Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಂದಿನ ಯಾವುದೇ ಚುನಾವಣೆಗೆ...

ಮುಂದಿನ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ29 Jun 2019 8:50 PM IST
share
ಮುಂದಿನ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಎಚ್.ಡಿ.ದೇವೇಗೌಡ

ಬೆಂಗಳೂರು, ಜೂ.29: ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿದ್ದು ಆಕಸ್ಮಿಕ. ಮುಂದಿನ ಯಾವುದೇ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಸಂಘಟನೆಗಾಗಿ ಇದುವರೆಗೂ ಸಾಕಷ್ಟು ಶ್ರಮಪಟ್ಟಿದ್ದೇನೆ. ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಹೀಗೆ ಎಲ್ಲ ವರ್ಗಗಳನ್ನು ಸಮಾನವಾಗಿ ಗುರುತಿಸುವ ಕೆಲಸ ಮಾಡಿದ್ದೇನೆ. ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶಿಸುತ್ತಾನೆಂದು ನಾನು ಎಣಿಸಿರಲಿಲ್ಲ ಎಂದು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸ್ಪರ್ಧಿಸಿ, ಒಬ್ಬ ಯುವಕನಾಗಿ ಶಕ್ತಿ ಮೀರಿ ಕೆಲಸ ಮಾಡಿ ಜನರ ಮನ ಗೆದ್ದಿದ್ದಾನೆ ಎಂದ ಅವರು, ದಿಲ್ಲಿಗೆ ಹೋಗುವಷ್ಟು ಶಕ್ತಿ ಈಗ ನನಗಿಲ್ಲ. ಇಲ್ಲಿನ ಪಕ್ಷದ ಕಚೇರಿಯಲ್ಲಿಂದುಕೊಂಡೇ ಎಲ್ಲವನ್ನು ಗಮನಿಸುವೆ. ಪಕ್ಷದ ದೃಷ್ಟಿಯಿಂದ ಇನ್ನೂ ಹೆಚ್ಚು ಕೆಲಸ ಮಾಡಬೇಕಿದೆ. ಅದಕ್ಕಾಗಿ ಪಾದಯಾತ್ರೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಹೀನಾಯವಾದ ಸೋಲು ಕಂಡಿದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಚೇತರಿಸಿಕೊಂಡಿದ್ದರೂ, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹವನ್ನು ಹೆಚ್ಚಿಸಿಲ್ಲ. ಪಕ್ಷಕ್ಕೆ ಬಲ ತುಂಬಲು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದ್ದು, ಈ ಸಂಬಂಧ ಚರ್ಚಿಸಲು ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ದೇವೇಗೌಡರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಸಭೆ ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಾದಯಾತ್ರೆಯಿಂದಾಗಿ ಮೈತ್ರಿ ಸರಕಾರಕ್ಕೆ ಅಪಾಯವಾಗಬಾರದು. ಇದನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಯ ಪಾದಯಾತ್ರೆ ಮಾಡಬೇಕು. ಒಂದು ತಿಂಗಳಿನೊಳಗೆ ಪಕ್ಷದ ಎಲ್ಲ ಘಟಕಗಳನ್ನು ಅಸ್ಥಿತ್ವಕ್ಕೆ ತರುತ್ತೇವೆ. ಪ್ರಾದೇಶಿಕ ಪಕ್ಷಗಳಿಲ್ಲದಿದ್ದರೆ, ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಉದಾಸೀನ ಮಾಡುತ್ತಾರೆ ಎಂದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷಕ್ಕೂ ಅಧಿಕ ದಿನವಾದವು. ಆದರೆ, ಸರಕಾರಕ್ಕೆ ಜನಪ್ರಿಯತೆ ಸಿಗುತ್ತಿಲ್ಲ. ಮುಖ್ಯಮಂತ್ರಿಯ ಸಾಲಮನ್ನಾ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಹತ್ತಿರವಾಗುತ್ತಿಲ್ಲ. ಹೀಗಾಗಿ, ಪಾದಯಾತ್ರೆ ಮೂಲಕ ಮೈತ್ರಿ ಸರಕಾರದ ಕಾರ್ಯಕ್ರಮಗಳನ್ನು, ಕುಮಾರಸ್ವಾಮಿ ಅವರ ಪ್ರಮುಖ ಯೋಜನೆಗಳನ್ನು ಜನರಿಗೆ ಹತ್ತಿರವಾಗಿಸಲು ಪ್ರಯತ್ನಿಸಲಾಗುತ್ತದೆ ಎಂದರು.

ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತಾ ಮಾತನಾಡಿ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಅವರು ಮಾಡಿದ ಅನ್ನಭಾಗ್ಯ ಯೋಜನೆ ಸೇರಿದಂತೆ ಹಲವು ಯೋಜನೆಗಳು ಅವರಿಗೆ ರಾಜಕೀಯ ಲಾಭವಾಗಿದೆ. ಆದರೆ, ಕುಮಾರಸ್ವಾಮಿಯ ಸಾಲ ಮನ್ನಾ ಯೋಜನೆ ಜೆಡಿಎಸ್‌ಗೆ ರಾಜಕೀಯ ಲಾಭವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ವಾರ್ಷಿಕವಾಗಿ ರೈತರಿಗೆ ಆರು ಸಾವಿರ ರೂ. ಘೋಷಣೆ ಮಾಡಿದ್ದರೂ, ಜನರು ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ ಎಂದ ಮೇಲೆ 46 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಜೆಡಿಎಸ್ ಪಕ್ಷಕ್ಕೆ ಯಾಕೆ ಜನ ಹತ್ತಿರವಾಗುತ್ತಿಲ್ಲ ಎಂದ ಅವರು, ಮುಂದಿನ ಚುನಾವಣೆಯು ಗೆಲುವಿನ ಬಗ್ಗೆ ಚಿಂತಿಸದೆ, ಲೋಕಸಭಾ ಚುನಾವಣೆ ಸೋಲಿನ ಬಗ್ಗೆ ಚಿಂತಿಸದೆ ಪಕ್ಷ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X