Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಸ ಸಂಸ್ಕರಣೆ, ಹಸಿ ಕಸ ಕಾಂಪೋಸ್ಟ್...

ಕಸ ಸಂಸ್ಕರಣೆ, ಹಸಿ ಕಸ ಕಾಂಪೋಸ್ಟ್ ಕುರಿತು ಬಿಬಿಎಂಪಿ ಮಹತ್ವದ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ29 Jun 2019 11:09 PM IST
share
ಕಸ ಸಂಸ್ಕರಣೆ, ಹಸಿ ಕಸ ಕಾಂಪೋಸ್ಟ್ ಕುರಿತು ಬಿಬಿಎಂಪಿ ಮಹತ್ವದ ಸುತ್ತೋಲೆ

ಬೆಂಗಳೂರು, ಜೂ.29: ರಾಜಧಾನಿಯಲ್ಲಿರುವ ಎಲ್ಲ ಸರಕಾರಿ ಕಚೇರಿಗಳು ಹಾಗೂ ಸರಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರ ಮನೆ ಕಸವನ್ನು ವಿಂಗಡಿಸದೆ, ಸಂಸ್ಕರಿಸದೆ ಹೊರ ಹಾಕುವಂತಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ.

ಹೀಗಾಗಿ, ನಗರದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳು ಹಾಗೂ ಅವುಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ ತಮ್ಮ ಮನೆಯಲ್ಲಿಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಕಸ, ಒಣ ಕಸ ಹಾಗೂ ಗೃಹ ನೈರ್ಮಲ್ಯಗಳು ಎಂದು ಮೂರು ಭಾಗಗಳಾಗಿ ಸಂಸ್ಕರಿಸಬೇಕು. ಅದರಲ್ಲಿ ಹಸಿ ಕಸವನ್ನು ಕಡ್ಡಾಯವಾಗಿ ಅಲ್ಲಿಯೇ ಕಾಂಪೋಸ್ಟ್ ಮಾಡಬೇಕು. ಆ ನಂತರ ಉತ್ಪತ್ತಿಯಾಗುವ ಸಂಸ್ಕರಿತ ಗೊಬ್ಬರವನ್ನು ಸಮೀಪದ ಉದ್ಯಾನಕ್ಕೆ ನೀಡಬೇಕಿದೆ.

ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ 5 ಸಾವಿರ ಟನ್‌ಗೂ ಹೆಚ್ಚು ಕಸ ಉತ್ಪತ್ತಿಯಾಗುತ್ತಿದ್ದು, ಇದರ ನಿರ್ವಹಣೆ ಪಾಲಿಕೆಗೆ ಜಟಿಲ ಸಮಸ್ಯೆಯಾಗಿದೆ. 2018-19ನೇ ಸಾಲಿನಲ್ಲಿ ಬಿಬಿಎಂಪಿ ಕಸ ಸಂಗ್ರಹ ಮತ್ತು ಸಾಗಣೆಗೆ 821 ಕೋಟಿ ರೂ. ಖರ್ಚು ಮಾಡಿದೆ. ಹಿಂದಿನ ಸಾಲಿಗೆ ಹೋಲಿಸಿದರೆ ಆ ಖರ್ಚು 100 ಕೋಟಿ ರೂ. ಹೆಚ್ಚಾಗಿದೆ. ಆದರೂ ನಗರದಲ್ಲಿ ಕಸ ಸಂಸ್ಕರಣೆ ಹಾಗೂ ವಿಲೇವಾರಿ ಸಮಸ್ಯೆ ಬಗೆಹರಿಯುತ್ತಿಲ್ಲ. ಹಾದಿ ಬೀದಿಯಲ್ಲಿ ಕಸದ ರಾಶಿ ಕಾಣತ್ತಿವೆ. ಕೆಲವೆಡೆ ಕಸ ಸೂಕ್ತ ರೀತಿಯಲ್ಲಿ ವಿಂಗಡಣೆ ಆಗುತ್ತಿಲ್ಲ. ಇನ್ನು ಕೆಲವೆಡೆ ವಿಂಗಡಿಸಿದರೂ ಕಸ ಸಂಗ್ರಹಿಸುವವರು ಮತ್ತೆ ಅದನ್ನು ಒಟ್ಟುಗೂಡಿಸುತ್ತಿದ್ದಾರೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮೊದಲು ಸರಕಾರಿ ವಲಯ ಮತ್ತದರ ನೌಕರರೇ ಕಸ ಸಂಸ್ಕರಣೆ ಹಾಗೂ ಕಾಂಪೋಸ್ಟ್ ಮಾಡಿ ಇತರರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಈ ನಿಯಮ ಮಾಡಲಾಗಿದೆ.

