Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಯಾಳುಗಳನ್ನು ಆಸ್ಪತ್ರೆಗೆ...

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದವರಿಗೆ ಕಿರುಕುಳ ನೀಡುವಂತಿಲ್ಲ: ಎಸ್ಪಿ ನಿಶಾ ಜೇಮ್ಸ್

ವಾರ್ತಾಭಾರತಿವಾರ್ತಾಭಾರತಿ30 Jun 2019 5:01 PM IST
share
ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದವರಿಗೆ ಕಿರುಕುಳ ನೀಡುವಂತಿಲ್ಲ: ಎಸ್ಪಿ ನಿಶಾ ಜೇಮ್ಸ್

ಉಡುಪಿ, ಜೂ.30: ರಾಜ್ಯದಲ್ಲಿ ಕಳೆದ ವರ್ಷ ಜಾರಿಗೆ ಬಂದಿರುವ ಹೊಸ ಕಾನೂನು ಪ್ರಕಾರ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಸಾರ್ವ ಜನಿಕರಿಗೆ ಪೊಲೀಸರು ಹಾಗೂ ಆಸ್ಪತ್ರೆಯವರು ಯಾವುದೇ ರೀತಿಯಲ್ಲಿ ತೊಂದರೆ ನೀಡುವಂತಿಲ್ಲ. ಅವರನ್ನು ಒತ್ತಾಯ ಪೂರ್ವಕವಾಗಿ ಸಾಕ್ಷಿಯನ್ನಾಗಿ ಮಾಡಿದರೆ ಈ ಕಾನೂನಿನಲ್ಲಿ ಪೊಲೀಸರಿಗೆಯೇ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್, ಮಣಿಪಾಲ ಕೆಎಂಸಿಯ ಸೆಂಟರ್ ಫಾರ್ ಫಾರೆನ್ಸಿಕ್ ಕ್ಲಿನಿಕಲ್ ಸೆಂಟರ್ ಹಾಗೂ ಅನೆಸ್ತೇಸಿಯಾ ಮತ್ತು ಅರ್ಥೋಪೆಡಿಕ್ಸ್ ವಿಭಾಗದ ಸಹಯೋಗದಲ್ಲಿ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಮಣಿಪಾಲ ಕೆಎಂಸಿಯ ಟಿ.ಎಂ.ಎ.ಪೈ ಸಭಾಂಗಣದಲ್ಲಿ ರವಿವಾರ ಜಿಲ್ಲೆಯ ವಾಹನ ಚಾಲಕರುಗಳಿಗೆ ಆಯೋಜಿಸಲಾದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಸ್ತೆ ಅಪಘಾತ ಸಂಭವಿಸಿದಾಗ ಸ್ಥಳದಲ್ಲಿರುವವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ಕೂಡಲೇ ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಿದರೆ ತುಂಬಾ ಪ್ರಾಣ ಉಳಿಸಲು ಸಾಧ್ಯವಾಗುತ್ತದೆ. ಇದೊಂದು ಪುಣ್ಯದ ಕೆಲಸವಾಗಿದೆ ಎಂದ ಅವರು, ಆಸ್ಪತ್ರೆಗೆ ಸೇರಿದವರಲ್ಲಿ ಅಪಘಾತ ನಡೆದ ಸ್ಥಳ ಮತ್ತು ಸಮಯದ ಮಾಹಿತಿ ಬಿಟ್ಟರೆ, ಹೆಸರು, ದೂರವಾಣಿ ಸಂಖ್ಯೆ, ವಿಳಾಸವನ್ನು ಕೇಳುವಂತಿಲ್ಲ. ಸಹಾಯ ಮಾಡಿದ ವ್ಯಕ್ತಿಯ ಒಪ್ಪಿಗೆ ಇದ್ದರೆ ಮಾತ್ರ ಆ ಪ್ರಕರಣದಲ್ಲಿ ಸಾಕ್ಷಿಯಾಗಿ ಪರಿಗಣಿಸಲಾಗುತ್ತದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ವಿಶೇಷ ಕಾರ್ಯಾಚರಣೆ ನಡೆಸಿ ಹೆಲ್ಮೆಟ್ ಮತ್ತು ಸೀಟ್ ಬಿಲ್ಟ್ ಧರಿಸದವರ ವಿರುದ್ಧ ಕ್ರಮ ಜರಗಿಸಲಾಗಿದೆ. ಅದೇ ರೀತಿ ಈ ವಾರದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಶಾಲಾ ಮಕ್ಕಳನ್ನು ಸಾಗಿಸುವ ಮತ್ತು ಗೂಡ್ಸ್ ವಾಹನದಲ್ಲಿ ಜನರನ್ನು ಸಾಗಿಸುವ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಸುಪ್ರೀಂ ಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿಯ ಪ್ರಕಾರ ಅತಿವೇಗ, ಟ್ರಾಫಿಕ್ ಸಿಗ್ನಲ್ ಉಲ್ಲಂಘನೆ, ಮೊಬೈಲ್ ಬಳಕೆ, ಗೂಡ್ಸ್ ವಾಹನದಲ್ಲಿ ಜನರ ಸಾಗಾಟ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಚಾಲಕನ ಲೈಸನ್ಸ್ ವಶಪಡಿಸಿಕೊಂಡು ಮೂರು ತಿಂಗಳಲ್ಲಿ ಅಮಾನತುಗೊಳಿಸುವಂತೆ ಆರ್‌ಟಿಓಗೆ ಪತ್ರ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕೆಎಂಸಿ ಅರ್ಥೋಪೆಡಿಕ್ಸ್ ವಿಭಾಗದ ಪ್ರೊಫೆಸರ್ ಡಾ.ಶರತ್ ರಾವ್ ಮಾತನಾಡಿ, ಪ್ರಥಮ ಚಿಕಿತ್ಸೆ ಎಂಬುದು ಸಂಜೀವಿನಿಯಾಗಿದೆ. ಪ್ರಥಮ ಚಿಕಿತ್ಸೆಯಿಂದ ವ್ಯಕ್ತಿಯ ಪ್ರಾಣದ ಅಳಿವು ಉಳಿವಿನ ನಿರ್ಧಾರವಾಗುತ್ತದೆ. ಪ್ರಥಮ ಚಿಕಿತ್ಸೆ ಕಲಿಕೆಯನ್ನು ಪ್ರತಿಯೊಬ್ಬರಿಗೂ ಕಡ್ಡಾಯ ಮಾಡಿದರೆ ಇಡೀ ಸಮಾಜ ಅದರ ನೆರವು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಕೆಎಂಸಿಯ ಡೀನ್ ಡಾ.ಪ್ರಜ್ಞಾ ರಾವ್ ಉಪಸ್ಥಿತರಿದ್ದರು. ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಸ್ವಾಗತಿಸಿದರು. ಅನೆಸ್ತೇಸಿಯಾ ವಿಭಾಗದ ಪ್ರೊಫೆಸರ್ ಡಾ. ಅನಿತಾ ಶೆಣೈ ವಂದಿಸಿದರು. ಫಾರೆನ್ಸಿಕ್ ಕ್ಲಿನಿಕಲ್ ಸೆಂಟರ್‌ನ ಅಸೋಸಿಯೇಟ್ ಪ್ರೊ. ಡಾ. ಶಂಕರ್ ಕಾರ್ಯಕ್ರಮ ನಿರೂಪಿಸಿದರು.

