Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜನಸಂಖ್ಯೆಗನುಗುಣವಾಗಿ ವಾರ್ಡ್‌ಗಳ...

ಜನಸಂಖ್ಯೆಗನುಗುಣವಾಗಿ ವಾರ್ಡ್‌ಗಳ ಮರುವಿಂಗಡನೆ: ಬಿಬಿಎಂಪಿಯಿಂದ ಕರಡು ಸಿದ್ಧ

ವಾರ್ತಾಭಾರತಿವಾರ್ತಾಭಾರತಿ28 Jun 2019 10:47 PM IST
share
ಜನಸಂಖ್ಯೆಗನುಗುಣವಾಗಿ ವಾರ್ಡ್‌ಗಳ ಮರುವಿಂಗಡನೆ: ಬಿಬಿಎಂಪಿಯಿಂದ ಕರಡು ಸಿದ್ಧ

ಬೆಂಗಳೂರು, ಜೂ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳನ್ನು ಜನಸಂಖ್ಯೆಯಾಧಾರಿತವಾಗಿ ಪುನರ್ ವಿಂಗಡನೆ ಪ್ರಕ್ರಿಯೆ ಆರಂಭಗೊಂಡಿದ್ದು, ಪಾಲಿಕೆ ಕರಡು ವರದಿಯನ್ನು ಸಿದ್ಧಪಡಿಸಿದೆ.

2007 ಕ್ಕೂ ಮೊದಲು ಬೆಂಗಳೂರು ಮಹಾನಗರ ಪಾಲಿಕೆ ಇದ್ದ ಸಂದರ್ಭದಲ್ಲಿ ನಗರದಲ್ಲಿ 100 ವಾರ್ಡ್‌ಗಳಿದ್ದವು. ಆದರೆ, 2007 ರಲ್ಲಿ ಏಳು ನಗರಸಭೆಗಳು, 1 ಪಟ್ಟಣ ಪಂಚಾಯತ್ ಹಾಗೂ 110 ಹಳ್ಳಿಗಳು ಸೇರಿದಂತೆ ಬಿಬಿಎಂಪಿಯನ್ನು ರಚನೆ ಮಾಡಿದರು. ಆ ಬಳಿಕ 100 ವಾರ್ಡ್‌ಗಳು ಪುನರ್‌ರಚನೆಗೊಂಡು 198 ವಾರ್ಡ್‌ಗಳಾದವು.

2015ರಲ್ಲಿ ಪಾಲಿಕೆ ಚುನಾವಣೆ ನಡೆಯುವ ಮೊದಲು 2001ರ ಜನಸಂಖ್ಯೆಗೆ ಅನುಗುಣವಾಗಿ ಮರುವಿಂಗಡನೆ ಮಾಡಬೇಕಿತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲವಾದ್ದರಿಂದ ಈಗ ಕೈಗೆತ್ತಿಕೊಂಡಿದೆ. ಅದರಂತೆ ಸರಾಸರಿ ಜನಸಂಖ್ಯೆ ಆಧಾರದಲ್ಲಿ ಹೊಸ ವಾರ್ಡ್‌ಗಳ ವ್ಯಾಪ್ತಿ ಎಷ್ಟಿರಬೇಕು, ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸ ವಾರ್ಡ್ ರಚಿಸಬೇಕು, ಎಲ್ಲಿ ಕಡಿಮೆ ಮಾಡಬೇಕು ಎಂಬ ಬಗ್ಗೆ ಪಾಲಿಕೆಯು ಕರಡನ್ನು ಸಿದ್ಧಪಡಿಸಿದ್ದು, ಶೀಘ್ರವೇ ವಿಂಗಡನೆಯಾಗಿ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದೆ.

