ಗ್ರಾಮ ವಾಸ್ತವ್ಯ, ಜನತಾ ದರ್ಶನದಲ್ಲಿ 8 ಸಾವಿರ ಅರ್ಜಿ ಸ್ವೀಕಾರ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂ. 28: ‘ಎರಡು ದಿನಗಳ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಜನ ರಾತ್ರಿ 11 ಗಂಟೆಯ ವರೆಗೂ ನನ್ನ ಬಳಿ ಅವರ ನೋವನ್ನು ಹಂಚಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
‘ನಾನು ಅವರ ಬಹುತೇಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿದ್ದೇನೆ. ಇನ್ನು ಕೆಲವನ್ನು ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಹೇಳಿದ್ದಾರೆ.
Next Story





