BREAKING NEWS - ಮಂಗಳೂರು: ವಿಮಾನ ನಿಲ್ದಾಣದಲ್ಲಿ ಜಾರಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ

ಮಂಗಳೂರು, ಜೂ.30: ದುಬೈನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್‌ಇಂಡಿಯಾ ಎಕ್ಸ್ ಪ್ರೆಸ್ ವಿಮಾನವೊಂದು ಲ್ಯಾಂಡಿಂಗ್ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಿಯಂತ್ರಣ ತಪ್ಪಿ ಜಾರಿದ್ದು, ಪ್ರಯಾಣಿಕರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದುಬೈನಿಂದ ಆಗಮಿಸಿದ ವಿಮಾನವು ರವಿವಾರ ಸಂಜೆ 5:30ರ ಸುಮಾರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುತ್ತಿದ್ದ ವೇಳೆ ರನ್ ವೇ ಸ್ಕಿಡ್ ಆಗಿ ಅವಘಡ ಸಂಭವಿಸಿದೆ. ವಿಮಾನದಲ್ಲಿದ್ದ 183 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.













