಕ ಪರೀಕ್ಷೆಗಳನ್ನು ಬರೆಯಲು ಇಚ್ಚಿಸುವ ಅಲ್ಪಸಂಖ್ಯಾತ ಸಮುದಾಯದ ಅ್ಯರ್ಥಿಗಳಿಗೆ ಪೂರ್ವ ಕೋಚಿಂಗ್ ತರಬೇತಿ ಪಡೆಯಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನವಾಗಿದೆ. ಇಲಾಖೆಯ ವೆಬ್‌ಸೈಟ್ https://gokdom.kar.nic.in ನಲ್ಲಿ ನೀಡಲಾಗಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ನಿಬಂಧನೆ: ಅಭ್ಯರ್ಥಿ ಕರ್ನಾಟಕ ನಿವಾಸಿಯಾಗಿದ್ದು, ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಪಾರ್ಸಿ, ಬೌದ್ದ) ಸಮುದಾಯಕ್ಕೆ ಸೇರಿದ ವರಾಗಿರಬೇಕು. ಅ್ಯರ್ಥಿ ಯಾವುದಾದರೂ ಪದವಿಯನ್ನು ಪೂರ್ಣಗೊ ಳಿಸಿರಬೇಕು (ಯುಪಿಎಸ್‌ಸಿ/ಕೆಪಿಎಸ್‌ಸಿ ನಿಯಮದಂತೆ). ಕೌನ್ಸಿಲಿಂಗ್ ಸಂದರ್ಭದಲ್ಲಿ ಸಲ್ಲಿಸಲಾಗುವ ಎಲ್ಲ ದಾಖಲೆಗಳ ಮೂಲ ಪ್ರತಿಯನ್ನು ತರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್-https://gokdom.kar.nic.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ (0820-2574881)ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಿ, ಮಾಹಿತಿ ಪಡೆಯುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





