Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುದು ಗ್ರಾಪಂ ಸದಸ್ಯ ರಿಯಾಝ್ ಕೊಲೆಯತ್ನ...

ಪುದು ಗ್ರಾಪಂ ಸದಸ್ಯ ರಿಯಾಝ್ ಕೊಲೆಯತ್ನ ಪ್ರಕರಣ: ಮತ್ತೆ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ29 Jun 2019 5:59 PM IST
share
ಪುದು ಗ್ರಾಪಂ ಸದಸ್ಯ ರಿಯಾಝ್ ಕೊಲೆಯತ್ನ ಪ್ರಕರಣ: ಮತ್ತೆ ನಾಲ್ವರ ಬಂಧನ

ಉಡುಪಿ, ಜೂ.29: ಬಂಟ್ವಾಳ ತಾಲೂಕಿನ ಪುದು ಗ್ರಾಪಂ ಸದಸ್ಯ ಹಾಗೂ ಮೀನಿನ ವ್ಯಾಪಾರಿ ಕೆ.ಮುಹಮ್ಮದ್ ರಿಯಾಝ್(34) ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಸಹಿತ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ವಳಚ್ಚಿಲ್‌ನ ಮಹಮ್ಮದ್ ಆಶೀಕ್ ಕೋಚಿ(22), ಮಂಗಳೂರು ಮಾರ್ನಮಿಕಟ್ಟೆಯ ತೌಸೀರ್ ಪತ್ತೊಂಜಿ(25), ಅಡ್ಯಾರುಕಟ್ಟೆಯ ಮಹಮ್ಮದ್ ತೌಸಿಫ್ ಯಾನೆ ತಚ್ಚು(25), ವಳಚ್ಚಿಲ್ ನ ಮುಹಮ್ಮದ್ ಮುಸ್ತಾಕ್ ಯಾನೆ ಮಿಸ್ತಾ ಯಾನೆ ಬಾಬಿ(23) ಬಂಧಿತ ಆರೋಪಿಗಳು.
ಪ್ರಕರಣದ ಪ್ರಮುಖ ಆರೋಪಿ ಪರಂಗಿಪೇಟೆ ಪುದು ಗ್ರಾಮದ ಮುಹಮ್ಮದ್ ಇಸ್ಮಾಯಿಲ್(47), ಆತನ ಸಹೋದರ ಮುಹಮ್ಮದ್ ಗೌಸ್ (33), ಮಂಗಳೂರು ವಳಚ್ಚಿಲ್‌ನ ಅಬ್ದುಲ್ ಕೈಸ್(61), ಮೊಂಟುಗೋಳಿಯ ಮಹಮ್ಮದ್ ಮುನೀಜ್(21), ಬಂಟ್ವಾಳ ಮುಡಿಪುವಿನ ಅನ್ಸಾರ್ (22) ಎಂಬವರನ್ನು ಜೂ.10ರಂದು ಬಂಧಿಸಲಾಗಿತ್ತು.

ಮುಹಮ್ಮದ್ ಇಸ್ಮಾಯಿಲ್ ಈ ಕೃತ್ಯ ಎಸಗಲು ಇತರ ಆರೋಪಿಗಳಿಗೆ ಸುಪಾರಿ ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ. ಇವರಲ್ಲಿ ಆರೋಪಿ ಆಶೀಕ್ ಕೋಚಿ ಇನ್ನೋರ್ವ ಆರೋಪಿ ಅಬ್ದುಲ್ ಕೈಸ್ ಎಂಬಾತನ ಮಗ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಒಂದು ಲಾರಿ, ಒಂದು ಕಾರು ಹಾಗೂ 3 ತಲವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಮುಹಮ್ಮದ್ ತೌಸೀರ್ ವಿರುದ್ಧ ಬಂಟ್ವಾಳ ಗ್ರಾಮಾಂತರ, ಕಂಕನಾಡಿ ಪೊಲೀಸ್ ಠಾಣೆ, ಕದ್ರಿ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ಹಲ್ಲೆ ಮುಂತಾದ 5 ಪ್ರಕರಣಗಳು, ಮಹಮ್ಮದ್ ತೌಸಿಫ್ ವಿರುದ್ಧ ಮೇಲೆ ಕದ್ರಿ ಪೊಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ, ಪೂಂಜಾಲಕಟ್ಟೆ ಪೊಲೀಸ್ ಠಾಣೆ ಮತ್ತು ಮಂಗಳೂರು ಉರ್ವಾ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ದರೋಡೆ, ಕೊಲೆಯತ್ನ ಪ್ರಕರಣ ಹಾಗೂ ಮಹಮ್ಮದ್ ಮುಸ್ತಾಕ್ ವಿರುದ್ಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.

ಜೂ.7ರಂದು ಬೆಳಗಿನ ಜಾವ 4:30ರ ಸುಮಾರಿಗೆ ಮೀನು ವ್ಯಾಪಾರಕ್ಕಾಗಿ ಮಲ್ಪೆ ಬಂದರಿಗೆ ಆಗಮಿಸಿದ್ದ ಮಹಮ್ಮದ್ ರಿಯಾಝ್ ರವರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ, ಕತ್ತು, ಕೈ ಮತ್ತು ಕಾಲುಗಳಿಗೆ ತೀವ್ರ ತರಹದ ಗಾಯ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದರು. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪತ್ತೆಗಾಗಿ ಎಸ್ಪಿ ನಿಶಾ ಜೇಮ್ಸ್ ನಿರ್ದೇಶನದಂತೆ ಉಡುಪಿ ನಗರ ವೃತ್ತದ ಹಾಗೂ ಉಡುಪಿ ಡಿಸಿಐಬಿ ಅಧಿಕಾರಿ ಮತ್ತು ಸಿಬ್ಬಂದಿಯವರ 2 ಪ್ರತ್ಯೇಕ ತಂಡಗಳನ್ನು ರಚಿಸಿದ್ದು ಈ ಎರಡು ತಂಡಗಳು ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮತ್ತು ಉಡುಪಿ ಡಿವೈಎಸ್ಪಿ ಜೈಶಂಕರ್ ಟಿ.ಆರ್ ಮಾರ್ಗ ದರ್ಶನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X