ಈ ಕಾರ್ಯಾಗಾರದಲ್ಲಿ ಚಾಲಕರಿಗೆ ಅಪಘಾತ ಸಂಭವಿಸಿದಾಗ ಗಾಯಾಳು ಗಳಿಗೆ ನೀಡಬೇಕಾದ ಪ್ರಥಮ ಚಿಕಿತ್ಸೆ, ಆರೋಗ್ಯ ನಿರ್ವಹಣೆ, ಅಪಘಾತದ ನಂತರ ಸುವರ್ಣ ಅವಧಿಯ ಮಹತ್ವ, ಸಿಪಿಆರ್ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಯಿತು.

ಭಾರತದಲ್ಲಿ ಪ್ರತಿವರ್ಷ ಅಪಘಾತದಲ್ಲಿ 1.5 ಲಕ್ಷ ಮಂದಿ ಸಾಯುತ್ತಿದ್ದಾರೆ. ಅಂದರೆ ಪ್ರತಿ ಗಂಟೆಗೆ 400 ಮಂದಿ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈ ವರ್ಷ 130ಮಂದಿ ಅಪಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಆದುದರಿಂದ ಭಾರತದಲ್ಲಿ ಅಪಘಾತ ಎಂಬುದು ಬಹಳ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಪ್ರತಿಯೊಬ್ಬರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವುದರಿಂದ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.
-ನಿಶಾ ಜೇಮ್ಸ್, ಪೊಲೀಸ್ ಅಧೀಕ್ಷಕಿ, ಉಡುಪಿ ಜಿಲ್ಲೆ

ಪ್ರಥಮ ಚಿಕಿತ್ಸೆಯ ಅರಿವಿನಿಂದ ಅಪಾಯದ ಸಂದರ್ಭದಲ್ಲಿ ತನ್ನ ಪ್ರಾಣ ವನ್ನು ಕೂಡ ಉಳಿಸಿಕೊಳ್ಳಲು ಸಹಕಾರಿಯಾಗುತ್ತದೆ. ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬರು ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಶೇ.80ರಷ್ಟು ಯುವಕರಾಗಿದ್ದಾರೆ. ಅಪಘಾತಗಳಿಗೆ ರಸ್ತೆಗಳ ಪರಿಸ್ಥಿತಿ, ವಾಹನ ದಟ್ಟನೆ ಹಾಗೂ ನಿರ್ಲಕ್ಷತನದ ಚಾಲನೆಯೇ ಕಾರಣ. ಅಪಘಾತ ಸಂಭವಿಸಿದ ಒಂದು ಗಂಟೆ ಅವಧಿಯು ಸುವರ್ಣ ಅವಧಿಯಾಗಿರುತ್ತದೆ. ಈ ಸಮಯ ದೊಳಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ದೊರೆತರೆ ಪ್ರಾಣಾಪಾಯದಿಂದ ಪಾರಾಗಬಹುದಾಗಿದೆ.
-ಡಾ.ಶರತ್ ರಾವ್, ಪ್ರೊ. ಅರ್ಥೋಪೆಡಿಕ್ಸ್ ವಿಭಾಗ, ಮಣಿಪಾಲ ಕೆಎಂಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X