ಜು.18ಕ್ಕೆ ಜಯ ಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವ: ಪ್ರಮೋದಾದೇವಿ ಒಡೆಯರ್

ಮೈಸೂರು,ಜೂ.28: ಮೈಸೂರು ರಾಜ್ಯವನ್ನು ಆಳಿದ ಜಯ ಚಾಮರಾಜೇಂದ್ರ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ಮೈಸೂರು ಅರಮನೆಯಲ್ಲಿ ಜುಲೈ 18 ರಂದು ಹಮ್ಮಿಕೊಳ್ಳಲಾಗುವುದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು.
ಅರಮನೆಯ ಆವರಣದಲ್ಲಿ ಶುಕ್ರವಾ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ 20 ರಂದು ಬೆಂಗಳೂರು ಅರಮನೆಯಲ್ಲಿ ಜನ್ಮ ಶತಮಾನೋತ್ಸವ ಸಮಾರಂಭ ನಡೆಯಲಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ಹಲವು ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ದೆಹಲಿ, ಮುಂಬಯಿ ಸೇರಿದಂತೆ ಹಲವು ರಾಜ್ಯದ ರಾಜವಂಶಸ್ಥರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದಲ್ಲಿ ಒಡೆಯರ್ ಬಗ್ಗೆ ಹಲವು ಚರ್ಚಾ ಗೋಷ್ಠಿ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವರ್ಷ ಪೂರ್ತಿ ಮೂರು ತಿಂಗಳಿಗೆ ಒಮ್ಮೆ ಒಂದೊಂದು ಅರ್ಥ ಪೂರ್ಣ ಕಾರ್ಯಕ್ರಮ ನಡೆಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆಡಳಿತಾಧಿಕಾರಿ ಲಕ್ಷ್ಮಿನಾರಾಯಣ್ ಮತ್ತು ಸಲಹೆಗಾರರು ಉಪಸ್ಥಿತರಿದ್ದರು.
Next Story





