ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಜೂ.28: ರಾಜ್ಯ ಸರಕಾರ ಅಲ್ಪಸಂಖ್ಯಾತರ ನಿರ್ದೇಶನಾಲಯ ದಿಂದ 2019-20ನೇ ಸಾಲಿಗೆ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಷ್ಟಿತ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತರ ಪದವಿ, ಪಿಎಚ್‌ಡಿ, ಪೋಸ್ಟ್ ಡಾಕ್ಟರೊಲ್‌ಕೋರ್ಸ್ ಇತ್ಯಾದಿಗಳಲ್ಲಿ ಉನ್ನತ ಶಿಕ್ಷಣ ಮುಂದುವರಿಸಲು ಆಸಕ್ತಿ ಇರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅಜಿಗರ್ಳನ್ನು ಆಹ್ವಾನಿಸಿದೆ.
ಅರ್ಜಿಯನ್ನು ಇಲಾಖಾ ವೆಬ್‌ಸೈಟ್-https://gokdom.kar.nic.in- ರಲ್ಲಿ ಆನ್‌ಲೈನ್ ಮೂಲಕ ಭರ್ತಿ ಮಾಡಿ, ಪ್ರಿಂಟ್ ಪಡೆದು ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ಅಂಚೆ ಅಥವಾ ನೇರವಾಗಿ ಅಲ್ಪಸಂಖ್ಯಾತ ನಿರ್ದೇಶನಾಲಯ, 20ನೇ ಮಹಡಿ, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಜುಲೈ 18ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22535900 ಅಥವಾ ಇ-ಮೇಲ್ oafnosqueries@gmail.com ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದೆ.