ಇತ್ತೀಚೆಗೆ ನಡೆದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ರಚಿಸಿರುವ ರಾಜ್ಯ ಮಟ್ಟದ ಸಮಿತಿಯ ಸಭೆಯಲ್ಲಿ ಬೆಂಗಳೂರಿನಲ್ಲಿ ಇಂದಿಗೂ ಶೇ.23ರಷ್ಟು ಮಾತ್ರ ಸಂಸ್ಕರಿಸಿದ ಕಸ ಸಂಗ್ರಹವಾಗುತ್ತಿದ್ದು, ಬಿಬಿಎಂಪಿ ಹಾಗೂ ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಸಮಿತಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದರು. ಜತೆಗೆ ಘನತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ 2016ರಲ್ಲಿ ರೂಪಿಸಿರುವ ನಿಯಮಾವಳಿಗಳನ್ನು ಜಾರಿಗೆ ತಂದು ಒಂದು ವೇಳೆ ಪಾಲಿಸದಿದ್ದರೆ ದಂಡ ವಿಧಿಸಲು ಸೂಚಿಸಿತ್ತು. ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದಾರೆ.

ಕಾಂಪೊಸ್ಟ್ ಕಡ್ಡಾಯ: ಕಚೇರಿ ಅಥವಾ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಮೊದಲು ಹಸಿ ಕಸ, ಒಣ ಕಸ ಹಾಗೂ ಗೃಹ ನೈರ್ಮಲ್ಯಗಳು ಎಂದು ಮೂರು ಭಾಗಗಳಾಗಿ ಸಂಸ್ಕರಿಸಬೇಕು. ಅದರಲ್ಲಿ ಹಸಿ ಕಸವನ್ನು ಬುಟ್ಟಿ, ಮಡಿಕೆ ಮಾದರಿಯ ಕಾಂಪೋಸ್ಟ್ ಬಿನ್‌ಗಳನ್ನಿಟ್ಟು ಅದರಲ್ಲಿ ಹಾಕುತ್ತಾ ಹಸಿ ಕಸದ ಪ್ರಮಾಣದಲ್ಲಿಯೇ ಕಸದ ಮೇಲೆ ಕೊಕೊ ಪುಡಿಯನ್ನು ಸಿಂಪಡಿಸಿ ಗೊಬ್ಬರವಾಗಿಸಬೇಕು.

ಬಳಿಕ ಅದನ್ನು ಕಚೇರಿ ಅಥವಾ ಮನೆಯ ಗಿಡಗಳಿಗೆ, ಕೈತೋಟಗಳಿಗೆ ಬಳಸಬೇಕು. ಒಂದು ವೇಳೆ ಕೈತೋಟ ಇಲ್ಲವಾದರೆ ಸಮೀಪದ ಉದ್ಯಾನಕ್ಕೆ ನೀಡಬೇಕು. ಉಳಿದಂತೆ ಬೇರ್ಪಡಿಸಿ ಒಣಕಸವನ್ನು ವಾರಕ್ಕೆ ಎರಡು ಬಾರಿ ಪಾಲಿಕೆ ವತಿಯಿಂದ ಒಣಕಸ ಸಂಗ್ರಹಣೆಗೆ ನಿಯೋಜಿಸಿರುವ ಟಿಪ್ಪರ್‌ಗಾಡಿಗಳಿಗೆ ಹಾಗೂ ಗೃಹ ಹಾನಿಕಾರಕ ಕಸವನ್ನು ಹಳದಿ ಚೀಲದಲ್ಲಿ ಸುತ್ತಿ ಪಾಲಿಕೆ ಕಸ ಸಂಗ್ರಹಿಸುವವರಿಗೆ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X