ಮಂಗಳೂರು: ಯುನಿವೆಫ್ ನಿಂದ ಹಜ್ ತರಬೇತಿ ಶಿಬಿರ

ಮಂಗಳೂರು: ಯುನಿವೆಫ್ ಕರ್ನಾಟಕ ಇದರ ದ.ಕ. ಘಟಕದ ವತಿಯಿಂದ ಹಜ್ ಪ್ರಾಯೋಗಿಕ ತರಬೇತಿ ಶಿಬಿರ ಕಂಕನಾಡಿಯ ಜಮೀಯತುಲ್ ಫಲಾಹ್ ಸಭಾಂಗನಣದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಯುನಿವೆಫ಼್ ಕರ್ನಾಟಕ ಅಧ್ಯಕ್ಷ ಮತ್ತು ಉಳ್ಳಾಲ ನಿಮ್ರಾ ಮಸೀದಿಯ ಖತೀಬ್ ರಫೀಉದ್ದೀನ್ ಕುದ್ರೋಳಿ ಹಜ್ ಮತ್ತು ಉಮ್ರಾದ ವಿಧಿವಿಧಾನಗಳನ್ನು ಪ್ರಾಯೋಗಿಕವಾಗಿ ಸವಿಸ್ತಾರವಾಗಿ ವಿವರಿಸಿದರು.
ಕಾರ್ಯದರ್ಶಿ ಯು.ಕೆ. ಖಾಲಿದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ತಾರ್ ಅಹ್ಮದ್ ಕಿರ್ ಅತ್ ಪಠಿಸಿದರು. ಜಿಲ್ಲಾಧ್ಯಕ್ಷ ಅಬ್ದುಲ್ಲಾ ಪಾರೆ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಹಜ್ ತರಬೇತಿ ಶಿಬಿರದ ಸಂಚಾಲಕ ನೌಫ಼ಲ್ ಹಸನ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಹಜ್ ಕರ್ಮದ ಬಗ್ಗೆ ಹಾಜಿಗಳ ಸಮಸ್ಯೆಗಳಿಗೆ ಅಂತರ್‍ರಾಷ್ಟ್ರೀಯ ವಿಧ್ವಾಂಸರ ಅಭಿಪ್ರಾಯಗಳನ್ನು ಉಲ್ಲೇಖಿಸಿ ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ಹಜ್ ಕರ್ಮದ ವಿವಿಧ ಆಯಾಮಗಳ ಛಾಯಾಚಿತ್ರ ಪ್ರದರ್ಶನವನ್ನು ಕೂಡಾ ಏರ್ಪಡಿಸಲಾಗಿತ್ತು. ಜಿಲ್ಲೆಯ ವಿವಿಧ ಕಡೆಗಳಿಂದ ಹಾಜಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.