ಮುಂದಿನ ವರ್ಷ ಪಾಲಿಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ವಾರ್ಡ್‌ಗಳ ಪುನರ್‌ವಿಂಗಡನೆ ಸಂಬಂಧ ರಾಜ್ಯ ಚುನಾವಣಾ ಆಯುಕ್ತರು ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜನಗಣತಿಯಾದ ಬಳಿಕ ವಾರ್ಡ್‌ಗಳ ಮರುವಿಂಗಡನೆಯಾಗಬೇಕು ಎಂದು ಸುಪ್ರೀಂಕೋರ್ಟ್‌ನ ಆದೇಶವೇ ಇದೆ. ಈ ನಿಟ್ಟಿನಲ್ಲಿ ಕಳೆದ ಚುನಾವಣೆಗೂ ಮೊದಲೇ ಪುನರ್‌ವಿಂಗಡೆಯಾಗಬೇಕಿತ್ತು, ಕಾರಣಾಂತರಗಳಿಂದ ಆಗಿಲ್ಲ. ಈಗ ಕರಡು ಸಿದ್ಧವಾಗಿದ್ದು, ಜಿಲ್ಲಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಇದರ ಪ್ರಾತ್ಯಕ್ಷಿಕೆ ನೀಡಲಾಗಿದೆ.

ಮುಂದಿನ ಒಂದು ವಾರದಲ್ಲಿ ಶಾಸಕರು ಹಾಗೂ ಬಿಬಿಎಂಪಿಯ ಎಲ್ಲ ವಾರ್ಡ್‌ಗಳ ಸದಸ್ಯರಿಗೆ ಪ್ರಾತ್ಯಕ್ಷಿತೆ ನೀಡಿ, ಚರ್ಚೆ ನಡೆಸಿದ ಬಳಿಕ ಅಗತ್ಯ ಮಾರ್ಪಾಡುಗಳೊಂದಿಗೆ ಆಗಸ್ಟ್‌ರೊಳಗೆ ಅಂತಿಮ ಕರಡು ಸಿದ್ಧವಾಗಲಿದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

13 ವಾರ್ಡ್‌ಗಳು ಬದಲಾಗಲ್ಲ: ಪ್ರಸ್ತುತವಿರುವ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಪ್ರತಿನಿಧಿಸಿರುವ ಜಯನಗರ(153) ಹಾಗೂ ಮಾಜಿ ಮೇಯರ್ ಸಂಪತ್ ರಾಜ್ ಪ್ರತಿನಿಧಿಸುವ ದೇವರ ಜೀವನಹಳ್ಳಿ ವಾರ್ಡ್‌ಗಳೂ ಸೇರಿದಂತೆ 13 ವಾರ್ಡ್‌ಗಳು ಬದಲಾಗುವುದಿಲ್ಲ ಎಂದು ಕರಡು ವರದಿಯಲ್ಲಿದೆ.

ವಿಜಯನಗರ, ಕೆಂಪಾಪುರ ಅಗ್ರಹಾರ, ಅತ್ತಿಗುಪ್ಪೆ(ವಿಜಯನಗರ ವಿಧಾನಸಭಾ ಕ್ಷೇತ್ರ), ನಾಯಂಡಹಳ್ಳಿ (ಗೋವಿಂದರಾಜನಗರ ಕ್ಷೇತ್ರ), ದೇವರಜೀವನಹಳ್ಳಿ (ಪುಲಕೇಶಿನಗರ ಕ್ಷೇತ್ರ),ಯಲಹಂಕ ಉಪನಗರ (ಯಲಹಂಕ ಕ್ಷೇತ್ರ), ಜಯನಗರ (ಚಿಕ್ಕಪೇಟೆ ಕ್ಷೇತ್ರ), ಶಾಂತಿನಗರ (ಶಾಂತಿನಗರ ಕ್ಷೇತ್ರ), ಬೆನ್ನಿಗಾನಹಳ್ಳಿ, ಸರ್ವಜ್ಞನಗರ (ಸಿ.ವಿ.ರಾಮನ್ನಗರ), ಈಜಿಪುರ (ಬಿಟಿಎಂ ಬಡಾವಣೆ ಕ್ಷೇತ್ರ), ಕಾಡುಗೊಂಡನಹಳ್ಳಿ, ಲಿಂಗರಾಜಪುರ (ಸರ್ವಜ್ಞನಗರ ಕ್ಷೇತ್ರ)ಗಳು ಈಗಿರುವ ಸ್ಥಿತಿ ಉಳಿಸಿಕೊಳ್ಳಲಿದ್ದು, ಉಳಿದ 185 ವಾರ್ಡ್‌ಗಳು ಮರು ವಿಂಗಡನೆಯಾಗಲಿವೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X