ಮಾಧ್ಯಮ ತರಬೇತಿ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಉಡುಪಿ, ಜೂ.28: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಡುಪಿ ಕಚೇರಿಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಇಬ್ಬರು ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನವಿರುವ ಮತ್ತು ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಮಹಿಳಾ ಅಭ್ಯರ್ಥಿಗಳಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ನೇಮಿಸಲಾಗುವುದು.
ಅಭ್ಯರ್ಥಿಗಳು ಪಡೆದಿರುವ ಅಂಕಗಳ ಆಧಾರದಲ್ಲಿ ಆಯ್ಕೆ ಮಾಡಲಾ ಗುವುದು.ಆಯಾ ಜಿಲ್ಲೆ ಅ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಅರ್ಹ ಅ್ಯರ್ಥಿಗಳು ಸಿಗದಿದ್ದಲ್ಲಿ ಪಕ್ಕದ ಜಿಲ್ಲೆಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಯೋಮಿತಿ 40 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ‘ಮಹಿಳಾ ಉದ್ದೇಶಿತ ಆಯವ್ಯಯದಡಿ ಮಹಿಳಾ ಅ್ಯರ್ಥಿ ಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ’ ಎಂದು ನಮೂದಿಸಿ ರಬೇಕು. ಆಯ್ಕೆಯಾದವರಿಗೆ ಮಾಸಿಕ 15 ಸಾವಿರ ರೂ. ಗೌರವಧನ ನೀಡಲಾ ಗುವುದು. ಇಲಾಖೆಯ ಕ್ಷೇತ್ರಪ್ರಚಾರ ಹಾಗೂ ವಾಧ್ಯಮ ಕ್ಷೇತ್ರದಲ್ಲಿ 9 ತಿಂಗಳ ಕಾಲ ಕಾರ್ಯನಿರ್ವಹಿಸಬೇಕಾಗುತ್ತದೆ.
ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಜು.4 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ (ದೂರವಾಣಿ: 0820-2524807, 2985242) ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







