ಜು.3ರಂದು ಗೋ ಹತ್ಯೆ ನಿಷೇಧಕ್ಕೆ ಆಗ್ರಹಿಸಿ ಧರಣಿ
ಉಡುಪಿ, ಜೂ.29: ಗೋ ಹತ್ಯೆ ನಿಷೇಧ ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋ ಹತ್ಯೆಯನ್ನು ತಡೆಯಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ಜು.3ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ.
ಗೋ ಹತ್ಯೆ ತಡೆಗೆ ಮಂಗಳೂರು ಎಸ್ಪಿವಿಶೇಷ ತಂಡ ರಚಿಸಲು ತೀರ್ಮಾನಿಸಿದ್ದು, ಅದರಂತೆ ಉಡುಪಿ ಎಸ್ಪಿಕೂಡ ಗೊಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅದರ ತಡೆಗೆ ಜಿಲ್ಲಾಮಟ್ಟದಲ್ಲಿ ಒಂದು ವಿಶೇಷ ತಂಡ ರಚಿಸಬೇಕು ಎಂದು ಎಂದು ಬಜರಂಗದಳದ ಪ್ರಾಂತ ಸಂಯೋಜಕ ಕೆ.ಆರ್.ಸುನಿಲ್ ಸುದ್ದಿಗೋಷ್ಠಿಯಲ್ಲಿಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪ್ರಮೋದ್ ಮಂದಾರ್ತಿ, ಸಂತೋಷ್ ಸುವರ್ಣ ಬೊಳ್ಜೆ, ದಿನೇಶ್ ಮೆಂಡನ್, ದಿನೇಶ್ ಶೆಟ್ಟಿ, ಪ್ರಕಾಶ್ ಕುಕ್ಕೆಹಳ್ಳಿ ಉಪಸ್ಥಿತರಿದ್ದರು.
Next Story





